ಪುಟ:ಕವಿಯ ಸೋಲು.pdf/೨೪

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಮೋಕ್ಷಾಮೃತವದು ತುಂಬುವುದುಂಟೆ ?
ಕರ್ಮದ ಕಸವನು ಗುಡಿಸುವುದುಂಟೆ ?
ಧ್ಯಾನಿಸಿ ವನದಲ್ಲಿ ಸಾಧಿಸಿ ತಿಳಿದರು
ಉತ್ತಮ ತತ್ವವ ಹಿಂದಿನ ಜನರು
ಇಸ್ಲಾಂ ತತ್ವವ ಬಿತ್ತಿದವರು
ನಿಜದಲಿ ಬೆರೆಯುತ ಮುಕ್ತಿಯ ಪಡೆದರು
ತಿಳಿವನು ಜಗಕೆಲ್ಲಾ ಹರಡಿದರು.
ಕತ್ತಲೆಗೂಡಿದ ದೇಗುಲದಲ್ಲಿ
ಗೊಬ್ಬರ ತುಂಬಿದ ಕಗ್ಗವಿಯಲ್ಲಿ
ಕೊರಳನು ಬಿಗಿಯುವ ಸೆರೆಮನೆಯಲ್ಲಿ
ಮನಸಿನ ಕತ್ತಲೆ ಹರಿಯುವುದೆಲ್ಲಿ ?
ಉನ್ನತ ಭಾವಗಳೇರುವುದೆಲ್ಲಿ ?
ನೆಲಸಮ ಮಾಡಿರಿ ಕತ್ತಲೆ ಗೂಡನು
ಜಗಳವ ಬೆಳಸುವ ಭೇದದ ಬೀಡನು
ಕೂಡಲೆ ಹರಿವುದು ಬೆಳಕಿನ ಕಡಲು
ದಾಹವ ನೀಗುವ ಮುಕ್ತಿಯ ಕಡಲು
ವಿಶ್ವವ ಬೆಳಗುವ ದಿವ್ಯ ಜ್ಯೋತಿ
ಐಕ್ಯದ ಮಾರ್ಗವ ಬೆಳಗುವ ದೀಪ್ತಿ ;
ಒಂದೇ ಜಾತಿಯು ಒಂದೇ ಮತವು
ಶಕ್ತಿಯ ಗಳಿಸುವ ನಚ್ಚಿನ ಮತವು ;
ಒಂದೇ ದೇವರ ಮಕ್ಕಳು ನೀವು
ಸೋದರಭಾವದಿ ಕಲೆವುದು ನೀವು;
ಸೈತಾನ್ ಮಾಡಿದ ಮೋಸವ ತಿಳಿಯಿರಿ
ಒಟ್ಟಿಗೆ ಬದುಕುವ ಬುದ್ಧಿಯ ತಳೆಯಿರಿ
ಒಟ್ಟಿಗೆ ಕಲೆತರೆ ತುರುಕರು ನೀವು

೧೪