ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೨೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಭಕ್ತಿಯಿಂ ಸಾಧಿಸಿದ ಪೊಸ ಬಗೆಯ ಶಕ್ತಿಯಿಂ
ನಂಬುಗೆಯ ನೀಡಿರಯ್ಯ;
ಯೋಗದಿಂ ಗಳಿಸಿರುವ ದಿವ್ಯತರ ಶಕ್ತಿಯಂ
ಮೆರೆದೆಮ್ಮ ಸಲಹಿರಯ್ಯ,

ಕೌಶಿಕನ ಶಸ್ತ್ರಾಸ್ತ್ರಜಾಲಮಂ ವಾಸಿಷ್ಠ
ದಂಡವದು ನುಂಗಿತೆಂದು
ಹಿಂದಾದ ದೃಷ್ಟಗಳ ನಾವೆಲ್ಲ ಕೇಳಿಹೆವು
ಇಂದೇನು ಕಾಣೆವಯ್ಯ,

ಆಕಾಶಯಾನವಂ ಸುಟ್ಟು ಬಟ್ಟಡಬಹುದು
ಜಹಜುಗಳನದ್ದಬಹುದು
ಘೀಳಿಡುವ ಅಶನಿಗಳ ಬಾಯಿಮುಚ್ಚಿಸಬಹುದು
ಕತ್ತಿಗಳ ಮುರಿಸಬಹುದು.

ಕಲ್ಲನ್ನು ಜನರಾಗಿ ಜನರನ್ನು ಕಲ್ಲಾಗಿ
ಮಾರ್ಪಡಿಸಿ ತೋರಬಹುದು
ಏಕ ಕಾಲದಿ ನೀವು ಹಲವು ಕಡೆ ಕಾಣುತ್ತ
ಭೀತಿಯಂ ಬೀರಬಹುದು.

ಸತ್ತವರನೆಬ್ಬಿಸಲು ಬದುಕುವರ ಸಾಯಿಸಲು
ನೋಡಿ ನಂಬುವೆನಯ್ಯ,
ಮೂಢ ಮತಿಗಳು ನಾವು, ಬಡ ಜೀವಿಗಳು ನಾವು
ನಂಬುಗೆಯು ಸಾಲದಯ್ಯ.

೧೮