ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
ಕಣ್ಣನೀರು ಸುರಿವುದೇಕೆ
ಮನದಿ ದುಃಖವೇತಕೌ
ಆವ ಕಜ್ಜ ನಿನ್ನನೀಗ
ಕಾಡಿಗಿಲ್ಲಿ ತಂದಿತೌ."
'ತಾಯೆ' ಮಾತು ಕಿವಿಗೆ ಶೂಲ
ಕಾದ ಸೀಸವಾಗಲು
"ಏನು ಮಾತು ಕಲಿತೆ ನೀನು
ಏನು ಮಾತು ! ” ಎಂದಳು.
"ಏನು ಕಲಿತರೇನು ಫಲವು
ದೇವಗುರುವ ಪುತ್ರನು
ಕಲಿಯಲಿಲ್ಲ ನಲ್ಮೆವಾತು
ದೇವಯಾನಿ ಕಲಿಪಳು
ಎಳೆಯ ಗರುಕೆ ಸೊಂಪುಪಾಸು
ಮೇಲೆ ತಳಿರು ತೋರಣ
ಸಂಜೆಗೆಂಪಿನಾರತಿಯಲಿ
ನಲ್ಮೆವಾತು ಕಲಿಪಳು.
ಪ್ರಿಯಳು ಓಪಳೆಂಬ ಮಾತು
ನಿನ್ನ ಲೋಕದಿಲ್ಲವೆ?
ಚನ್ನೆ ರನ್ನೆ ಎಂಬ ಮಾತು
ಅಲ್ಲಿ ನುಡಿವರಿಲ್ಲವೆ?
೨೫