ಪುಟ:ಕವಿಯ ಸೋಲು.pdf/೩೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು


ಏನು ಲೋಕ ದೇವಲೋಕ!
ಹಿಗ್ಗಿ ಎಲ್ಲ ನುಡಿವರು
ಒಳ್ಳೆ ಮಾತು ನಲ್ಮೆವಾತು
ನುಡಿವ ಜಾಣರಿಲ್ಲವು.

ಬಹಳ ದೂರ ನಡೆದು ಬಂದು
ನಿನ್ನ ಕಾಲು ನೋವುದು
ಕಾಲನೊತ್ತಿ ನೋವು ತೆಗೆದು
ನಲ್ಮೆವಾತು ಕಲಿಪೆನು."

ಎಂದು ನುಡಿದು ದೇವಯಾನಿ
ಕಚನ ಮುಖವ ನೋಡಲು
ಮೃದು ಮೃಣಾಳ ಬಾಹುವಿಂದ
ಅವನ ಭುಜವ ಸೋಕಲು.

ಕಚನು ಸರಿದು ನುಡಿದ "ತಾಯೆ!
ಕಾಲುಗೀಲು ನೋಯದು.
ಕಾಡುಮೇಡು ತಿರುಗಿ ತಿರುಗಿ
ದಿನವು ಬಳಕೆಯುಂಟದು."

“ನಿನ್ನ ನೋವು ನಿನಗೆ ಅರಿದು
ನಾನು ಜಾಣೆ ಅರಿವೆನು.
ನಲ್ಮೆ ಕಣ್ಗೆ ಕಂಬುದೆಲ್ಲ
ಬರಿಯ ಕಣ್ಗೆ ಕಾಣದು."

೨೬