ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
ಇಂತು ನುಡಿಯೆ ದೇವಯಾನಿ
ಕಚನು ಎದ್ದು ನಿಂದನು.
"ಏಳು ತಾಯೆ, ಗುರು ಕುಮಾರಿ
ನಿನಗೆ ಕೈಯ ಮುಗಿವೆನು.
ಧರ್ಮವನ್ನು ನೀನು ಬಲ್ಲೆ
ಗುರುವು ಎನಗೆ ಪಿತನಲೆ
ಪಿತನ ಮಗಳು ಎನ್ನ ತಂಗಿ
ಜಾಣೆ ನೀನು ತಿಳಿಯದೆ."
ಎನಲು ಕಚನು, ದೇವಯಾನಿ
ಕಣ್ಣನೀರು ಸುರಿದಳು
"ಜಾಣತನದ ಮಾತು ಬೇಡ
ಧರ್ಮವನ್ನು ಬಲ್ಲೆನು.
ಹೆಣ್ಣು ಕೊಟ್ಟ ಮಾವನೊಬ್ಬ
ತಂದೆಯೆಂಬರಲ್ಲವೆ
ತಂದೆಯೆಂದರರ್ಥವೇನು
ಜಾಣ ನಿನಗೆ ತಿಳಿಯದೆ.
ನೀನೆ ಎನ್ನ ಜೀವಮಣಿಯು
ನೀನೆ ಎನ್ನ ದೈವವು
ಕಂಡ ದಿನವೆ ಮನದಿ ವರಿಸಿ
ನೀನೆ ಪತಿಯದೆಂದೆನು.
೩೦