ಪುಟ:ಕವಿಯ ಸೋಲು.pdf/೪೩

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪ್ರಕಟಿಸಲಾಗಿದೆ
ಯಾರು ಹೆಚ್ಚು ?

ಕಲ್ಲು ತಂದು ರೂಪುಮಾಡಿ
ದೇವನೆಂದು ಕರೆದು ನಿನ್ನ
ಎಲ್ಲ ಜಗದ ಒಡೆಯನಾಗಿ
ಕಾವುದೆಂದೆನು.

ಮೆಯ್ಯ ತೊಳೆದು ಹಾಲನೆರೆದು
ಹೂವು ಮುಡಿಸಿ ಗಂಧವಿಕ್ಕಿ
ತುಯ್ಯಲಿಟ್ಟು ದೀಪವಿಟ್ಟು
“ದೇವ” ಎಂದನು.

ನಾನು ಮಾಡೆ ನೀನು ಆದೆ
ನಾನು ಕಟ್ಟಿ ನಿನಗೆ ಗುಡಿಯು
ನಾನು ಒರೆಯೆ ನಿನಗೆ ತುತಿಯು
ನನೆ ಹಿರಿಯನು.

ಮರುಳನಂತೆ ಹಾಡಿ ಹಿಂದೆ
ಹಿರಿಯತನವ ಹರಿ ನಿನಗೆ
ಗರುವದೇವನೆಂದು ಕರೆದು
ಬಿರುದ ಹೊರಿಸಿದೆ.

3
೩೩