ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೪೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಇನಿತು ಕೃತಿಗಳೆನ್ನದಿರಲು
ಪುಣ್ಯ ಪಾಪ ಎಂಬ ಭಾರ
ಕರ್ಮಗಿರ್ಮ ಎಂಬ ಬಲೆಯ
ನೀನು ಹಾಕಿದೆ.

ನಾನು ತಗ್ಗಿ ತಗ್ಗಿ ನಡೆಯೆ
ನೀನು ಬೀಗಿ ಬೀಗಿ ಮೆರೆವೆ
ಮಾನವಿಲ್ಲ ನಿನಗೆ, ನೀನೆ
ಜಗದಿ ಭಂಡನು.

ದೇವನೆಂದು ನಿನ್ನ ಮಾಡಿ
ಜೀವದುಸಿರು ನಿನಗೆ ಕೊಟ್ಟು
ಸಾವುದಾಯ್ತು, ಎನ್ನ ಭೂತ
ಎನ್ನ ತಿಂದಿತು.

ನಿನ್ನ ಗುಡಿಯು ನಿನ್ನ ಮೂರ್ತಿ
ಕಲ್ಲು ಗುಡಿಯು ಕಲ್ಲು ಮೂರ್ತಿ
ಭಿನ್ನವಾಗೆ ನೊಂದು ನಾನು
ಅತ್ತು ಮರುಗುವೆ.

ಎಲ್ಲ ಜನರ ಹೃದಯದಲ್ಲಿ
ನೆಲಸಿಯವರ ಕಷ್ಟ ದುಃಖ
ನೋಡಿ ನೋಡಿ ಕರಗದಿರುವೆ
ಕಟುಕನಲ್ಲವೆ?

೩೪