ಪುಟ:ಕವಿಯ ಸೋಲು.pdf/೪೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಹಿರಿಯ ದಾನಿ

ಕುರುಡನೊಬ್ಬ ಕೋಲನೂರಿ
ಮರದ ಕೆಳಗೆ ನಿಂದಿರು
ಕರವ ನೀಡಿ ಬೇಡುತಿದ್ದ
ಪುರದ ಜನರನ್ನು,

"ಹುಟ್ಟು ಕುರುಡ ಕಾಸನೀಡಿ
ಹೊಟ್ಟೆಗಿಲ್ಲ ದಯವ ತೋರಿ
ಬಟ್ಟೆಯೆಂಬುದರಿಯೆ ” ಎಂದು
ಪಟ್ಟಣಿಗರನು.

ಬೇಡುತಿದ್ದ ದೈನ್ಯದಿಂದ
ಆಡುತಿದ್ದ ಶಿವನ ಮಾತ
"ಮಾಡಿರಯ್ಯ ಧರ್ಮವನ್ನು
ನೋಡಿ ಹೋಗದೆ."

ಬಂದರಲ್ಲಿ ಪುರದ ಜನರು
ಮಂದಿಯೆನಿತೊ ಲೆಕ್ಕವಿಲ್ಲ
ಒಂದು ಕಾಸು ಕೊಡದೆಯವಗೆ
ಮುಂದೆ ನಡೆದರು.

೩೯