ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೫೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಪಾಪಮಾಡಿ ಕುರುಡನಾಗಿ
ತಾಪಬಡುತ ಕೊರಗಿ ಸೊರಗಿ
ಈ ಪುರದಲಿ ಬಂದು ನಿಂದು
ರೂಪುಗೆಡಿಪನು"

ಹೀಗೆ ಜನರು ಕೆಲರು ಆಡಿ
ಹೋಗುತಿರಲು ಬೀದಿಯಲ್ಲಿ
ಕೂಗಿ ಕೂಗಿ ಕುರುಡನವನು
ಬಾಗಿ ನಿಂದನು.

ಕಾಲುಗಂಜಿಗಳು ತೋಳು
ಕೂಲಿಮಾಡಿ ಉಂಬ ಹೆಣ್ಣು
ಆಲಿಸುತ್ತ ಅವನ ಕೂಗ
ಸೋತು ಬಂದಳು.

ಹಣ್ಣು ಮಡಲಲಿಟ್ಟುಕೊಂಡು
ಹೆಣ್ಣು ಮಗಳು ಬಂದಳವಳು,
ಕಣ್ಣು ಅರಳೆ ನೋಡಿಯವನ
"ಅಣ್ಣ !” ಎಂದಳು.

ಸೋಗದ ಮಾತು ಸುಧೆಯ ಮಾತು
ಬಗೆಯ ಹಿಡಿವ ನಲ್ಮೆವಾತು
ವುಗಲು ಕಿವಿಯ "ಶಿವನೆ !” ಎಂದು
ಮೊಗವನೆತ್ತಿದ.

೪೧