ಪುಟ:ಕವಿಯ ಸೋಲು.pdf/೫೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ತಿಂದು ಕುರುಡ ಕೈಯ ಮುಗಿದ,
ಇಂದುಧರನು ಮೆಚ್ಚುತಿರಲು
ನಿಂದ ಮಗಳು ಧರೆಗೆ ಬಗ್ಗಿ
ವಂದಿಸಿದ್ದಳು.

ಅವಳ ಕಣ್ಗೆ ಕುರುಡನಲ್ಲ
ಶಿವನೆ ಎಂದು ತಿಳಿದಳವಳು
ಅವನ ಮನಕೆ ಹೆಣ್ಣದಲ್ಲ
ಶಿವನ ಕಂಡನು.

ಕಣ್ಣು ಇದ್ದು ಕುರುಡರೆಷ್ಟೋ
ಮಣ್ಣು ಹಿಡಿವ ಕಲ್ಲು ಹಿಡಿವ
ಒಣ್ಣ ಬಳೆವ ಬೀಗಿ ಮೆರವ
ಸಣ್ಣ ಮನುಜರು.

ಮೇಲು ಜಾತಿ ಕೀಳು ಜಾತಿ
ನೂಲು ಜಾತಿ ಎನಲು ಬೇಡ
ಶೂಲಿಯೊಲಿದ ಜಾತಿಯಲ್ಲಿ
ಶೀಲ ದೊಡ್ಡದು.

ದೀನನಲ್ಲಿ ದೇವನಿಹನು
ದಾನಿಯಲ್ಲಿ ದೇವನಿಹನು
ದೀನದಾನಿಯಲ್ಲದವರ
ಶ್ವಾನ ಎಂಬುದು.

೪೩