ಪುಟ:ಕವಿಯ ಸೋಲು.pdf/೫೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

 
ತಂದೆತಾಯ್ಗಳ ಬಿಟ್ಟು ಬಂದಿರುವೆ
ಒಡಹುಟ್ಟಿದರ ಬಿಟ್ಟು ಬಂದಿರುವೆ
ನಾನೆ ಪರಮಾರಾಧ್ಯನೆಂದೆಂದು
ಕನಸಿನಲ್ಲಿ ನೆನೆಸಿನಲಿ ತಿಳಿದಿರುವೆ
ಕುಸುಮ ಕೋಮಲ ಹೃದಯದಲಿ ಬಯಕೆ ಏನಿಹುದೊ
ಏನಿಹುದೊ ಈ ಎನ್ನ ಗೃಹಲಕ್ಷ್ಮಿ ಹೃದಯದಲಿ!
ರಾಣಿಯಲ್ಲವೆ ನೀನು
ನಾನು ನಿನ್ನಯ ತೊತ್ತು
ಸರ್ವಸ್ವ ನಿನಗಿರಲು
ಸರ್ವಾಧಿಕಾರಮಂ
ನಿನಗೆ ನಾ ಕೊಟ್ಟಿರಲು
ಎನ್ನ ಬೇಡಲದೇಕೆ !!
ಎಂದೆನ್ನ ಆದರಿಸಿ ನುಡಿಯುವರು
ಕೊರಳ ಸರಿಗೆಯ ಕೀಲಿ ತೋರುವರು.

ಪ್ರೇಮ ಭಾಂಡಾಗಾರ ಎನಗಿರಲು
ಕನಕ ಭಾಂಡಾಗಾರ ಎನಗಿರಲು
ಎಲ್ಲವು ಎನ್ನ ಕೈಯೊಳಗಿರಲು
ಒಪ್ಪದಲ್ಲಿ ಸಂಸಾರ ನಡೆಸುತಿರೆ
ಶಾಂತಿ ಸುಖ ನಗುವೆಲ್ಲ ತುಂಬುತಿರೆ
ಒಡವೆ ವಸ್ತುವನಿಟ್ಟು ಮೆರೆಯದಿರೆ
ಏನು ಕುಂದಪ್ಪುದೋ ನಾನರಿಯೆನಮ್ಮ;
ನೀವೆಲ್ಲ ಪುಣ್ಯಶಾಲಿಗಳಮ್ಮ
ಎನಗೇನು ಆ ಪುಣ್ಯ ಬೇಡಮ್ಮ.


೪೬