ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೯೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಕೇಳುತಿರೆ ಭೀತಿಯಲಿ
ಬಾಲೆ ಲಲಿತಾಂಗಿ.

ತಿರುಗಿ ನೋಡಿದಳೊಮ್ಮೆ
ನಡುಗಿದಳು ಮಗುದೊಮ್ಮೆ
ಮುಂದೆ ನೋಡಿದಳೊಮ್ಮೆ
ಭೀತಿಯಿಂ ಕಡೆಗೊಮ್ಮೆ
ಒಂದೇ ನಿಮಿಷದ ಆಯು
ಮರುಚಣವೆ ಕತ್ತಲೆಯು
ಬಿಮ್ಮೆಂಬ ಕತ್ತಲೆಯು
ಕತ್ತಲೆಯ ಹೆಗ್ಗವಿಯು
ಏನಿಹುದೋ ಎಂತಹುದೊ !
ಹೆದರಿದಳು ನಡುಗಿದಳು ;
ಜೀವವಾಹಿನಿಯಲ್ಲ.
ಜೀವಾಪಹಾರಿಣಿಯು
ನೀಲ ಮೃತ್ಯುಚ್ಛಾಯೆ
ಕಾಲಪಾಶಚ್ಛಾಯೆ
ನೋಡಿದಳು ನಡುಗಿದಳು ;
ಮುಂದಿಹುದು ತೋರೆ ಸಾವು
ಮಾನದಿಂದಾ ಸಾವು
ಎದೆಗೆಡಲು ಬಾಳುಂಟು
ಏ ಬಾಳೊ | ತೆಗೆಯೆಂದು
ಎದೆ ಗಟ್ಟಿ ಮಾಡಿದಳು
ಹೆದ್ದೊರೆಯ ನೋಡಿದಳು
ಬಾಲೆ ಲಲಿತಾಂಗಿ.

6
೮೧