ಪುಟ:ಕವಿಯ ಸೋಲು.pdf/೯೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕನಿಯ ಸೋಲು
(ಏಕಾಂಕ ನಾಟಕ)

[ಕವಿಯ ಮನ ಬೆಳಗಿನ ಜಾವ, ಕವಿ ತನ್ನ ಕೊರಡಿಯಲ್ಲಿ ಮಂಚದ ಮೇಲೆ ಮಲಗಿರುವನು. ಮನೆಯು ಪೂರ್ವಾಭಿಮುಖವಾಗಿದೆ; ಕೊರಡಿಯ ಕಿಟಕಿಗಳು ಉತ್ತರಾಭಿಮುಖವಾಗಿವೆ, ಎರಡೂ ಕಿಟಕಿಗಳಿರುವುವು,ಸುಮಾರು ನಾಲ್ಕು ಅಡಿ ಉದ್ದ ಮೂರಡಿ ಆಗಲ ಒಂದೊಂದಕ್ಕೂ ಮೇಲಿನ ಬಾಗಿಲು ಕೆಳಗಿನ ಬಾಗಿಲು ಎಡ ಬಲ ಭಾಗಗಳಲ್ಲಿ ಇರುವುವು. ಕೊರಡಿಯ ಉದ್ದ ೧೨ ಅಡಿಗಳು, ಅಗಲ ೧೦ ಅಡಿಗಳು, ಎತ್ತರ ೧೦ ಅಡಿಗಳು. ಒಳಗಡ ವಿದ್ಯುತ್ತಿನ ದೀಪ ಉರಿಯುತ್ತಿದೆ, ಕವಿಯು ಮಂಚದಮೇಲೆ ಒಬ್ಬನೇ ಮಲಗಿದ್ದಾನೆ. ಮಂಚ ೬|| ಅಡಿ ಉದ್ದ, ೩|| ಅಡಿ ಅಗಲವಿದೆ ತಲೆಯ ಭಾಗದಲ್ಲಿ ಕವಿಯು ತಾನು ಬರೆದ ಕವಿತೆಗಳನ್ನೆಲ್ಲ ಸೇರಿಸಿ ಇಟ್ಟಿರುವನು. ಹಿಂದಿನ ಸಾಯಂಕಾಲ ಹೆಚ್ಚಾಗಿ ಕಾಫಿ ಕುಡಿದದ್ದರಿಂದ ಕವಿಗೆ ಸರಿಯಾಗಿ ನಿದ್ದೆ ಬಾರದೆ ಆಗಾಗ ಹೊರಳು ತಿರುವನು. ಮನೆಯ ಮುಂಭಾಗದ ಮರದ ಮೇಲೆ ಮೂಕರಾಜನು ಅಸಮಾಧಾನ ದಿಂದ ಬಂದು ಕುಳಿತಿರುವನು. ಕೊರಡಿಯ ಕಿಟಕಿಗಳು ಮುಚ್ಚಿರುವುದರಿಂದ ಎರಡು ಬಾರಿ ಕೂಗುವನು, ಕವಿ ಎದ್ದು ಕಿಟಕಿಯೊಂದನ್ನು ತೆಗೆದು ನೋಡಿ, ಪುನಃ ಮಲಗಿಕೊಳ್ಳುವನು. ಆಗ ಘಟಕರಾಜನು ಕೂಗುವನು, ಮಾತಿಗಾರಂಭ ಮಾಡುವನು.]

ಘೂ. ರಾ.- ಹೊತ್ತಾಯಿತೇಳಯ್ಯ ಸಾಕು ನಿನ್ನಯ ಗರ್ವ,

ಎನಗೆ ಉತ್ತರಕೊಟ್ಟು ಬಳಿಕ ನೀ ಮಲಗಯ್ಯ,

ಕವಿ ರಾ.- ಅರುಣೋದಯಕೆ ಮುನ್ನ ಕೂಗುವನು ಆರಿವನು ?

ಘೂ. ರಾ.-ನಾ ಬರುವೆನೆಂದರಿದು ಪಾಪಿ ರವಿಯಂದದಲಿ

ಹೆದರಿ ಹಾಸಿಗೆ ಹಿಡಿವೆ; ನಾ ತೆರಳೆ, ಧೈಯ್ಯದಿಂ
ಬಿಟ್ಟಿದ್ದು ರಾಗಮಂ ಬೀರುತಿಹೆ! ಏನಯ್ಯ
ಲಜ್ಜೆಯೆಲ್ಲದ ಬಾಳು.

ಕವಿ ರಾ.- ನಿದ್ದೆಗಣ್ಣಾಗಿಹುದು,

ಮಂಜು ತೆರೆ ಮರೆಯಲ್ಲಿ ಕಾಂಬಂತೆ ಕಾಣುವುದು.
ನೀನೊಳಗೆ ಬಾರಯ್ಯ,

೮೭