ವಿಷಯಕ್ಕೆ ಹೋಗು

ಪುಟ:ಕ್ರಾಂತಿ ಕಲ್ಯಾಣ.pdf/೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
v
ಎರಡು ನುಡಿ


ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ “ವಿಶ್ವಕನ್ನಡ ಸಮ್ಮೇಳದ'ದ ಅಂಗವಾಗಿ ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿರುವ ಸಾಹಿತಿಗಳ ಮಹತ್ವದ ಕೃತಿಗಳನ್ನು ಓದುಗರಿಗೆ ಒದಗಿಸಬೇಕೆಂಬ ಸದಾಶಯ ಹೊಂದಿರುತ್ತದೆ. ಈ ಯೋಜನೆಯಡಿ ಸುಮಾರು ೧೦೦ ಕೃತಿಗಳನ್ನು ಪ್ರಕಟಿಸಲು ಉದ್ದೇಶಿಸಿದೆ.

ಈ ಕೃತಿಗಳನ್ನು ಆಯ್ಕೆಮಾಡಲು ಖ್ಯಾತ ವಿದ್ವಾಂಸರಾದ ಪ್ರೊ. ಎಲ್.ಎಸ್. ಶೇಷಗಿರಿರಾವ್‌ರವರ ಅಧ್ಯಕ್ಷತೆಯಲ್ಲಿ ನಾಡಿನ ಹೆಸರಾಂತ ಸಾಹಿತಿ | ವಿದ್ವಾಂಸರುಗಳನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದೆ. ಈ ಆಯ್ಕೆ ಸಮಿತಿಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಗೆ ಕನ್ನಡ ಸಾಹಿತ್ಯದ ವಿವಿಧ ಕಾಲಘಟ್ಟಗಳಲ್ಲಿ ಬಂದ ಪ್ರಾತಿನಿಧಿಕ ಕೃತಿಗಳನ್ನು ಆಯ್ಕೆ ಮಾಡಿರುತ್ತದೆ. ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸರ್ಕಾರದ ಪರವಾಗಿ ವಂದನೆಗಳು ಸಲ್ಲುತ್ತವೆ. ಈ ಪುಸ್ತಕಗಳನ್ನು ಹೊರತರಲು ಅನುಮತಿ ನೀಡಿ ಸಹಕರಿಸಿದ ಎಲ್ಲಾ ಲೇಖಕರು ಹಾಗೂ ಹಕ್ಕುದಾರರುಗಳಿಗೆ ನನ್ನ ಕೃತಜ್ಞತೆಗಳು ಸಲ್ಲುತ್ತವೆ. ಕನ್ನಡದ ಮೇರುಕೃತಿ ಸಾಹಿತ್ಯ ಮಾಲಿಕೆಯನ್ನು ಓದುಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.

ದಿನಾಂಕ ೧೭.೦೧.೨೦೧೧

(ರಮೇಶ್ ಬಿ.ಝಳಕಿ)
ಸರ್ಕಾರದ ಕಾರ್ಯದರ್ಶಿಗಳು
ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ