ಪುಟ:ಗೌರ್ಮೆಂಟ್ ಬ್ರಾಹ್ಮಣ.pdf/೭೨

ವಿಕಿಸೋರ್ಸ್ದಿಂದ
(ಪುಟ:ಗೌರ್ಮೆಂಟ್ ಬ್ರಾಮ್ಮಣ.pdf/೭೨ ಇಂದ ಪುನರ್ನಿರ್ದೇಶಿತ)
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೫೬ ಗೌರ್ಮೆಂಟ್ ಬ್ರಾಹ್ಮಣ


ಕಾಲೇಜಿನ ಪರೀಕ್ಷೆಯ ಓದು ಗಂಬೀರವಾಗಿ ಪ್ರಾರಂಭವಾಗುವುದು ಪರೀಕ್ಷೆ. ಒಂದು ಎರಡು ತಿಂಗಳು ಇದೆ ಎನ್ನುವಾಗ ವಿದ್ಯುತ್ದೀಪ ಕೇರಿಗೆ ಪ್ರವೇಶವಾಗಿತ್ತು. ಆದರೆ ಇನ್ನೂ ಯಾರ ಮನೆಯೊಳಗೆ ಪ್ರವೇಶವಾಗಿರಲಿಲ್ಲಿ. ಹೀಗಾಗಿ ನಾನು ರಸ್ತೆಯ ವಿದ್ಯುತ್ ದೀಪದ ಬೆಳಕಿನಲ್ಲಿ ಕುಳಿತು ಓದುವ ರೂಢಿ ಮಾಡಿಕೊಂಡೆ.ಕೆಲವೊಮ್ಮೆ ವಿದ್ಯುತ್ ಚ್ಛಕ್ತಿ ಹೊರಟುಹೋದಾಗಲೂ ಬುಡ್ಡಿ ಲ್ಯಾಂಪನ್ನು ಹಚ್ಚಿ ಅದೇ ವಿದ್ಯುತ್ ಕಂಬದ ಅಡಿಯಲ್ಲಿಯೇ ಕುಳಿತು ವಿದ್ಯುತ್ತಿನ ನಿರೀಕ್ಷೆಯಲ್ಲಿ ಓದುವ ವಾಡಿಕೆ ಇತ್ತು. ಇದ್ದಕ್ಕಿದ್ದಂತೆ ಒಂದು ದಿನ ನಾನು ಓದುವ ಕಂಬದ ದೀಪ ಹತ್ತಲೇ ಇಲ್ಲ. ಆ ಕಂಬ ಅಲುಗಾಡಿಸಿದರೆ ಸಾಕು, ದೀಪ ಹತ್ತುವ ಸಾಧ್ಯತೆ ಮತ್ತು ನಂದುವ ಸಾಧ್ಯತೆಗಳೂ ಇದ್ದವು. ಏನೆಲ್ಲಾ ಮಾಡಿದರೂ ದೀಪ ಹತ್ತಲೇ ಇಲ್ಲ. ಬಲ್ಬು ಹೋಗದೆ ಎಂದು ಪಂಚಾಯಿತಿಗೆ ಹೋಗಿ ದೂರು ಸಲ್ಲಿಸಿದೆ. ಮಾರನೆ ದಿನ ದೀಪ ಹತ್ತಿತು. ರಾತ್ರಿ ಒಂದು ಗಂಟೆಯ ಸಮಯಕ್ಕೆ ನಿದ್ದೆ ಕಳೆಯಲೆಂದು ಹೀಗೆ ಸುತ್ತುತ್ತಾ ಹರಕು ಪರದೆಯ ಟೂರಿಂಗ್ ಟಾಕೀಸಿನ ಎಡೆಗೆ ಸುತ್ತಿ ಬಂದು ನಾಲ್ಕು ಐದು ಗಂಟೆಯವರೆಗೆ ಓದುವ ಅಭ್ಯಾಸವಿತ್ತು. ಮತ್ತೆರಡು ದಿನಗಳಲ್ಲಿಯೇ ಮತ್ತೆ ಬಲ್ಬು ನಂದಿಹೋಯಿತು. ಹೀಗಾದಾಗ ಬುಡ್ಡಿ ಲ್ಯಾಂಪಿನ ಅಡಿಯಲ್ಲಿ ಓದುವುದೂ ಬೇಸರವಾಗುತ್ತಿತ್ತು.ಆಗ ಹದಿನ್ಯೆದು ದಿನಗಳಲ್ಲಿಯೇ ಹೀಗೆ ಮೂರು ಬಲ್ಬುಗಳು ಹೋದವು. ಪಂಚಾಯತಿಯ ಬಲ್ಬಿಗೆ ಸಂಬಧಿಸಿದ ಅಧಿಕಾರಿಗಳಿಗೆಲ್ಲಾ ಸಲಾಮು ಹೊಡೆದು ಅಂಗಲಾಚಿ ಇನ್ನೊಮ್ಮೆ ಹಾಗೆ ಆಗದ ಹಾಗೆ ನೋಡುವೆ ಇದೊಂದು ಬಾರಿ ಬಲ್ಬು ಹಾಕಿ ಎಂದು ಬೇಡಿಕೊಂಡೆ. ಏನೋ ಹೀಂಗ ಹೇಳಾಕತ್ತ ಎಷ್ಷು ಸಾರಿ ಆಯ್ತು ನೀ ? ಓದ್ತಿಯೋ? ಕಂಬದ ಜೋಡಿ ಆಟಾ ಆಡ್ತೀಯಾ? ಎಂದರು ಚೇರಮನ್ನರು. "ಇಲ್ಲ ಸರ್, ಆ ಕಂಬದಲ್ಲಿ ಲೈಟಿನ ವಾಟರ್ ಲೂಸ್ ಆಗಿದೆ ಅಂತಾ ಕಾಣ್ತದೆ. ಆ ವಾಯರ್ ಬಿಗಿ ಮಾಡಿಸಿ ಬಲ್ಬು ಹಾಕಿದರೆ ಸರಿಯಾಗಬಹುದು ಸರ್" ಎಂದೆ. "ಕೆ.ಇ.ಬಿ.ಯವರ ಹತ್ತಿರ ಹೇಳು"ಎಂದರು. ಕೆ.ಇ.ಬಿ.ಆಫೀಸ್ ಇನ್ನೂ ಬಂದಿರಲಿಲ್ಲ.ಅದರ ಕುರಿತು ಕೆದಕಿ ಬರಬೇಕಾದ ಒಂದು ಬಲ್ಬು.ಕಳೆದುಕೊಳ್ಳುವುದಕ್ಕೆ ಮನಸ್ಸು ಒಪ್ಪದೆ ಮೌನವಾಗಿದ್ದೆ.ಕೊನೆಗೆ ಅಧಿಕಾರವಾಣಿಯಿಂದ ಬಂದದ್ದು "ಏ ಇದೊಂದು ಸರೆ ಹಾಕಂತ ಹೇಳೋ" ಎಂದು ಹೇಳಿದಾಗ ಅಲ್ಲಿಂದ ಬೆನ್ನು ತೋರಿದೆ. ಮರುದಿನ ಕಂಬದ ದೀಪ ಹತ್ತಿತು ಎಂದು ಸಂತಸಪಟ್ಟರೆ ಮತ್ತೊಂದು ದಿನ ಮತ್ತೊಂದು ಘಟನೆ!