ವಿಷಯಕ್ಕೆ ಹೋಗು

ಪುಟ:ಗೌರ್ಮೆಂಟ್ ಬ್ರಾಹ್ಮಣ.pdf/೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

vi

ಅಧ್ಯಕ್ಷರ ಮಾತು


ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ ಮೇರುಕೃತಿಗಳನ್ನು ಪುನರ್ ಮುದ್ರಣ ಮಾಡಲು ಒಂದು ಯೋಜನೆಯನ್ನು ಕೈಗೊಂಡಿತು. ಕೃತಿಗಳ ಆಯ್ಕೆಗಾಗಿ ಸರ್ಕಾರವು ಒಂದು ಸಮಿತಿಯನ್ನು ರಚಿಸಿತು. ಈ ಮಹತ್ವದ ಯೋಜನೆಯ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವ ಸುಯೋಗ ನನ್ನದಾಯಿತು.
ಈ ಯೋಜನೆಯ ಮಹತ್ವವನ್ನು ನಾನು ವಿವರಿಸುವ ಅಗತ್ಯವಿಲ್ಲ. ಕನ್ನಡದ ಶ್ರೇಷ್ಠ ಕೃತಿಗಳನ್ನು ಸುಲಭ ಬೆಲೆಗೆ ಕನ್ನಡಿಗರ ಕೈಗಳಲ್ಲಿರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಲವು ಯೋಜನೆಗಳನ್ನು ಕೈಗೊಂಡಿರುವುದಕ್ಕಾಗಿ ಸರ್ಕಾರವನೂ ಇಲಾಖೆಯನೂ ಹತೂರ್ವಕವಾಗಿ ಅಭಿನಂದಿಸುತ್ತೇನೆ. ಕನ್ನಡ ಸಂಸ್ಕೃತಿಗೆ ಈ ಯೋಜನೆಗಳು ಮಹತ್ವದ ಕೊಡುಗೆಯನ್ನು ನೀಡುತ್ತವೆ.
ಕನ್ನಡದ ಮೇರುಕೃತಿಗಳನ್ನು ಆರಿಸುವುದು ಸುಲಭದ ಕೆಲಸವಲ್ಲ. ಇಂತಹ ಆಯ್ಕೆಯಲ್ಲಿ ಬೇರೆ ಬೇರೆ ಅಭಿಪ್ರಾಯಗಳಿಗೆ ಸಾಧಾರವಾಗಿಯೇ ಅವಕಾಶವಿರುತ್ತದೆ. ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳು ಈ ಸಮಿತಿಯ ಸದಸ್ಯರಾಗಿದ್ದದ್ದು ಸುದೈವದ ಸಂಗತಿ. ಕೃತಿಗಳನ್ನು ಚರ್ಚಿಸಿ ಮಹತ್ವದ ನಿರ್ಧಾರಕ್ಕೆ ಬಂದ ಸಮಿತಿಯು ಸಾಧ್ಯವಾದ ಕಾರ್ಯವನ್ನು ಸಾಧಿಸಿದೆ. ಇದಕ್ಕಾಗಿ ನಾನು ಸಮಿತಿಯ ಎಲ್ಲ ಸದಸ್ಯರಿಗೂ ಕೃತಜ್ಞನಾಗಿದ್ದೇನೆ.
ಈ ಕಾರ್ಯದ ನಿರ್ವಹಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೆಶಕರಾದ ಶ್ರೀ ಮನು ಬಳಿಗಾರ್ ಅವರು ನೆರವಾಗಿದ್ದಾರೆ. ಅವರ ಮತ್ತು ಅವರ ಸಿಬ್ಬಂದಿಯವರ ಅಮೂಲ್ಯ ಸಹಕಾರಕ್ಕೆ ನಾನು ಕೃತಜ್ಞ
ಕನ್ನಡ ನಾಡಿನ ಮನೆಮನೆಗಳಲ್ಲಿ ಸಾಹಿತ್ಯದ ಮಂಗಳ ದೀಪದ ಬೆಳಕನ್ನು ಹರಡುವ ಈ ಯೋಜನೆಯ ಪೂರ್ಣ ಪ್ರಯೋಜನವನ್ನು ಕನ್ನಡಿಗರು ಪಡೆದುಕೊಳ್ಳಲಿ ಎಂದು ಹಾರೈಸುತ್ತೇನೆ.

ಸಿರಿಗನ್ನಡಂ ಗೆಲ್ಗೆ!


ಎಲ್.ಎಸ್. ಶೇಷಗಿರಿ ರಾವ್
ಅಧ್ಯಕ್ಷ
ದಿನಾಂಕ ೧೬.೧೨.೨೦೧೦
ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ