ಅಲ್ಲಿ ರಸಿಕತೆ ಪ್ರೌಢವಾಗಿದೆ. ಮಾತುಮಾತಿಗೆ ನಗುವುದು,ಚಪ್ಪಾಳೆಗಳು ಇಲ್ಲವೇ ಇಲ್ಲ! ಒಂದು ಕಲೆಯಾಗಿ ಸ್ವೀಕರಿಸಿದ್ದಾರೆ.”
2015 ಆಗಸ್ಟ್ 29ರಿಂದ ಸೆಪ್ಟೆಂಬರ್ 19ರ ತನಕ ಸೈಂಟ್ ಲೂವಿಸ್,ಚಿಕಾಗೋ,ಮೇರಿಲ್ಯಾಂಡ್, ಸನ್ ಜೋಸ್, ಬರ್ಕ್, ಹೂಸ್ಟನ್, ಮೈಮಿ..ಗಳಲ್ಲಿ ತಾಳಮದ್ದಳೆ.ಕಾರ್ಯಕ್ರಮದ ಆರಂಭಕ್ಕೆ ಔಚಿತ್ಯದ ಕುರಿತು ಸಂಘಟಕರಿಂದ ಮಾತು. ನಂತರಕೂಟ. ಕೊನೆಗೆ 'ನೀವು ಊರಿಗೆ ಮರಳಿದಾಗ ಯಕ್ಷಗಾನಕ್ಕೆ ನೀಡಬಹುದಾದ ಪ್ರೋತ್ಸಾಹ'ದ ಟಿಪ್‌ಗಳ ಪ್ರಸ್ತುತಿ. ವ್ಯವಸ್ಥಿತವಾದ ಆಯೋಜನೆ.
ಕೂಟಗಳಲ್ಲದೆ ಮಂಕುತಿಮ್ಮನ ಕಗ್ಗ, ಗಣೇಶ ಮತ್ತು ಗುರು.. ಈ ವಿಚಾರಗಳ ಉಪನ್ಯಾಸ, ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾದ ಕಾರ್ಯಕ್ರಮವನ್ನು ಸಂಸ್ಕೃತವಿದ್ವಾಂಸ ಪ್ರೊ.ರಾಬರ್ಟ್ ಗೋಲ್ಡ್‌ಮನ್ ಸಂಘಟಿಸಿದ್ದರು. 1970ರ ಸುಮಾರಿಗೆಇದೇ ವಿವಿಯ ವಿದ್ಯಾರ್ಥಿನಿ ಮಾರ್ತಾ ಆಸ್ಟನ್ ಸಿಕೋರಾ ಕನ್ನಾಡಿಗೆ ಬಂದಿದ್ದರು.ಯಕ್ಷಗಾನದ ವಿಶೇಷ ಅಧ್ಯಯನ ಮಾಡಿದ್ದು ಗಮನೀಯ, ಸರಣಿಯ ಕೆಲವು ಕಾರ್ಯಕ್ರಮಗಳಲ್ಲಿ ಮಾರ್ತಾ ಉಪಸ್ಥಿತರಿದ್ದುದು ಗಮನಾರ್ಹ.
ಒಟ್ಟೂ ಸರಣಿ ಕೂಟದ ಪುಳಕವನ್ನು ಹೊತ್ತು ತಂದ ಜೋಶಿ ಹೇಳುವುದುಹೀಗೆ: ಹತ್ತೋ ಇಪ್ಪತ್ತು ವರುಷದ ಹಿಂದೆ ಹೋಗಬೇಕಿತ್ತು. ಯಕ್ಷಗಾನ, ಕರಾವಳಿಮತ್ತು ಅಲ್ಲಿನ ಮನಸ್ಸುಗಳನ್ನು ಒಂದುಗೂಡಿಸುವ ಚಿಕ್ಕ ಹೆಜ್ಜೆಯೂರಬಹುದಿತ್ತು ಅನ್ನಿಸುತ್ತದೆ.ಏನು ಮಾಡಲಿ, ಕಾಲ ಮಿಂಚಿಹೋಯಿತು. ಒಂದೆಡೆ ಸಮೃದ್ದ ಕಲಾ ಮಜಲು,ಇನ್ನೊಂದೆಡೆ ಅದು ಬೇಕೆಂಬ ಹಪಾಹಪಿ-ಈ ಎರಡೂ ದಡಗಳನ್ನು ಸೇರಿಸಬಹುದಿತ್ತು!
ಮಂಗಳೂರು, ಮೂಡುಬಿದಿರೆ, ಕಾರ್ಕಳ.. ಮೊದಲಾದ ಪ್ರದೇಶಗಳಲ್ಲಿದ್ದ ಈಗ ಅಲ್ಲಿನವರಾದ ಆಪ್ತರ, ಬಂಧುಗಳ ಭೇಟಿ, ಚಿಕಾಗೋದಲ್ಲಿ ಹಿರಿಮಗಳು ಶ್ವೇತಾಸೂರ್ಯನಾರಾಯಣ, ವರ್ಜೀನಿಯಾದಲ್ಲಿ ಕಿರಿ ಮಗಳು ಸ್ವಾತಿ ಕಾರ್ತಿಕ್ ಕುಟುಂಬವಾಸ್ತವ್ಯವಿದೆ. ಅವರೊಂದಿಗೆ ಕಳೆಯಲು ಜೋಶಿ ಮೊದಲ ಬಾರಿಗೆ ಅಮೇರಿಕಾಕ್ಕೆ ಹೋಗಿದ್ದರು. ಆದರೆ ಯಕ್ಷಗಾನವು ಅಲ್ಲೂ ಅವರನ್ನು ಕಾಲಯಾಪನೆಗೆ ಬಿಟ್ಟಿಲ್ಲ!“ನನ್ನ ನಿರೀಕ್ಷೆಗೂ ಮೀರಿದ ಗೌರವ, ಊಹಿಸದ ರೀತಿಯ ಸ್ಪಂದನ. ಇದೆಲ್ಲ ಬೆಳೆದು ನಿಂತ
ಯಕ್ಷಗಾನ ಕಲೆಗೆ ಸಂದ ಮಾನ. ನಾನು ಅದರ ಪ್ರತಿನಿಧಿಯಷ್ಟೇ. ಕಲೆಯನ್ನು ಪ್ರೀತಿಸುವ ಅಪ್ಪಟ ಸಹೃದಯರ ಋಣವನ್ನು ಹೇಗೆ ತೀರಿಸಲಿ” ಎನ್ನುವಾಗ ಭಾವುಕರಾಗುತ್ತಾರೆ.
ಪ್ರವಾಸ ಮುಗಿಸಿ ಮರಳಿದಾಗ ಕಂಪ್ಯೂನಲ್ಲಿ ರಾಶಿ ರಾಶಿ ಮಿಂಚಂಚೆಗಳು,ಕಾರ್ಯಕ್ರಮದ ಹಿಮ್ಮಾಹಿತಿಗಳು. “ನನಗೊಂದು ಹೊಸ ಅನುಭವ. ವಿದೇಶಿ ಬಂಧುಗಳ ಕೃತಜ್ಞತೆಯ ಭಾರವನ್ನು ಹೊತ್ತು ದೇಶಕ್ಕೆ ಮರಳಿದ್ದೇನೆ. ಇನ್ನೊಂದೆರಡು ತಿಂಗಳುಇರುತ್ತಿದ್ದರೆ ಕೂಟಗಳ, ಸಂಪರ್ಕಗಳ ಸಂಖ್ಯೆ ಹಿರಿದಾಗುತ್ತಿತ್ತು.” ಎನ್ನುತ್ತಾ ಮಾತುಕತೆಗೆ ಮುಕ್ತಾಯ ಹಾಡುತ್ತಾರೆ, “ಆಟವೇ ಮಾತ್ರ ಒಂದು ಫಾರ್ಮ್ ಅಲ್ಲ, ತಾಳಮದ್ದಳೆಯೂ
ಒಂದು ಫಾರ್ಮ್ ಎಂದು ತಿಳಿಸಲು ಈ ಟೂರ್‌ನಿಂದ ಸಾಧ್ಯವಾಯಿತು.”
(ಪ್ರಜಾವಾಣಿಯ 'ದಧಿಗಿಣತೋ' ಅಂಕಣ/26-12-2015)
ಜಾಗರದ ಜೋಶಿ / 34