ವಿಷಯಕ್ಕೆ ಹೋಗು

ಪುಟ:ಜಾಗರದ ಜೋಶಿ.pdf/೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಮುನ್ನುಡಿಯ ಮುಡಿ ಜಾಗರ | ಜಾಗರ, 1984, ಸುಮನಸಾ ವಿಚಾರ ವೇದಿಕೆ, ಚೊಕ್ಕಾಡಿ - ಬುದ್ಧಿಯ ಹರಿತ ಸಂವೇದನೆಯ ಸೂಕ್ಷ್ಮತೆ ಲಕ್ಷ್ಮೀಶ ತೋಳ್ವಾಡಿ ಇತ್ತ ದಟ್ಟವಾದ; ವಿವರ ವಿವರಕ್ಕೆ ಕಣ್ಣು ಹಾಯಿಸಬಲ್ಲ ಎಚ್ಚರವಲ್ಲ. ಅತ್ತ ಎಲ್ಲದಕ್ಕೂ ಕರಿಮುಸುಕು ಎಳೆದಂತೆ ಗಾಢ ಸುಷುಪ್ತಿಯಲ್ಲ. ನಡುವಣ ಸ್ವಪ್ನ ರಮ್ಯ; ಅರ್ಧನಿಮೀಲಿತ ಮಾಯಾಲೋಕವೊಂದರ ಸೃಷ್ಟಿಗಾಗಿ ಕಲೆ ಕೆಲಸ ಮಾಡುತ್ತದೆ. ನಮ್ಮ ಸಂಗೀತ, ಚಿತ್ರ, ಶಿಲ್ಪ, ನಾಟ್ಯ - ಎಲ್ಲೆಲ್ಲಿಯೂ ಈ ಅರೆತೆರೆದ ಅಂದರೆ ಅರೆಮುಚ್ಚಿದ, ವ್ಯಂಗ್ಯದ ಸೋಂಕಿಲ್ಲದೆ ಹೇಳುವ - ಈ ನಿಸ್ತರಂಗ ಧ್ಯಾನ ಸ್ಥಿತಿ. ಇನ್ನೊಂದು ವಿಲಕ್ಷಣ ವಿದ್ಯಮಾನ ಇದೆ. ಕಲೆ ನಿರ್ಮಿಸುವ, ವಾಸ್ತವವನ್ನು ದಾಟಿದ ಭ್ರಮಾದ್ಭುತ ಪ್ರಪಂಚ, ಖಚಿತವಾದ, ಕರಾರುವಾಕ್ಕಾದ ಲೆಕ್ಕಾಚಾರದ 'ಶಾಸ್ತ್ರ'ದ ಗಟ್ಟಿನೆಲದ ಮೇಲೆ ನಿಂತಿದೆ. ಚಾಚೂ ತಪ್ಪಬಾರದ ನಿರ್ದಿಷ್ಟ ತಾಳಗತಿ, ಆ ಗತಿಯಲ್ಲೇ ಹರಿವ ಲಯ, ಲಯಾನುಸಾರಿಯಾಗಿ ನರ್ತಕನ ಹೆಜ್ಜೆ: ಮೈ, ಪ್ರಮಾಣಬದ್ಧವಾದ ವೇಷರಚನೆ - ಇವೆಲ್ಲ ಶಾಸ್ತ್ರದ ಚೌಕಟ್ಟು ಎಷ್ಟು ಗಂಭೀರ ಎಂಬುದನ್ನು ತೋರಿಸುತ್ತದೆ. ಎಂಥ ಮನೋಧರ್ಮವೂ ಈ ಚೌಕಟ್ಟನ್ನು ಮುರಿಯುವುದಿಲ್ಲ, ಹಿಗ್ಗಿಸುತ್ತದೆ. ಮನೋಧರ್ಮ ಅರಳುತ್ತಿರುವಂತೆ ಚೌಕಟ್ಟಿನ ಎಲ್ಲೆಯನ್ನು ಹುಡುಕತೊಡಗಿದಾಗ, ಚೌಕಟ್ಟೆ ಕೊಂಚ ಮುನ್‌ಸರಿದು ಮನೋಧರ್ಮಕ್ಕೆ ಎಡೆಮಾಡಿಕೊಟ್ಟು ಮತ್ತೆ ಅದರ ಸುತ್ತ ಚೌಕಟ್ಟಾಗೇ ನಿಂತಂತೆ ಕಾಣುತ್ತದೆ ನಮಗೆ ನಮ್ಮ ಅಳವಿಗೆ ಜಾಗರದ ಜೋಶಿ / 65