ಇನ್ನೇನು ಸಿಕ್ಕಿತು ಎಂದು ತೋರುವ ದಿಗಂತದಂತೆ. ಈ ವಿದ್ಯಮಾನ ಭಾರತೀಯ ಕಲೆಗಳಿಗೆ ಹೇಗೆ, ಹಾಗೆ ಭಾರತೀಯ ಸಮಾಜಕ್ಕೂ ಸಲ್ಲುವುದೆಂದು ತೋರುತ್ತದೆ.
ಆತ್ಮ ಅಥವಾ ಮನಸ್ಸು ಮೈಯಲ್ಲಿ ಮನೆ ಮಾಡಿದಂತೆ, ಶಾಸ್ತ್ರದ ಮೊನಚಾದ ಕಟ್ಟುಪಾಡುಗಳ ನಡುವೆ ಕನಸಿನ ಲೋಕವೊಂದು ಮೈತೋರುವುದು ನಮ್ಮ ಯಕ್ಷಗಾನದ ಪ್ರೇಕ್ಷಕರಿಗೆ ನಿತ್ಯಾನುಭವ. ಆದ್ದರಿಂದಲೇ ಇಂಥ ಧ್ಯಾನಸದೃಶ ರಸಾನುಭವವನ್ನು ಕೊಡತಕ್ಕ ಕಲೆಗಳು 'ವಿಮರ್ಶಕ'ನೆಂಬ ಮೂರನೆಯ ಮನುಷ್ಯನನ್ನು ಸಹಿಸುವುದಿಲ್ಲ.
ಕಲೆ ಎಂದೇನು? ಸಮಗ್ರ ಭಾರತೀಯ ಸಾಹಿತ್ಯಕ್ಕೆ ಮನಸ್ಸು ನೆಟ್ಟಿರುವುದೇ 'ಸರಸ್ವತ್ಯಾಸತ್ವಂ ಕವಿ ಸಹೃದಯಾಖ್ಯಂವಿಜಯತೇ' ಎಂಬ ಹೇಳಿಕೆಯಲ್ಲಿ ಕವಿ ಮತ್ತು ಸಹೃದಯ - ಇವರನ್ನು ಬಿಟ್ಟು ಮೂರನೆಯ ಬಣವಿಲ್ಲ. ಇದ್ದರೆ ಆ ಹೊರಗಿನವರಿಗೆ ಇಲ್ಲಿ ಪ್ರವೇಶ ಇಲ್ಲ.
ಅಂದರೆ ಏನು?
ವಿಮರ್ಶಕ ಮೂರನೆಯ ಮನುಷ್ಯನೇ ಅಲ್ಲ. ಸಹೃದಯನದ್ದೇ ಚಾಚಿದ ಇನ್ನೊಂದು ಮೈ ವಿಮರ್ಶಕ. ರಸಾನುಭವದ ಇನ್ನೊಂದು ಮಗ್ಗುಲೇ ವಿಮರ್ಶೆ.ಆದುದರಿಂದ ಮೊದಲು ಸಹೃದಯನಾಗಿ ಒಳಗೆ ಬಾ. ಆಮೇಲೆ ಟೀಕಿಸು.. ಟಿಪ್ಪಣಿಸು.. ಖಂಡಿಸು..ಮಂಡಿಸು. ಆದರೂ ಮನೆಯೊಳಗಿನವನಾಗಿಯೇ ಇರು - ಎನ್ನುವ ಪ್ರೀತಿಯ ಒತ್ತಾಯವನ್ನು ತರುತ್ತದೆ ನಮ್ಮ ಕಲೆ, ನಮ್ಮ ಸಾಹಿತ್ಯ.
ಇಂಥ ವಿಮರ್ಶೆಯಲ್ಲಿ ಬುಧ್ದಿ ಹರಿತವಾಗಿಯೇ ಕೆಲಸ ಮಾಡುತ್ತದೆ. ಆದರೆ ಈ ಝಳಪಿಸುವಿಕೆಯಲ್ಲಿ ರಸಾವರಣ ಹರಿಯದಂತೆ ವಿಮರ್ಶಕನ ಸಂವೇದನೆ ಪಹರೆ ಕೊಡುತ್ತಿರುತ್ತದೆ. ಇದು ಹೇಗೆಂದರೆ pole vault ಎಂಬ ಉದ್ಧಂಡ ಜಿಗಿತದ ಕ್ರೀಡೆಯ ಹಾಗೆ. ಉದ್ದದ ಬಿದಿರಿನ ಕೋಲೊಂದನ್ನು ಹಿಡಿದು ಧಾವಿಸುತ್ತ, ಅದನ್ನು ನೆಲಕ್ಕೂರಿ ಆ ರಭಸಕ್ಕೆ ಎತ್ತರಕ್ಕೆ ಏರುತ್ತೀರಿ. ಇನ್ನೂ ಎತ್ತರದಲ್ಲಿ ಅಡ್ಡ ದಂಡವೊಂದು ಗುರುತಾಗಿ ಇರುತ್ತದೆ. ಅದರ ಹತ್ತಿರ ಬಂದಾಗ ನಿಮ್ಮನ್ನು ಇಷ್ಟು ಮೇಲಕ್ಕೆತ್ತಿದ ಬಿದಿರಕೋಲನ್ನು
ಕೈಬಿಟ್ಟು ದಂಡದಾಚೆ ಜಿಗಿಯುತ್ತೀರಿ. ಯಾವುದೋ ಮೋಹದಿಂದ ಕೋಲನ್ನು ಕೈ ಬಿಡಲಿಲ್ಲವೋ ಅದೇ ನಿಮ್ಮನ್ನು ಈಚೆಯ ನೆಲಕ್ಕೆ ಕೆಡವುತ್ತದೆ. ಕೈಬಿಟ್ಟು ಜಿಗಿದಿರೋ ಆಚೆಯ ಬಯಲು ನಿಮ್ಮದು. ಸಿದ್ಧಿ ನಿಮ್ಮದು.
ವಿಮರ್ಶೆಯಲ್ಲಿ ಬುದ್ದಿ ಆ ಬಿದಿರ ಕೋಲಿನ ಹಾಗೆ. ಎತ್ತರಕ್ಕೇರುವುದಕ್ಕೆ. ಜಿಗಿತಕ್ಕೆ ವೇಗ ಕೊಡುವುದಕ್ಕದು ಬೇಕೇ ಬೇಕು. ಆದರೆ ವಿಶ್ಲೇಷಕ ಬುದ್ಧಿಯನ್ನು ಕೈಬಿಡಬೇಕಾದ ಘಟ್ಟವೂ ಒಂದಿದೆ. ಅಡ್ಡ ದಂಡವೇ ನೀವು ಅದರ ಹತ್ತಿರವಾದಂತೆ ಕೋಲನ್ನು ಕೈಬಿಟ್ಟು ತನ್ನಾಚೆ ಧುಮುಕುವಂತೆ ಆಹ್ವಾನಿಸುತ್ತದೆ. ಕಲಾನುಭವದಲ್ಲಿ ಈ ಘಟ್ಟವನ್ನು ಗುರುತಿಸುವುದಕ್ಕೂ ವಿಮರ್ಶೆ ಬೇಕೆನ್ನುವುದು ಅದರ ಮಹತ್ತು ಮತ್ತು ಮಿತಿ.
ಈ ನನ್ನ ಪ್ರಿಯ ಗೆಳೆಯ ಪ್ರಭಾಕರ ಜೋಶಿ ಇಂಥ ಒಳಗಿನ ವಿಮರ್ಶಕರಾಗಿದ್ದಾರೆ ಎನ್ನುವುದು ತುಂಬು ಸಂತಸದ ಸಂಗತಿ. ಅವರ ಬುದ್ಧಿ ಕೂರಲಗಿನಂತಿದ್ದರೂ ಅವರು
ಪುಟ:ಜಾಗರದ ಜೋಶಿ.pdf/೭೩
ಗೋಚರ
ಈ ಪುಟವನ್ನು ಪರಿಶೀಲಿಸಲಾಗಿದೆ
ಜಾಗರದ ಜೋಶಿ / 66