ಇವೆರಡೂ ಗ್ರಂಥಗಳು ಯಾವ ರತ್ನಪರೀಕ್ಷಕನ ಮುಂದೆಯೂ ಅಪ್ಪಟ ಎಂದು
ಸ್ಥಿರಗೊಳ್ಳುವುದರಲ್ಲಿ ಸಂದೇಹ ಬೇಡ.
ಯಕ್ಷಗಾನದ ಬಗೆಗೆ ಇದುವರೆಗೆ ಲಿಖಿತವಾಗಿ ಹಾಗೂ ಭಾಷಣರೂಪದಲ್ಲಿ ಬಂದಿರುವ ವಿಮರ್ಶೆಗಳನ್ನು ಸ್ಥೂಲವಾಗಿ ಎರಡು ದರ್ಜೆಗಳಲ್ಲಿ ವಿಂಗಡಿಸಬಹುದು.ಒಂದು ವರ್ಗದಲ್ಲಿ ಇರುವವರು ಯಕ್ಷಗಾನ ರಂಗದ ಯಾವ ವಿಭಾಗದಲ್ಲೂ ಸಮಗ್ರವಾದ ಪರಿಶ್ರಮ ಇಲ್ಲದೆ, ಕೇವಲ ಹೊರಗಿನವರಾಗಿದ್ದು ಅದನ್ನು ಅಭ್ಯಸಿಸಿದ ಕಲಾ ರಸಿಕರು.ಇನ್ನೊಂದು ವರ್ಗದಲ್ಲಿ ಯಕ್ಷಗಾನದ ಜತೆಗೆ ತಾವೂ ಜೀವಿಸುತ್ತ ಅದರ ಎಲ್ಲ
ಆಗುಹೋಗುಗಳಲ್ಲಿ ತಮಗೂ ಒಂದಿಷ್ಟು ಪಾತ್ರ ಇರುವ ಜನರು, ಇವೆರಡು ವರ್ಗಗಳ ಜನರಿಂದ ಆರೋಗ್ಯಪೂರ್ಣ ಚಿಂತನ ಸಾಧ್ಯ ಎಂಬುದಕ್ಕೆ ಇನ್ನೂ ಪುರಾವೆ ಸಿಗಬೇಕಷ್ಟೇ.
ಒಂದು ವರ್ಗದಲ್ಲಿ ಕಲೆಯ ಸಮಗ್ರ ದರ್ಶನದ ಅಭಾವ, ಇನ್ನೊಂದರಲ್ಲಿ ಕಲೆಯ ಆಗುಹೋಗುಗಳಲ್ಲಿ ತಮ್ಮ ಶಾಮೀಲಿನಿಂದಾಗಿ ನಿರ್ಲಿಪ್ತ ಚಿಂತನೆಯ ಅಸಾಮರ್ಥ್ಯ.
ಈ ದೃಷ್ಟಿಯಲ್ಲಿ ಯಕ್ಷಗಾನ ರಂಗಭೂಮಿಯ ವಿಮರ್ಶನದಲ್ಲಿ ಬಲುದೊಡ್ಡ ಶೂನ್ಯವೊಂದು ಇದೆ. ಇದನ್ನು ಭರ್ತಿಮಾಡಲು ಪ್ರಭಾಕರ ಜೋಶಿ ಅವರಂತಹ ಹೊಸ ವರ್ಗದ ವಿದ್ವಾಂಸರ ಅಗತ್ಯವಿದೆ. ಇವರಲ್ಲಿರುವ ಗುಣವೆಂದರೆ ಇವರಿಗೆ ಕಲೆಯ ತಲಸ್ಪರ್ಶಿ ತಿಳುವಳಿಕೆಯಿದೆ. ಅದೇ ವೇಳೆ ವೃತ್ತಿಪರನಿಗೆ ಬಲು ಬಗೆಗಳಲ್ಲಿ ಇರಬಹುದಾದ ನಂಟು ಹಂಗುಗಳು ಇಲ್ಲ. ಯಕ್ಷಗಾನಕ್ಕೆ ಈಗ ಬೇಕಾಗಿರುವುದು ಯಾವ ಹಂಗೂ ಇಲ್ಲದ ವಸ್ತುನಿಷ್ಠವಾದ ವಿಮರ್ಶೆ. ಅದುವೇ ಶಾಸ್ತ್ರವೊಂದರ ಮೊಳಕೆ.
ಯಕ್ಷಗಾನವನ್ನು ಶಾಸ್ತ್ರೀಯ ರಂಗಕಲೆ ಎಂದು ಘೋಷಿಸಿ ಅದನ್ನು ಪೋಷಿಸಲು ಪ್ರತ್ಯೇಕ ವ್ಯವಸ್ಥೆಯೊಂದನ್ನು ರೂಪಿಸಲು ಇದು ಸಕಾಲ. ಹಾಗೆ ಘೋಷಿಸಲು ಹಿಂದೆಗೆಯುವ ಯಾವ ಕಾರಣವೂ ಇಲ್ಲಿಲ್ಲ. ಇಲ್ಲಿ ಕಲಾವಿದರಿಗಿರುವ ವಿಪುಲ ಸ್ವಾತಂತ್ರ್ಯವು
ಯಕ್ಷಗಾನವನ್ನು ಜಾನಪದವೋ ಎನ್ನುವ ಭ್ರಮೆಗೆ ಒಳಪಡಿಸುತ್ತದೆ ಅಷ್ಟೇ. ಜಾನಪದವೆಂದು ಹೆಸರಿಸಿ 'ಡೊಳ್ಳು ಕುಣಿತ'ದ ಸಾಲಿಗೆ ಸೇರಿಸಬಹುದಾದ ಕಲೆ ಅಲ್ಲ ಕರಾವಳಿಯ ಯಕ್ಷಗಾನ. ಇಲ್ಲಿನ ಲೇಖನಗಳನ್ನು ಓದಿದಾಗ ಈ ರಂಗ ಎಷ್ಟು ಶ್ರೀಮಂತ, ವ್ಯವಸ್ಥಿತ
ಮತ್ತು ಸಂಕೀರ್ಣ ಎನ್ನುವುದು ನಿಚ್ಚಳವಾಗುತ್ತದೆ. ಅದೇ ವೇಳೆ ವಿಮರ್ಶಾ ಅಭಿಯಾನ ಈಗ ಈ ರಂಗಕ್ಕೆ ಐತಿಹಾಸಿಕವಾಗಿ ಎಷ್ಟು ಅಗತ್ಯ ಎನ್ನುವುದೂ ಮನದಟ್ಟಾಗುತ್ತದೆ.
ನಮ್ಮ ದೇಶದಲ್ಲಿ ಓದು ಬರಹ ಹೆಚ್ಚಿದಂತೆಲ್ಲ ವಾಣಿಜ್ಯೀಕರನ ವ್ಯಾಪಿಸಿಕೊಂಡುದು ಒಂದು ವಿಚಿತ್ರ .ಒಂದು ತಲೆಮಾರಿನ ಹಿಂದೆ ಕೂಡಾ ಇಲ್ಲಿದ್ದ ಫ್ಯೂಡಲ್ ವ್ಯವಸ್ಥೆ
ತೊಲಗಿದುದರೊಂದಿಗೆ ಅದರಲ್ಲಿ ಅಂತರ್ಗತವಾಗಿದ್ದ ತ್ಯಾಗಬುದ್ಧಿ, ಕಷ್ಟಸಹಿಷ್ಣುತೆ ಇತ್ಯಾದಿ ಗುಣಗಳೂ ಮಂಗಮಾಯವಾಗಿದೆ. ಶಿಕ್ಷಣ ಪ್ರಸಾರದೊಂದಿಗೆ ಭಾರತೀಯ ಮನೋಭಾವದಲ್ಲಿ ವಾಣಿಜ್ಯಪರತೆ ಒಳಗೆ ಹೊಗೆಯಾಡುವುದನ್ನು ಇರಿಸಿಕೊಂಡು, ಹೊರಗೆ ತಿಳಿನಗೆ ಸೂಸುವ ವಣಿಕ್‌ಸ್ವಭಾವ ಇವು ನುಗ್ಗಿ ಸೇರಿಕೊಂಡುದು ನಿರ್ಲಿಪ್ತ
ಚಿಂತಕನನ್ನು ವಿಸ್ಮಯಕ್ಕೆ ತಳ್ಳಿದೆ. ನಿಜಕ್ಕಾದರೆ ಭಾರತೀಯ ಜನಪದ - ಜಾತಿ, ಮತ,
ಪುಟ:ಜಾಗರದ ಜೋಶಿ.pdf/೭೬
ಗೋಚರ
ಈ ಪುಟವನ್ನು ಪರಿಶೀಲಿಸಲಾಗಿದೆ
ಜಾಗರದ ಜೋಶಿ / 69