ಈ ಪುಟವನ್ನು ಪ್ರಕಟಿಸಲಾಗಿದೆ
ಒಟ್ಟಿನಲ್ಲಿ 'ಕೇದಗೆ' ಯಕ್ಷಗಾನದ ತಲಸ್ಪರ್ಶಿ ಅಧ್ಯಯನಕ್ಕೆ ಒಂದು ಬುನಾದಿಯನ್ನು ಹಾಕಿಕೊಟ್ಟಿದೆ. ಇವತ್ತು ಯಕ್ಷಗಾನವು ಡಾಕ್ಟರೇಟ್ ಬಿರುದಿಗಾಗಿ ಅಭ್ಯಸಿಸಲು ಅರ್ಹವಾದ ವಿಷಯವಾಗಿದೆ. ಯಕ್ಷಗಾನ ಪ್ರಸಂಗವು ಕಾಲೇಜಿನಲ್ಲಿ ಪಠ್ಯಪುಸ್ತಕವಾಗಿದೆ. ಇಂಥಲ್ಲಿ ವಿಮರ್ಶಾ ಸಾಹಿತ್ಯ ಈ ರಂಗದಲ್ಲಿ ಬರುವುದು ದ್ರವ್ಯದೃಷ್ಟಿಯಲ್ಲಿ ಲಾಭಕರ ಅಲ್ಲವಾದರೂ ತೀರಾ ಅಗತ್ಯ. ಕಲಾವಿದರು ಸಿದ್ಧಗೊಳ್ಳುವ ರೀತಿಯು ಈಚೆಗೆ ಬದಲಾಗಿದೆ. ವಿವಿಧ ಯಕ್ಷಗಾನ ಕೇಂದ್ರಗಳಿಂದ ಹೊರಬರುವ ಕಲಾವಿದರಿಗೆ ಇಂಥ ಗ್ರಂಥಗಳು ಕೈದೀವಿಗೆಯಾಗುತ್ತದೆ. ಕಲಾವಿದರಿಗೆ ತಮ್ಮ 'ಕಸುಬಿ'ನ ಬೆಲೆ ಗೊತ್ತಾಗುತ್ತದೆ. ಇದು ಕಲಾವಿದರಲ್ಲಿ, ಮೇಳ ಸಂಘಟಕನಲ್ಲಿ ಒಮ್ಮೆ ಮೂಡಿತಾದರೆ ಸಂಸ್ಕೃತಿಯ ಅಭ್ಯುದಯ ಅರಂಭವಾಯಿತೆಂದೇ ಅರ್ಥ. ಅದುವೇ 'ಜಾಗರ', 'ಕೇದಗೆ'ಗಳ ಅಂತಿಮ ಗುರಿ.
(19-12-1986)
ಜಾಗರದ ಜೋಶಿ / 72