ವಿಷಯಕ್ಕೆ ಹೋಗು

ಪುಟ:ಜಾಗರದ ಜೋಶಿ.pdf/೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಸಮೀಕರಣ ಮಾಡಿದಾಗ ಅದು ಸಾಮಗ್ರಿಗಳ ರೂಪದಲ್ಲಿ, ಕ್ರಿಯೆಗಳ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಯಕ್ಷಗಾನದ ವೇಷಭೂಷಣಗಳ ಸಾಮಗ್ರಿಗಳು, ಕುಣಿತ ಮತ್ತು ಮಾತುಗಾರಿಕೆಯ ನಡೆ - ಇವು ಹೇಗೆ ಪ್ರಕೃತಿಪ್ರೇರಿತ ಎನ್ನುವುದನ್ನು ವಿಶಿಷ್ಟ ಒಳನೋಟಗಳ ಮೂಲಕ ಚರ್ಚಿಸಲಾಗಿದೆ. ಯಕ್ಷಗಾನ ಪ್ರಸಂಗಗಳಲ್ಲಿ ಪ್ರಕಟವಾಗುವ ಭಾವಗಳು, ಕ್ರಿಯೆಗಳು ಹೇಗೆ ನಿಜ ಜೀವನದವು ಎನ್ನುವುದರ ಸೂಚನೆಯೂ ಇಲ್ಲಿದೆ. ವಾಸ್ತವಿಕತೆ ಮತ್ತು ಫ್ಯಾಂಟಸಿಗಳ ವೈರುಧ್ಯವನ್ನು ಯಕ್ಷಗಾನದ ರಚನೆಯ ಒಳಗಡೆ ವಿವರಿಸುವ ಯತ್ನವನ್ನು ಇಲ್ಲಿ ಮಾಡಲಾಗಿದೆ. ಕಾಲದ ವಿಭಜನೆಯು ಯಕ್ಷಗಾನದ ಆಕೃತಿಯನ್ನು ರೂಪಿಸಿದ ಕ್ರಮವನ್ನೂ ವಿಶ್ಲೇಷಿಸಲಾಗಿದೆ. ಈ ದೃಷ್ಟಿಯಿಂದ, ನಮಗೆ ಗೊತ್ತಿರುವ ಸಂಗತಿಗಳನ್ನೇ ನಿರ್ದಿಷ್ಟ ರಚನೆಗಳ ರೂಪದಲ್ಲಿ ಬೇರ್ಪಡಿಸಿ ಯಕ್ಷಗಾನವನ್ನು ಅಧ್ಯಯನ ಮಾಡಿರುವ ಈ ಕ್ರಮವು ಪರಿಚಿತ ಅಂಶಗಳ ಅಪರಿಚಿತ ಮುಖಗಳ ಮೇಲೆ ಬೆಳಕು ಚೆಲ್ಲುತ್ತದೆ. ಇಂತಹ ರಾಚನಿಕ ಅಧ್ಯಯನವು ನಿಸರ್ಗ ಮತ್ತು ಸಂಸ್ಕೃತಿ (Nature and Culture)ಗಳ ಸಂಬಂಧದಲ್ಲಿ ಮೊದಲನೆಯದರಿಂದ ಎರಡನೆಯದು ಪ್ರೇರಿತ ಎಂದು ಮಾತ್ರ ನೋಡುತ್ತದೆ. ಹೀಗಾಗಿ 'ಅನುಕರಣ ತತ್ವ' (Theory of memories)ದ ಮಿತಿಯು ಈ ರೀತಿಯ ಅಧ್ಯಯನ ವಿಧಾನಕ್ಕೂ ಇದೆ.

ತಾಳಮದ್ದಲೆಯ ಹಿಮ್ಮೇಳವನ್ನು ಕುರಿತ ಲೇಖನವು ಈಗಾಗಲೇ ಜೋಶಿ ಬರೆದಿರುವ ತಾಳಮದ್ದಳೆಯ ಮಾತುಗಾರಿಕೆ, ತಾಳಮದ್ದಳೆ, ಅರ್ಥಗಾರಿಕೆ ಇಂತಹ ಲೇಖನಗಳ ಜತೆ ಓದಬೇಕಾದ ಪ್ರಬಂಧ. ಸಾಮಾನ್ಯವಾಗಿ ತಾಳಮದ್ದಳೆ ಕುರಿತ ಚರ್ಚೆಗಳಲ್ಲಿ ಮಾತುಗಾರಿಕೆಯನ್ನು ಮಾತ್ರ ಒಂದು ಪ್ರತ್ಯೇಕಿತ ಚಟುವಟಿಕೆಯಾಗಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ತಾಳಮದ್ದಳೆಯನ್ನು 'ಒಂದು ರಂಗಭೂಮಿ' ಅನ್ನುವ ಸಮಗ್ರ ದೃಷ್ಟಿಕೋನದಿಂದ ಅಧ್ಯಯನ ಮಾಡಿದ ಈ ಲೇಖನವು ಜಾನಪದದ ಪ್ರದರ್ಶನ ಸಿದ್ಧಾಂತದ ಹಿನ್ನೆಲೆಯಲ್ಲಿ ಬಹಳ ಮಹತ್ವದ್ದು. ಜನಪದ ಕತೆಗಳನ್ನು ಹೇಳುವ ಸಂದರ್ಭಗಳನ್ನು ಕೂಡಾ ಒಂದು ಪ್ರದರ್ಶನ ಎಂದು ಅಧ್ಯಯನ ನಡೆಸುತ್ತಿರುವ ಇಂದಿನ ಸಂದರ್ಭದಲ್ಲಿ ಈ ಲೇಖನ ತನ್ನ ವ್ಯಾಪಕ ಸಾಮಗ್ರಿಗಳ ಮತ್ತು ವೈಜ್ಞಾನಿಕ ವಿಶ್ಲೇಷಣೆಯ ಕಾರಣಕ್ಕಾಗಿ ಪ್ರದರ್ಶನ ಸಿದ್ಧಾಂತಕ್ಕೆ ಹೊಸ ಆಯಾಮವನ್ನು ಸೇರಿಸಲು ಸಮರ್ಥವಾಗಿದೆ. ಪುಟ 31, 32ರಲ್ಲಿ 'ಕರ್ಣಾರ್ಜುನ ಪ್ರಸಂಗ'ದ ನಿದರ್ಶನದ ಮೂಲಕ, ರೇಖಾಚಿತ್ರಗಳ ನೆರವಿನಿಂದ ವಿವರಿಸಿದ ವಿಧಾನವು ಜಾನಪದದಂತಹ ಕ್ಷೇತ್ರಗಳಲ್ಲೂ ಅನ್ವಯಿಸಬಹುದಾದ ಒಂದು ಹೊಸ ಶೋಧವಾಗಿದೆ.

ತುಳು ಯಕ್ಷಗಾನದ ವಿಮರ್ಶೆಯು ಯಕ್ಷಗಾನ ಮತ್ತು ತುಳು ಎರಡು ಕ್ಷೇತ್ರಗಳಲ್ಲೂ ಒಂದು ವಿವಾದದ ವಿಷಯ. ಈ ಚರ್ಚೆಯಲ್ಲಿ ಸಾಮಾನ್ಯವಾಗಿ ಕಾಣಿಸುವುದು ಎರಡು ಅತಿರೇಕಗಳ ತುದಿಗಳು ಮಾತ್ರ ಒಂದು. ಯಕ್ಷಗಾನ ಪರಂಪರೆಗೆ ತುಳು ಭಾಷೆಯು ವಿರೋಧಿ ಅನ್ನುವುದು. ಇನ್ನೊಂದು, ತುಳುವಿನ ಅಭಿಮಾನದ ಪ್ರಕಟನೆ. ಈ ಎರಡೂ ಭಾವುಕತೆಗಳನ್ನು ಕಳಚಿಕೊಂಡು, ತುಳು ಯಕ್ಷಗಾನವನ್ನು ಸಮೀಕ್ಷಿಸುವ ವಿಮರ್ಶಿಸುವ

ಜಾಗರದ ಜೋಶಿ / 75