ತಾಳಮದ್ದಳೆಯಲ್ಲಿ ಪ್ರಸಿದ್ಧ ಪ್ರಸಂಗಗಳು. ನಮ್ಮ 'ದೊಡ್ಡ ತಾಳಮದ್ದಳೆಗಳಲ್ಲಿ
ಇವೇ ಕೆಲವು ಪ್ರಸಂಗಗಳನ್ನು ಪುನಃ ಪ್ರಯೋಗಿಸುತ್ತಾರೆ. ತಾಳ ಮದ್ದಳೆಗಳಿಗೆ
ಒಪ್ಪುವ ಅನೇಕ ಪ್ರಸಂಗಗಳು ಬೇರೆಯೂ ಇವೆ, ಇವನ್ನು ನಾವು ಬೆಳಕಿಗೆ ತರ
ಬೇಕಾಗಿದೆ. ಇದೊಂದು ಈ ರಂಗದ ತುರ್ತು ಅವಶ್ಯಕತೆ. ಗಿರಿಜಾಕಲ್ಯಾಣ,
ಕರ್ಣಾರ್ಜುನ, ಅಹಲ್ಯಾ ವೃತ್ತಾಂತ, ಊರ್ವಶಿ ಶಾಪ ಕಿರಾತಾರ್ಜುನ, ಕೀಚಕ
ವಧೆ, ಕುಮಾರ ವಿಜಯ, ರುಕಾಂಗದ ಮುಂತಾದ ಅನೇಕ ಪ್ರಸಂಗಗಳು ತಾಳ
ಮದ್ದಳೆಗಳಾಗಿ ಮೆರೆಯಬಲ್ಲವು.
ಈ ಕಲಾಪ್ರಕಾರದ ಬೆಳೆವಣಿಗೆಯ ಇತಿಹಾಸ ಕುತೂಹಲಕರವಾಗಿದೆ.
ಇದರಲ್ಲಿ ನಾಲ್ಕು ಹಂತಗಳನ್ನು ಗುರುತಿಸಬಹುದು. ಈ ನಾಲ್ಕು ಹಂತಗಳಲ್ಲಿ
ಅರ್ಥಗಾರಿಕೆ, ಜನರ ಅಭಿರುಚಿ, ತಾಳಮದ್ದಳೆ, ಪ್ರಯೋಗದ ರೀತಿ ಇವುಗಳೆಲ್ಲದರಲ್ಲಿ
ಬದಲಾವಣೆಗಳನ್ನು ಕಾಣುತ್ತೇವೆ. ಹಿಂದೊಮ್ಮೆ ಇದು ಅಸಭ್ಯರ ಕೂಟವೆಂದು,
ಶಿಷ್ಟ ಜನ ಇದರಿ೦ದ ದೂರವಿರುತ್ತಿದ್ದರ೦ತೆ. ಆಗ ಇದಕ್ಕೆ ವ್ಯವಸ್ಥೆ
ಸ೦ಯೋಜನೆ ಗಳು ಇರಲಿಲ್ಲ. “ಗದ್ದೆಯ ಪೈರಿಗೆ ಪ್ರಾಣಿಗಳ ಬಾಧೆ ಬಾರ
ದಂತೆ ಸದ್ದು ಮಾಡಲು ತಾಳ ಮದ್ದಳೆ ಮಾಡುತ್ತಿದ್ದರು” ಅನ್ನುತ್ತಾರೆ.
ಇದು ಅಣಕದ ಮಾತೋ ಸತ್ಯವೋ ಗೊತ್ತಿಲ್ಲ. ತಾಳಮದ್ದಳೆಗಳನ್ನು ಅನಿಷ್ಟ
ವೆನ್ನುವವರೂ ಇದ್ದರು. ಮದ್ದೋಳಿ ಪಾಡ್‌ಂಡಾ, ಗಂದ್ದೋಳಿ ತಪ್ಪಾಂದ್ ”
ಅನ್ನುವ ತುಳು ನಾಣ್ಣುಡಿ ಇದೆ. (ಮದ್ದಳೆ ಬಡಿದಲ್ಲಿ, ಜಗಳ ಬರುತ್ತದೆ ಎಂದು
ಇದರ ಅರ್ಥ.) ಅಂದರೆ ತಾಳಮದ್ದಳೆ ಆದ ಮನೆಯಲ್ಲಿ ಗೃಹಕಲಹ ಬಂದೀತೆಂಬ
ಶಂಕೆ ಈ ಹಂತದಲ್ಲಿ ಮಾತುಗಾರಿಕೆ ಅಪರಿಷ್ಕೃತವಾಗಿದ್ದು ತಾಳಮದ್ದಳೆ ಬೀದಿ
ಜಗಳದಂತೆ ಇತ್ತಂತೆ. ವಂಶಾವಳಿ, ವರ್ಣನೆ, ರಥ, ಧ್ವಜ, ಸೈನ್ಯ, ಸಂಖ್ಯೆ, ಇವು
ಆಗ ಭಾರೀ ಚರ್ಚೆಯ ವಿಷಯಗಳಾಗಿದ್ದುವು.
ಎರಡನೇ ಹಂತದಲ್ಲಿ ಇದು ತುಸು ವ್ಯವಸ್ಥೆ ಇರುವ ಕಾರ್ಯ ಕ್ರಮವಾಗಿ
ರೂಪುಗೊಳ್ಳಲು ಆರಂಭಿಸಿತು. ಪರಿಷ್ಕಾರ ಮೊದಲಾಯಿತು, ವಿದ್ಯಾವ೦ತರು
ಸಾಹಿತ್ಯಾಸಕ್ತರು ಇದರತ್ತ ಆಕರ್ಷಿತರಾದರು. ಆ ಮೊದಲು ಪ್ರಸಂಗವಾಗಲಿ,
ಪಾತ್ರಗಳಾಗಲಿ ಪೂರ್ವನಿಶ್ಚಿತವಾಗಿರಲಿಲ್ಲ. ಪಾತ್ರಗಳು ಬಂದವರಿಗೆ ಇದ್ದಷ್ಟು
ಎಂಬಂತಿತ್ತು. ಪದ್ಯ ಆರಂಭವಾದ ಮೇಲೆ 'ಈ ಪದ್ಯಕ್ಕೆ ನೀನು ಅರ್ಥಹೇಳು?
ಎಂದು ಯಾರಾದರೂ ಆಜ್ಞಾಪಿಸುತ್ತಿದ್ದರು. ಜಗಳವಾಗಿ ತಾಳಮದ್ದಳೆಗಳು ಅರ್ಧ
ದಲ್ಲಿ ನಿಲ್ಲುತ್ತಿದ್ದುವು.
ಎರಡನೇ ಹಂತದಲ್ಲಿ ತಿಳಿದವರ ಪ್ರವೇಶದಿಂದ ಕೆಲವು ಸುಧಾರಣೆಗಳಾ
ದುವು. ತಾಳಮದ್ದಳೆಯ ರೂಪ ಬದಲಾ ಯಿತು. ಪುರಾಣ ಜ್ಞಾನ, ಕಾವ್ಯ
ಪರಿಚಯ, ಸಂಸ್ಕೃತ ವಿದ್ವತ್ತು, ಭಾಷೆಯ ಸೊಬಗು, ನಾಟಕೀಯ ಪ್ರತಿಭೆ, ರಸಜ್ಞತೆ
ಪುಟ:ಜಾಗರ.pdf/೧೦೫
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ