ಸಂಪ್ರದಾಯ ಉಳಿಯಬೇಕು, ಸುಧಾರಣೆ ಆಗಬೇಕು ಎಂಬ ಎರಡೂ
ಅಭಿಪ್ರಾಯಗಳೂ ಸತ್ಯ. ಪ್ರಬುದ್ಧ ಸಂಪ್ರದಾಯವಾದಿ, ನೈಜ ಸುಧಾರಣಾವಾದಿ
ಇವರಿಬ್ಬರಲ್ಲಿ ಭಿನ್ನಾಭಿಪ್ರಾಯವೇ ಇಲ್ಲ. ಏಕೆಂದರೆ ಇಬ್ಬರು ಹೇಳುವುದೂ ಒಂದೇ.
ಸಮಸ್ಯೆ ಇರುವುದು ಸುಧಾರಣೆಯ ದಿಕ್ಕು, ರೀತಿ, ಗಾತ್ರಗಳಲ್ಲಿ.
ಯಕ್ಷಗಾನ ಪರಂಪರಾವಾದಕ್ಕೆ ಎದುರಾಗುವ ಮುಖ್ಯ ಪ್ರಶ್ನೆಗಳು ಹೀಗಿವೆ :-
1.ಸಾಂಪ್ರದಾಯಿಕ ಆಟಗಳಿಗೆ ಜನರ ಮೆಚ್ಚುಗೆ ಇಲ್ಲ.
2 ಜನರಿಗಾಗಿ ಹೊಸ ಬಗೆಯ ಬದಲಾವಣೆಗಳು ಬಂದುವು.
3 ಯಕ್ಷಗಾನಕ್ಕೆ ಶಾಸ್ತ್ರಾಧಾರವೆಲ್ಲಿದೆ?
4 ದಕ್ಷಿಣಾದಿ ಸಂಗೀತ, ಭರತನಾಟ್ಯಗಳನ್ನು ಆಟದಲ್ಲಿ ತಂದರೆ ತಪ್ಪೇನು? ಅದು
ಶಾಸ್ತ್ರೀಯವಲ್ಲವೆ?
5 ಶೈಲಿ ಯಾವುದಾದರೇನು? ವಸ್ತು, ಯಕ್ಷಗಾನದ ಮಾತುಗಾರಿಕೆಗಳು ಮುಖ್ಯ
ವಲ್ಲವೆ?
6 ಎಲ್ಲ ರಂಗಗಳಲ್ಲಿ ಪರಂಪರೆ ಹೋಗುತ್ತಿದೆ, ಅದು ಯಕ್ಷಗಾನದಲ್ಲೇಕೆ ಉಳಿಯ
ಬೇಕು?
7 ಯಕ್ಷಗಾನ ರಂಗಭೂಮಿಯಲ್ಲಿ ಸ್ವಯಂಪೂರ್ಣತೆ ಇದೆಯೆ? ಸಂಪ್ರದಾಯ
ದಲ್ಲಿ ಕೊರತೆಗಳೂ, ದೋಷಗಳೂ, ಅಸಂಬದ್ಧಗಳೂ, ವಿಕಾರಗಳೂ ಇಲ್ಲವೆ?
8 ಆಧುನಿಕ ಮನೋಧರ್ಮಕ್ಕೆ ಸೂಕ್ತವಾದ ಸುಧಾರಣೆ ಯಕ್ಷಗಾನಕ್ಕೆ ಅವಶ್ಯ
ವಲ್ಲವೆ?
9'ಪರಂಪರೆ' ಎಂದು ಕುಳಿತರೆ, ಮೇಳದ ಯಜಮಾನರು ಆರ್ಥಿಕವಾಗಿ ಬದುಕ
ಬೇಡವೆ? ಕಲಾವಿದರು ಬದುಕಬೇಡವೆ?
ಇವನ್ನೀಗ ಒಂದೊಂದಾಗಿ ಚರ್ಚಿಸೋಣ-
1 ಸಾಂಪ್ರದಾಯಿಕ ಆಟಗಳಿಗೆ ಜನರ ಬೆಂಬಲ ಇಲ್ಲ ಎಂಬುದು ನಿಜವಲ್ಲ. ಕೆಲವು
ವ್ಯವಸಾಯ ಮಂಡಳಿಗಳು ಸಾಂಪ್ರದಾಯಿಕ ಪದ್ಧತಿಯಲ್ಲಿ ಸೂಕ್ತ ನಾವೀನ್ಯ
ದೊಡನೆ ಆಟಗಳನ್ನಾಡಿ ಮೆಚ್ಚುಗೆ, ಸಂಪಾದನೆ ಎರಡನ್ನೂ ಗಳಿಸಿವೆ. ಇದಕ್ಕಿಂತ
ಮುಖ್ಯ ವಿಚಾರವೆಂದರೆ ಈ 'ಜನ' ಎಂದರೆ ಯಾರು? ಕೇವಲ ಬಹುಮತದ ಡೆಮಾ
ಕ್ರಸಿಯಿಂದ ಕಲಾ ಮೌಲ್ಯದ ನಿರ್ಧಾರ ಮೂರ್ಖತನವಾಗದೆ? ಕಲಾವಿದನಿಗೆ ಜನರ
ಅಭಿರುಚಿಗೆ ಸರಿಯಾದ ದಿಗ್ದರ್ಶನ ನೀಡುವ ಹೊಣೆ ಇಲ್ಲವೆ?
2 ಜನರು ಕಲಸುಮೇಲೋಗರದ ಆಟಗಳನ್ನು ಕೇಳಿದರೆ? ಅಲ್ಲ ಧೂರ್ತ