೩೨ / ಜಾಗರ
ಆಧಾರವೆಂದು ತಿಳಿದರೆ 16ನೇ ಶತಮಾನದಲ್ಲಿ ಮೇಳ ಇತ್ತು ಅನ್ನ ಬೇಕು.
ಆದರೆ
ಈಗ ದೊರಕಿರುವ ಆಧಾರಗಳಿಂದ ಮೇಳಗಳ ಇತಿಹಾಸ 17ನೇ ಶತಮಾನಕ್ಕಿಂತ
ಹಿಂದೆ ಹೋಗುವುದಿಲ್ಲ.
ನಮ್ಮ ಮೇಳಗಳ ಹಳೆಮಾದರಿ ಸಾಮಾಗ್ರಿಗಳೂ, ಹಳೆಯ ಕಲಾವಿದರೂ
ಸೂಚಿಸುವಂತೆ ಬಹುಶಃ ಯಕ್ಷಗಾನದಲ್ಲಿ “ತಿಟ್ಟುಗಳಿರಲಿಲ್ಲ. ಅದು ಬಹುತೇಕ
ಏಕರೂಪವಾಗಿತ್ತು. ಕಾಲಾಂತರದಲ್ಲಿ ಪ್ರಾದೇಶಿಕ ಭೇದಗಳುಂಟಾದವು.
ಈಗ ತೆಂಕು, ಬಡಗು, ಉತ್ತರ ಕನ್ನಡ - ಎಂಬ ಮೂರು ತಿಟ್ಟುಗಳನ್ನು ನಾವು
ಕಾಣುತ್ತೇವೆ. ಬಡಗು - ಉತ್ತರ ಕನ್ನಡ ಪದ್ಧತಿಗಳಲ್ಲಿ ವೇಷ ಭೂಷಣ, ಹಿನ್ನೆಲೆ
ಗಳಲ್ಲಿ ಸಾಮ್ಯ ಇದ್ದರೂ ರಂಗತಂತ್ರದ ಮಟ್ಟಿಗೆ ತುಂಬಾ ವ್ಯತ್ಯಾಸಗಳಿರುವುದರಿಂದ
ಉತ್ತರ ಕನ್ನಡದ ಆಟಗಳನ್ನು ನಾನು ಪ್ರತ್ಯೇಕ ಶೈಲಿಯೆಂದು ಗುರುತಿಸಿದ್ದೇನೆ. ಈ
ಮೂರು ಪದ್ಧತಿಗಳಲ್ಲಿ ಈಗ ಇರುವ ಮತ್ತು ಹಿಂದೆ ಆಗಿಹೋದ ಈ ಕೆಳಗಿನ
ಮೇಳಗಳು ನನ್ನ ಗಮನಕ್ಕೆ ಬಂದಿವೆ.
1. ಕುತ್ಯಾಳ ಶ್ರೀ ಗೋಪಾಲಕೃಷ್ಣ ಮೇಳ ಕೂಡ್ಲು
2. ಶ್ರೀ ಮಂದರ್ತಿ ದುರ್ಗಾಪರಮೇಶ್ವರಿ ಮೇಳ
3. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ
4. ಶ್ರೀ ಪೆರ್ಡೂರು ಮೇಳ
5. ಶ್ರೀ ಮಾರಣಕಟ್ಟ ಮೇಳ
6. ಶ್ರೀ ಮಹಾಮಾಯಿ ಯಕ್ಷಗಾನ ನಾಟಕಸಭಾ, ಸುರತ್ಕಲ್ಲು
7. ಶ್ರೀ ಕರ್ನಾಟಕ ಯಕ್ಷಗಾನ ನಾಟಕಸಭಾ, ಮಂಗಳೂರು
8. ಇರಾ ಶ್ರೀ ಸೋಮನಾಥೇಶ್ವರ ಯಕ್ಷಗಾನ ನಾಟಕಸಭಾ, ಕುಂಡಾವು
9. ಶ್ರೀ ಅಮೃತೇಶ್ವರಿ ಯಕ್ಷಗಾನ ಮಂಡಳಿ, ಕೋಟ
10. ಶ್ರೀ ಕರ್ಕಿ ಮೇಳ
11. ಶ್ರೀ ಇಡಗುಂಜಿ ಮಹಾಗಣಪತಿ ಪ್ರಸಾದಿತ ಯಕ್ಷಗಾನ ಮಂಡಳಿ
12. ಶ್ರೀ ಸುಬ್ರಹ್ಮಣ್ಯ ಮೇಳ, ಪುತ್ತೂರು
13. ಶ್ರೀ ಕಟೀಲು ಮೇಳ (2)
14. ಶ್ರೀ ಗುರು ಪ್ರಸಾದಿತ ಯಕ್ಷಗಾನ ಮಂಡಳಿ ಸಾಲಿಗ್ರಾಮ
15. ಶ್ರೀ ಕಮಲ ಶಿಲೆ ಮೇಳ
16. ಶ್ರೀ ಗೂಳೆಗರಡಿ ಮೇಳ
17. ಶ್ರೀ ಸುಂಕದ ಕಟ್ಟೆ ಮೇಳ
18. ಯಕ್ಷರಂಗ ಉಡುಪಿ (ಡಾ ಶಿವರಾಮ ಕಾರಂತರ ಯಕ್ಷಗಾನ -
ಬ್ಯಾಲೆ ತಂಡ)
ಪುಟ:ಜಾಗರ.pdf/೪೦
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ