ಮೇಳಗಳ ಸಂಚಾರ ಕ್ರಮ
ಎಲ್ಲ ಮೇಳಗಳೂ ಸಾಮಾನ್ಯವಾಗಿ ನವಂಬರದಿಂದ, ಮೇ ಅಂತ್ಯದ ವರೆಗೆ
(ಪತ್ತನಾಜೆವರೆಗೆ - ಅಂದರೆ ವೃಷಭ ಮಾಸದ ಹತ್ತನೆಯ ದಿನದವರೆಗೆ) ಸಂಚರಿಸು
ತ್ತದೆ. ಆರಂಭದ ದಿನ ಮೇಳಕ್ಕೆ ಸಂಬಂಧಿಸಿದ ದೇವಸ್ಥಾನದ ಸಂಪ್ರದಾಯಕ್ಕನು
ಸರಿಸಿ ಇರುತ್ತದೆ. ಕರ್ನಾಟಕ, ಸುರತ್ಕಲ್ಲು, ಇಡಗುಂಜಿ, ಸಾಲಿಗ್ರಾಮ ಮುಂತಾದ
ಕೆಲವು ಮೇಳಗಳ ಆರಂಭದ ದಿನವನ್ನು ವ್ಯವಸ್ಥಾಪಕರೇ ನಿರ್ಧರಿಸುತ್ತಾರೆ. ಇವು
'ಪತ್ತನಾಜೆ' ಗಿಂತ ಮೊದಲೇ ಸಂಚಾರ ನಿಲ್ಲಿಸುವುದೂ ಇದೆ.
ಹಳೆಯ ಕ್ರಮದಂತೆ :- ಆಮೇಲೆ ಮೇಳವು ಆಯಾ ದಿನ ಹರಕೆ ಆಟ ನಿಶ್ಚಿತ
ವಾಗಿರುವಲ್ಲಿಗೆ ಹೋಗುತ್ತದೆ. ಆಟ ಆಡಿಸುವವರಲ್ಲಿ ಒಂದು ನಿರ್ದಿಷ್ಟ ಕ್ರಮದಿಂದ
ಒಂದು ಚಿಕ್ಕ ತಾಳಮದ್ದಲೆ ನಡೆಯುತ್ತದೆ. ಆಟ ನಿರ್ಧಾರವಾಗದಿದ್ದ ದಿನ ಮೇಳ
ದವರು ಊರಿನ ಪ್ರಮುಖರೊಬ್ಬರಲ್ಲಿ ತಾವಾಗಿ ಹೋಗಿ ತಾಳಮದ್ದಲೆ ಮಾಡು
ತಿದ್ದರು. ಇದು ಅವರ ಹರಕೆ ಇರುವ ಬಗ್ಗೆ ಸೂಚನೆ ಅಥವಾ ಅವರು ಆಟ
ಆಡಿಸಬೇಕೆಂಬ ಕೇಳಿಕೆ ಮುಂದಿರಿಸುವ ಕ್ರಮವೂ ಹೌದು. ಸಂಚಾರಕ್ಕೆ ಹೊರ
ಡುವ ಮುನ್ನ ಮೇಳ ಸಂಬಂಧಿಸಿದ ದೇವಸ್ಥಾನದಲ್ಲಿ ಆಟವನ್ನು ಆಡುತ್ತದೆ.
ಸೇವೆಗಾಗಿ ಸಾಮಾನ್ಯವಾಗಿ ಪಾಂಡವಾಶ್ವಮೇಧ ಅಥವಾ ಯಾವುದೇ ಕಲ್ಯಾಣ'
ಪ್ರಸಂಗವನ್ನಾಡುವುದು ಪದ್ಧತಿ.
ಈ ತಾಳ ಮದ್ದಲೆ ಮುಗಿಸಿ ಆಟದವರು ಊಟ, ಸ್ನಾನ ತೀರಿಸಿ, ನಿದ್ದೆ
ಮಾಡುತ್ತಾರೆ. ಆಟ ಪೂರ್ವ ನಿಶ್ಚಿತವಾಗಿದ್ದರೆ ಕಲಾವಿದರು ಬರುವ ಮೊದಲೇ
ಅಡ್ಡ ಹೊರೆಯವನು (ಸಾಮಾಗ್ರಿ ಹೊರುವವನು) ಮತ್ತು ಅಡಿಗೆಯವನು
ಮೊದಲಿನ ದಿನದ ಆಟದ ಬಳಿಯಿಂದ ಹೊರಟು ಅಲ್ಲಿಗೆ ಬಂದಿರುತ್ತಾರೆ. ಅವರಿಗೆ
ಅವಶ್ಯ ಸಾಮಾನುಗಳನ್ನು ಆಟ ಆಡಿಸುವವರು ಕೊಡುತ್ತಾರೆ. ಇಂತಿಂತಹದನ್ನು
ಕೊಡಬೇಕೆಂಬ ಬಗ್ಗೆ ಒಂದು ನಿಶ್ಚಿತ 'ಪಟ್ಟಿ' ಇರುತ್ತದೆ.
ಸಂಜೆ ಸುಮಾರು ಏಳು ಗಂಟೆಗೆ ಚಂಡೆ ಮದ್ದಲೆಯ 'ಕೇಳಿ' ಬಡಿಯು
ತ್ತಾರೆ. ಇದು ಸುತ್ತಲಿನ ಜನರಿಗೆ ಆಟದ ಸೂಚನೆ. (ಕೇಳೆ ಕೇಳುವುದಕ್ಕೆ - ಕೇಳಿ)
ಆ ಬಳಿಕ ವೇಷಧಾರಿಗಳು ಊಟ ಮುಗಿಸಿ ಚೌಕಿಗೆ ಬರುತ್ತಾರೆ. ಆಗಲೇ ಆಟದ
ಪೂರ್ವರಂಗ ಆರಂಭ, ಕೋಡಂಗಿ, ಬಾಲಗೋಪಾಲ (ನಿತ್ಯವೇಷ) ಅರ್ಧನಾರೀಶ್ವರ
ಷಣ್ಮುಖ, ಸುಬ್ರಾಯ, ಜೋಡುವೇಷ, ಮುಖ್ಯ ಸ್ತ್ರೀವೇಷಗಳು ಕ್ರಮವಾಗಿ
ರಂಗಕ್ಕೆ ಬರುತ್ತವೆ. ಬಾಲಗೋಪಾಲರು (ಬಲರಾಮ - ಗೋಪಾಲ) ರಂಗದಲ್ಲಿ
ಗಣಪತಿ ಪೂಜೆ ನಡೆಸುತ್ತಾರೆ. ಈ ಮಧ್ಯೆ ಗುಲ್ಲಾ ಮಲ್ಲಿ (ಉ. ಕ.) ಕೊಕ್ಕೆ ಚಿಕ್ಕ,