ರಂಗಸ್ಥಳ, ರಂಗದ ಎದುರು ಕಂಬಗಳು, ಇವುಗಳಿಂದ ವೇಷಗಳು ಎದ್ದು ಕಾಣಲು
ತೊಡಕು. ರಂಗಸ್ಥಳ, ದೀಪವ್ಯವಸ್ಥೆ ಬಗ್ಗೆ ಪುನರ್ವಿಮರ್ಶೆ ವ್ಯವಸ್ಥೆ ಆಗಬೇಕಾಗಿದೆ.
ಈ ಬಗ್ಗೆ ಶ್ರೀ ಶೇಣಿ ಗೋಪಾಲಕೃಷ್ಣ ಭಟ್ ( ಕೂಡ್ಲು ಮೇಳದಲ್ಲಿ ) ಶ್ರೀ ಶಂಭು
ಹೆಗಡೆ (ಇಡಗುಂಜಿ ಮೇಳ ) ಯೋಚಿಸಿ, ಅಳವಡಿಸಲು ಯತ್ನಿಸಿದ್ದಾರೆ. [ ಡಾ|
ಕಾರಂತರ 'ಯಕ್ಷರಂಗ' ಪ್ರಯೋಗಗಳು ಈ ದಿಸೆಯಲ್ಲಿ ಕೆಲಸ ಮಾಡಿವೆ. ]
4 ಚೌಕಿ ( ಬಣ್ಣದ ಮನೆ )ಯಲ್ಲಿನ ವ್ಯವಸ್ಥೆ ಇನ್ನೂ ತುಂಬ ಸುಧಾರಿಸಲು ಅವ
ಕಾಶ ಇದೆ, ಬಣ್ಣದ ಮನೆಯಲ್ಲಿ ಈಗಿನ ಕ್ರಮದಂತೆ ಸ್ಥಳ ಇಕ್ಕಟ್ಟು. ಮೇಕಪ್,
ವೇಷತೊಡುವಿಕೆ ಎಲ್ಲಾ ಒಂದೇ ಕಡೆ. ಕಲಾವಿದರಿಗೆ ಸಂದರ್ಶಕರಿದ್ದರೆ ಅಲ್ಲೆ
ಕುಳಿತುಕೊಳ್ಳಬೇಕು. ಕಲಾವಿದರಿಗೆ ತಮ್ಮ ವಿರಾಮ ಕಳೆಯಲು ಪ್ರತ್ಯೇಕ ವ್ಯವಸ್ಥೆ ಇಲ್ಲ.
ಚೌಕಿಗಳಲ್ಲಿ ಈ ಬಗ್ಗೆ ಪ್ರತ್ಯೇಕ ವ್ಯವಸ್ಥೆ, ವಿಸ್ತ್ರತ ಸ್ಥಳದ ಅವಕಾಶ
ಕಲ್ಪಿಸುವ ವ್ಯವಸ್ಥೆ ಆಗಬೇಕು.
5 ಆಟದ ಕಾಲಾವಧಿಯನ್ನು ನಾಲ್ಕು - ನಾಲ್ಕೂವರೆ ತಾಸುಗಳಿಗೆ ಇಳಿಸುವ ಸಲ
ಹೆಯೊಂದು ಚರ್ಚಿತವಾಗಿದೆ. ಇದೊಂದು ಆಳವಾಗಿ ಯೋಚಿಸಬೇಕಾದ ಸೂಚನೆ.
ಇದರಿಂದ ಕಲಾವಿದರಿಗೆ ಹೆಚ್ಚು ವಿಶ್ರಾಂತಿ ಸಿಗುತ್ತದೆ. ಅನಾವಶ್ಯಕ ದೀರ್ಘ ಬಳಸುವ
ಹವ್ಯಾಸ ಮಾತ್ರ ತಪ್ಪುತ್ತದೆ. ರಂಗದ ಅನೇಕ ಅಸಂಬದ್ಧಗಳು ದೂರವಾಗಿ ಪ್ರದ
ರ್ಶನ ಹೆಚ್ಚು ವ್ಯವಸ್ಥಿತವಾಗುತ್ತದೆ. ಇಂತಹ ಪ್ರಸಂಗಗಳನ್ನು ಮಂಗಳೂರಲ್ಲಿ ಸಾಲಿ
ಗ್ರಾಮ ಮೇಳ ಮಾಡಿತ್ತು.
ಇದರ ವಿರುದ್ಧ ಮುಖ್ಯವಾಗಿ ಎರಡು ಆಕ್ಷೇಪಗಳಿವೆ-
1 ಅರ್ಧರಾತ್ರಿ ಆಟ ಮುಗಿದರೆ ಪ್ರೇಕ್ಷಕರೇನು ಮಾಡಬೇಕು?
2 ಇದರಿಂದ ಕೆಲವು ಕಲಾವಿದರು ನಿರುದ್ಯೋಗಿಗಳಾಗುತ್ತಾರೆ.
ಅರ್ಧರಾತ್ರಿ ಸಿನಿಮಾ, ನಾಟಕ, ಸರ್ಕಸ್ಸು ಮುಗಿದಾಗ ಪ್ರೇಕ್ಷಕರೇನು ಮಾಡುತ್ತಾರೆ?
ಹಾಗೇ ಇದಕ್ಕೂ ಹೊಂದಿಕೊಳ್ಳುತ್ತಾರೆ. ಎರಡನೆಯದಾಗಿ ನಿರುದ್ಯೋಗದ ಪ್ರಶ್ನೆ.
ಈ ಸಲಹೆ ಕಾರ್ಯಗತಗೊಂಡರೆ ಮೇಳಗಳು ಹೆಚ್ಚಬಹುದು ಯಾ ಸಮರ್ಥ ಕಲಾ
ವಿದರು ಮಾತ್ರ ರಂಗದಲ್ಲಿ ಉಳಿದಾರು.
ಕಲಾವಿದರಿಗೆ ಸಂಬಂಧಿಸಿ:-
1. ಕಲಾವಿದರಿಗೆ ಬಹುಶಃ ಇನ್ನೂ ಹೆಚ್ಚಿನ ಸೌಲಭ್ಯ ದೊರಕಿಸಲು ಕೆಲವು ಮೇಳ
ಪುಟ:ಜಾಗರ.pdf/೫೯
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
ಯಕ್ಷಗಾನ ಮೇಳಗಳು / ೫೧