ಈ ಪುಟವನ್ನು ಪ್ರಕಟಿಸಲಾಗಿದೆ
ಅಭಿನಯ / ೭೯
ಅಂತರಂಗಕ್ಕೆ ನಾವು ಹೆಚ್ಚು ಸಂಕೀರ್ಣತೆಯನ್ನೂ ವೈವಿಧ್ಯವನ್ನು ತುಂಬುವ ಯತ್ನ
ಮಾಡಬೇಕು. ಆಗ ಆಟವು ನೀಡುವ ಜೀವನ ದರ್ಶನ ಹೆಚ್ಚು ವಿಶಾಲವೂ
ಪರಿಪುಷ್ಟವೂ ಆದೀತು. ಆಗ ಅಭಿನಯದಲ್ಲಿ ಅದಕ್ಕೆ ಸಂವಾದಿಯಾದ ಕ್ರಾಂತಿ
ಉಂಟಾಗಲು ಸಾಧ್ಯ. ಪಾತ್ರಗಳ ಮನಸ್ಸಿನ ಸಾಧ್ಯತೆ ಹೆಚ್ಚಿದಾಗ ಅಭಿನಯದ
ಸಂಭಾವ್ಯತೆಗಳು ಹೆಚ್ಚಿ, ಹೊಸ ಸವಾಲುಗಳು ಕಲಾವಿದನಿಗೆ ಒದಗಿ ಅದರಿಂದ ಕಲೆಯ
ಪ್ರಗತಿ ಆಗುತ್ತದೆ.
20.12.1980 - ದ. ಕ. ಕಲಾವಿದರ ಸಂಘದ ವಿಚಾರಗೋಷ್ಠಿಯಲ್ಲಿ ಮಂಡಿಸಿದ ಪ್ರಬಂಧ