ಉರುಟಾದ ಪ್ರಭಾವಳಿಯ ವರ್ತುಲ, ಸ್ವಲ್ಪ ದೊಡ್ಡದಾದ ಕರ್ಣಪತ್ರಗಳಿದ್ದು,
ಮುಖವರ್ಣಿಕೆಯಲ್ಲಿ ಕಣ್ಣಿನಡಿ ಕೆಂಪು, ಹಸುರು ಗೆರೆಗಳು - ಹೀಗೆ ಅಳವಡಿಸ
ಬಹುದು. ಈ ಬಗೆಗೆ ಚಿತ್ರಕಾರರೂ, ಕಲಾವಿದರೂ, ಕಲಾಭಿಜ್ಞರೂ ಕೂಡಿ ಚರ್ಚಿಸ
ಬೇಕು.
ರಾವಣನ ಪಾತ್ರಕ್ಕೆ, ರಾಜ ವೇಷವನ್ನೆ ಒಂದಿಷ್ಟು ಪರಿವರ್ತಿಸಿ,
ಒಂದು ಪ್ರಾಯೋಗಿಕ ವೇಷ ವಿಧಾನವನ್ನು ಮೂರೂರು ದೇವರ ಹೆಗ್ಡೆ, ಕೆರೆಮನೆ
ಮಹಾಬಲ ಹೆಗ್ಡೆ, ಗೋಡೆ ನಾರಾಯಣ ಹೆಗ್ಡೆ ಇವರು ಬಳಸಿದ್ದಾರೆ. ಅದನ್ನು
ಇನ್ನಷ್ಟು ಪರಿಷ್ಕರಿಸಿ ಹೊಂದಿಸಬಹುದು.
ಈ ಹೊಸ ವೇಷವಿಧಾನವನ್ನು ರಾವಣನ ಪಾತ್ರಕ್ಕೆ ಎಲ್ಲ ಪ್ರಸಂಗಗಳಲ್ಲಿ
ಬಳಸಬೇಕೆಂದಿಲ್ಲ. ರಾವಣನಂತಹ ಪಾತ್ರಕ್ಕೆ ಎರಡು, ಮೂರು ರೀತಿಯ ವೇಷ
ಗಾರಿಕೆ ಬಳಸಬಹುದು. ಕುಂಭಕರ್ಣಕಾಳಗ, ಅತಿಕಾಯ ಕಾಳಗ, ಕಾರ್ತವೀರಾ
ರ್ಜುನ ಮುಂತಾದ ಪ್ರಸಂಗಗಳಿಗೆ ಹಳೆರೀತಿಯ ಬಣ್ಣದ ವೇಷವನ್ನೂ, ಚೂಡಾಮಣಿ
ಯಲ್ಲಿ ಶೃಂಗಾರ ರಾವಣನನ್ನೂ, ಉಳಿದೆಡೆ ಸಂದರ್ಭಾನುಸಾರವಾಗಿ ಪರಿಷ್ಕೃತ ವೇಷ
ವನ್ನೂ ಪ್ರಯೋಗಿಸಬಹುದು.
ರಾವಣ ವಧೆಯಲ್ಲಿ, ರಾವಣ, ಮಂಡೋದರಿ ಸಂವಾದಕ್ಕೆ ಸೂಚಿತವಾದ
ಹೊಸ ವೇಷ, ಯುದ್ಧಕ್ಕೆ ಬಣ್ಣದ ವೇಷ ಮತ್ತು ಕೊನೆಗೆ ರಾವಣನ ಆತ್ಮಾರ್ಪಣೆಯ
ಸಂದರ್ಭಕ್ಕೆ ಪುನಃ ಮೊದಲ ವೇಷ - ಹೀಗೆ ಪ್ರಯೋಗಿಸುವ ಸಾಧ್ಯತೆ ಪರಿಶೀಲ
ನಾರ್ಹ. ಇದು ಪ್ರಸಂಗದ ಕಥಾತಂತ್ರಕ್ಕೂ ಹೊಂದಿಕೆಯಾಗುತ್ತದೆ. ಮಂಡೋದರಿ
ಯೊಂದಿಗೆ ತಾನು ಹೇಗೆ ರಾಮನನ್ನು ವಿರೋಧ ಭಕ್ತಿಯಿ೦ದ ಇದಿರಿಸುತ್ತೇನೆ
ಎಂಬ ಒಳಮರ್ಮವನ್ನು ಹೇಳುವುದು, ಕೊನೆಗೆ ರಾವಣನಲ್ಲಿ ಶ್ರೀಮನ್ನಾರಾಯಣ
ನನ್ನು ಕಾಣುವುದು - ಇದು ಪ್ರಸಂಗದ ಆಶಯ. ವೇಷ ವೈವಿಧ್ಯದ ಮೂಲಕ,
ರಾವಣನ ಪಾತ್ರದ ಸಂಕೀರ್ಣ ಸ್ವಭಾವವನ್ನು ಅಭಿವ್ಯಕ್ತಿಸಿದರೆ, ತುಂಬ ಪರಿಣಾಮ
ಕಾರಿಯಾಗಬಹುದು.
ಯಕ್ಷಗಾನ ದ ವೇಷಗಳಲ್ಲಿ ಸುಧಾರಣೆ, ನವೀನ ಸೃಷ್ಟಿಗಳಿಗೆ ಅವಕಾಶ
ಇದೆ. ಆದರೆ ಅದು ಯಕ್ಷಗಾನದ ಶೈಲಿಯ ಜಾಡಿನಲ್ಲಿ ಆಗಬೇಕಾದ ಕೆಲಸ.
ನಾಟಕ ಶೈಲಿಯ ವೇಷಗಳಿಂದ, ಕ್ಯಾಲೆಂಡರ್ ಚಿತ್ರಗಳಿಂದ ಸ್ಫೂರ್ತಿ ಪಡೆದು ಬರುವ
ಬದಲಾವಣೆ ಯಕ್ಷಗಾನ ರಂಗದ ದೊಡ್ಡ ದುರಂತ, ಆಧುನಿಕತೆಯ ಹತ್ತು ಮುಖ
ಗಳ ಹೊಡೆತದ ಮಧ್ಯೆ, ಜನಪ್ರಿಯ ಕಲೆಗಳ ಸೆಳವಿನ ಸುಳಿಯಲ್ಲಿ ಯಕ್ಷಗಾನ ಶೈಲಿ
ಉಳಿದು ಬೆಳೆಯಬೇಕಾದರೆ, ಆ ಶೈಲಿಯ ಬಗೆಗಿನ ತೀವ್ರವಾದ ನಿಷ್ಠೆ ಮತ್ತು ಎಚ್ಚರ
ಪುಟ:ಜಾಗರ.pdf/೯೩
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
ನಾಲ್ಕು ವೇಷಗಳು / ೮೫