ಕಂಟಕನಾದ ಆ ದುರಾತ್ಮನನ್ನು ನಿಗ್ರಹಿಸಬೇಕೆಂಬ ನನ್ನ ಪ್ರಯತ್ನವು ಸಫಲವಾದರೂ ಆಗಲಿ ; ಅಥವಾ, ಇವನನ್ನು ನಿಗ್ರಹಿಸುವುದರಲ್ಲಿ ನನಗೆ ಪಾಣಹಾನಿಯುಂಟಾದರೂ ಆಗಲಿ. ಇವೆರಡೂ ನನಗೆ ಕೀರ್ತಿಕರವಾಗಿಯೇ ಇರುವುವು. ಈ ವಿಷಯದಲ್ಲಿ ನೀನು ಸ್ವಲ್ಪವೂ ವ್ಯಸನಪಡಬೇಡ. "ಜಾತಸ್ಯ ಮರಣಂ ಧ್ರುವಂ" ಎಂಬಂತೆ ಹುಟ್ಟಿದವರಿಗೆ ಮರಣವು ಸಿದ್ಧವಾಗಿರುವುದು. ಇಂಥ ಕಾರ್ಯಕೊಸ್ಕರ ಪ್ರಾಣವನ್ನು ಕೊಡುವವನೇ ಧನ್ಯನೆನ್ನಿಸಿಕೊಳ್ಳುವನಲ್ಲವೆ!
ಪರಂತಪ -ಅಯ್ಯಾ ! ಪೂಜ್ಯನಾದ ಮಾಧವನೆ ! ಈಗಿಗ ನಿನ್ನ ಸಂಕಲ್ಪವು ಅತ್ಯತ್ತಮವೆಂಬ ಭಾವವು ನನ್ನಲ್ಲಿ ನೆಲೆಗೊಂಡಿತು. ಇತರರ ಕ್ಷೇಮಕ್ಕೋಸ್ಕರ ದ್ಯೂತಾಸಕನಾಗಿರುವ ಈ ನಿನ್ನ ಲೋಕವಿಲಕ್ಷಣವಾದ ಅಭಿಪ್ರಾಯವು ನನಗೆ ತಿಳಿಯದಿದ್ದ ಕಾರಣ, ಆ ಕಾರ್ಯದಲ್ಲಿ ನಿನ್ನನ್ನು ನಾನು ವಿರೋಧಿಸಿದೆನು. ಲೋಕದಲ್ಲಿ ಪ್ರತಿದಿವಸವೂ ಎಷ್ಟೋ ಜನರು ಸಾಯುವರು. ಆದರೆ, ಲೋಕಕಂಟಕ ನಿವಾರಣೆಗೋಸ್ಕರ ತನ್ನ ಪ್ರಾಣವನ್ನಾದರೂ ಒಪ್ಪಿಸುವುದರಲ್ಲಿ ಸಿದ್ಧನಾಗಿರುವ ನಿನ್ನಂಥ ದೃಢಸಂಕಲ್ಪರನ್ನು ನಾನು ನೋಡಿರಲಿಲ್ಲ. ನೀನು ಹೋಗು. ಆ ದುರಾತ್ಮನನ್ನು ನಿಗ್ರಹಿಸುವುದಕ್ಕೆ ಪ್ರಯತ್ನಿಸು. ನಾನು ನಿನಗೆ ಬೆಂಬಲವಾಗಿ ಬರುವೆನು.
ಮಾಧವ-ಈ ನಿನ್ನಿಂದ ಹೇಳಲ್ಪಟ್ಟ ಮಾತುಗಳೇ ನಿನ್ನ ಧರ್ಮಾಸಕ್ತತೆಯನ್ನು ಪ್ರಕಟಿಸುವುವು. ಅದು ಹಾಗಿರಲಿ; ಇದೋ ಈ ವಜ್ರದ ಉಂಗುರವನ್ನು ತೆಗೆದುಕೊ, ಇದು ನಮಗೆ ವಂಶಪರಂಪರೆಯಾಗಿ ಬಂದಿರತಕ್ಕ ಅಭಿಜ್ಞಾನವಸ್ತು. ನಾನು ಒಂದುವೇಳೆ ಈ ದಿನ ರಾತ್ರಿ ಆ ದುರಾತ್ಮ ನಿಂದ ಸಂಹೃತನಾದ ಪಕ್ಷದಲ್ಲಿ, ಈ ಉಂಗುರವನ್ನು ನನ್ನ ಅಣ್ಣನಿಗೆ ತೋರಿಸು. ಆಗ ಅವನಿಗೆ ನಿನ್ನಲ್ಲಿ ಭಾತೃವಾತ್ಸಲ್ಯವುಂಟಾಗುವುದರಲ್ಲಿ
ಸಂಶಯವಿಲ್ಲ: ಇದಲ್ಲದೆ, ನಿನಗೆ ಬೇಕಾದ ಇಷ್ಟಾರ್ಥಗಳನ್ನೆಲ್ಲ ಅವನಿಂದ ಪಡೆಯಬಹುದು. ಹೀಗಲ್ಲದೆ, ಈ ವುಂಗುರುವೇನಾದರೂ ನನ್ನಲ್ಲಿ ಜ್ಞಾತಿ ಮಾತ್ಸರ್ಯವನ್ನಿಟ್ಟಿರುವ ನನ್ನ ಅಣ್ಣನ ಮಗನಾದ ಶಂಬರನಿಗೆ ಸಿಕ್ಕಿದ ಪಕ್ಷದಲ್ಲಿ, ಆಗ ನೀನು ಮೃತ್ಯುವಶನಾಗುವೆ. ಆದುದರಿಂದ, ಈ ವಿಷಯದಲ್ಲಿ ನೀನು ಬಹು ಜಾಗರೂಕನಾಗಿರತಕ್ಕದು. ಈ ರಾತ್ರಿ ದ್ಯೂತಗೃಹಕ್ಕೆ ಬಾ;