ರೂಪಿಸುತ್ತವೆ. ಹೀಗಾಗಿ ನಾವು ಐತಿಹಾಸಿಕ ಪ್ರಜ್ಞೆಯನ್ನು ಒಟ್ಟು ಸಾಂಸ್ಕೃತಿಕ
ಪ್ರವಾಹದ ವಿವಿಧ ಘಟ್ಟಗಳ ಬಗೆಗೆ ಪ್ರಜ್ಞೆ ಇಲ್ಲದೆ, ವ್ಯವಹರಿಸಲಾಗುವುದಿಲ್ಲ
ಎಂಬುದು ನಿಜ. ಆದರೆ, ಬರಿಯ ಒಂದು ನೃತ್ಯ ಕಾರ್ಯಕ್ರಮ ಅಥವಾ ಶಾಸ್ತ್ರೀಯ
ಸಂಗೀತದ ವಸ್ತುನಿರ್ವಹಣೆಯ ಸಂದರ್ಭಗಳು, ಯಕ್ಷಗಾನವೆಂಬ ನಾಟಕದ ಸಂದರ್ಭ-
ಇವು ಬೇರೆಬೇರೆ. ಶಾಸ್ತ್ರೀಯ ಸಂಗೀತ ಮತ್ತು ನೃತ್ಯಗಳು ಪ್ರಧಾನವಾಗಿ ರೂಪ
ಪ್ರಧಾನವಾದ ಕಲೆಗಳು. ಅಲ್ಲಿ ಪ್ರತಿಪಾದಿತವಾಗುವ ಅಭಿಪ್ರಾಯ (ಆಶಯ)ಕ್ಕೆ
ಮಹತ್ವವಿಲ್ಲ. ಬುದ್ಧನ ಬಗೆಗೆ ನಾಟಕ ಬರೆದವನು ಬೌದ್ಧ ಮತವನ್ನೆ ಒಪ್ಪದಿ
ದ್ದರೂ, ಬುದ್ಧನ ಜೀವನದ ಅಂಶಗಳ ಬಗೆಗೆ ಒಪ್ಪಿಗೆ ಮತ್ತು ತೀವ್ರ ಸ್ಪಂದನ ಇಲ್ಲದೆ
ಅವನು ನಾಟಕ ಬರೆಯಲು ಉದ್ಯುಕ್ತನಾಗಲಾರ. ಹಾಗೆಯೇ, ಪುರಾಣವನ್ನು ಪುರಾಣ
ವಾಗಿಯೇ ಓದುವುದು, ಗ್ರಹಿಸುವುದು ಬೇರೆ. ಅದನ್ನು ಈಗ, ನಮ್ಮ ಈ ಕಾಲದಲ್ಲಿ,
ನಾಟಕವಾಗಿ, ಯಕ್ಷಗಾನವಾಗಿ, ಆಶಯ ಸಹಿತ ಮಂಡಿಸುವುದು, ಅಭಿವ್ಯಕ್ತಿಸು
ವುದು ಬೇರೆ. ಯಕ್ಷಗಾನವು ರೂಪನಿಷ್ಠ ಕಲೆಯೇ ನಿಜವಾದರೂ, ಕೇವಲ ರೂಪ
ಪ್ರಧಾನ ಕಲೆಯಲ್ಲ. ಆಶಯವು ಗೌಣವಲ್ಲ. ಒಂದು ಪುರಾಣ ಕತೆ, ಜನರ ಮುಂದೆ
ನೃತ್ಯ, ಸ್ವತಂತ್ರವೂ ವಿಸ್ತ್ರತವೂ ಆದ ಮಾತುಗಾರಿಕೆಯೊಂದಿಗೆ ಮರು ಹುಟ್ಟು
ಪಡೆದು, ಜೀವಂತವಾಗಿ ನಡೆಯುವಾಗ, ಅದರಲ್ಲಿ ಪ್ರತಿಪಾದಿತವಾಗುವ ವಿಷಯ-
ಅಭಿಪ್ರಾಯ. ಆಶಯಗಳನ್ನು ಅಪ್ರಧಾನ ಎಂದು ಹೇಳುವಂತಿಲ್ಲ. ಇಲ್ಲಿ,
ಈಗಾಗಲೇ ನಮ್ಮ ಮನಸ್ಸನ್ನು ಆವರಿಸಿ, ಒಂದು ಬಗೆಯಿಂದ ಅಂಗೀಕಾರ
ಪಡೆದಿರುವ ಪುರಾಣವಿದೆ. ಕಲಾವಿದನ ಪ್ರತಿಭೆ, ಕಲೆಯ ರೂಪ ಅದಕ್ಕೆ ಜೀವ
ಕೊಡುತ್ತದೆ. ಹೀಗಿರುವಲ್ಲಿ ಆಶಯದ ಪ್ರಶ್ನೆ, ಸಂವೇದನಶೀಲ ಕಲಾವಿದನನ್ನು
ಕಾಡದಿರುವುದಿಲ್ಲ. ನಮಗೆ ಇಂದಿಗೆ ಉಪಾದೇಯವಲ್ಲದ ವಿಚಾರಗಳನ್ನು ರಂಗದಲ್ಲಿ
ನಾವು ಕಲಾನ್ಯಾಯದಿಂದ, ಅಥವಾ ಅದು ಕೇವಲ ಪುರಾಣ ಎಂದು ನಿರ್ಲಿಪ್ತತೆಯಿಂದ
ಪ್ರತಿಪಾದಿಸುತ್ತ ಹೋಗಲು ಸಾಧ್ಯವೆ? ಜನರ ಮೇಲೆ ಅದರಿಂದಾಗುವ ಪರಿಣಾಮ
ವನ್ನು ಅವಗಣಿಸಲು ಸಾಧ್ಯವೆ? ಅದೂ ಕೂಡ ಅದನ್ನು ಭಯಭಕ್ತಿಯಿಂದ ನಂಬುವ
ಜನರ ಮುಂದೆ ಅದನ್ನು ಮಂಡಿಸುವ ಸಂದರ್ಭದಲ್ಲಿ? ಇಲ್ಲಿ ಆಯ್ಕೆಯ ಪ್ರಶ್ನೆ,
ವಿವೇಕದ ಪ್ರಶ್ನೆ ಬಂದೇ ಬರುತ್ತದೆ; ಮತ್ತು ಕಲಾವಿದನಿಗೆ ಇಲ್ಲಿ ಪಂಥಾಹ್ವಾನ
ಗಳಿವೆ.
೩
ಹಾಗಾದರೆ, ಈ ಪ್ರಶ್ನೆಗಳನ್ನು ಸಾಂಪ್ರದಾಯಿಕ ಕಲಾರಂಗ ಹೇಗೆ ಸ್ವೀಕರಿ ಸಬಹುದು? ಪುರಾಣಗಳನ್ನು, ಪ್ರಾಚೀನ ಕಾವ್ಯಾದಿ ಆಕರಗಳನ್ನು ಕಾಲೋಚಿತ ವಾಗಿಲ್ಲ ಎಂದು ಸಾರಾಸಗಟಾಗಿ ನಿರಾಕರಿಸುವುದು ಸೂಕ್ತವೆ? ನಾವೀನ್ಯವನ್ನು ತರು ವುದಾದರೆ, ಹೇಗೆ? ಮತ್ತು ಅದರಿಂದಾಗಿ ಕಲಾಶೈಲಿಯ ಬದ್ಧತೆಗೆ ಬಾಧಕವುಂಟೆ? ವಸ್ತುವಿನ ಆಯ್ಕೆ ಮತ್ತು ನಿರ್ವಹಣದಲ್ಲಿ ಪ್ರಸ್ತುತತೆಯ ತತ್ವವನ್ನು ಹೇಗೆ ಅಳ