ವಿಷಯಕ್ಕೆ ಹೋಗು

ಪುಟ:ಪ್ರಸ್ತುತ.pdf/೨೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೨೦ / ಪ್ರಸ್ತುತ

ಬಂಧ, ಕಲೆಯ ಸ್ವರೂಪ, ದೇಶ ಕಾಲ ವ್ಯತ್ಯಾಸ ಕಲಾವಿದರಲ್ಲಿ ಬೆಳೆದು ಬಂದಿರುವ ನಂಬುಗೆ ಧೋರಣೆಗಳು, ವಿಮರ್ಶಕರ ಧೋರಣೆ, ಪ್ರೇಕ್ಷಕನ ಅಪೇಕ್ಷೆಗಳು, ಪ್ರಾಯೋಗಿಕ ಸಮಸ್ಯೆಗಳು, ಮೊದಲಾದ ಏಳು ಸುತ್ತಿನ ಕೋಟೆ'ಯೊಳಗೆ, ಕಲಾ ರಹಸ್ಯ ಬದ್ಧವಾಗಿದೆ. ಅದನ್ನು ಪುರಾಣದಿಂದ ಲೌಕಿಕಕ್ಕೆ ತರುವಾಗ ಈಯೆಲ್ಲ ಅಂಶಗಳ ಪರಿಗಣನೆ ಅವಶ್ಯ. ಇವುಗಳ ಪರಿಷ್ಕಾರ ಒಂದಕ್ಕೊಂದು ವಿರುದ್ಧವೂ ಆಗಬಹುದು. ಇದು, ಚಿಕ್ಕ ಕಬ್ಬಿಣದ ಗುಂಡುಗಳನ್ನು ವಿಭಿನ್ನ ದಿಕ್ಕುಗಳಲ್ಲಿ ದ್ವಾರಗಳಿರುವ ವಲಯಗಳ ಮೂಲಕ ಹಾಯಿಸಿ, ಪಥಕ್ಕೆ ತಂದು ನಿಲ್ಲಿಸುವ ಒಂದು ಆಟಿಕೆಯಂತಿದೆ. ಆದರೆ, ಲೌಕಿಕ ಪ್ರಸ್ತುತತೆಯ ಸಾಧ್ಯತೆಗಳೂ ಈ ಅಂಶಗಳಷ್ಟೆ ನಿಹಿತವಾಗಿಯೂ ಇವೆ. ಅವನ್ನು ಹಾಗೆ ರೂಪಿಸಬೇಕಾಗಿದೆ. ಈ ಕೆಲಸ ನಿಧಾನವಾದ, ಪರಿ

ಶ್ರಮದ, ಆಳವಾದ ಪರಿಜ್ಞಾನದ, ತಾಳ್ಮೆಯ ಮತ್ತು ಹಿಡಿತದ ಕಾರದಕ್ಷತೆ (Knack), ಅಪೇಕ್ಷೆಗಳ ಪಂಥಾಹ್ವಾನವನ್ನು ಮುಂದಿಡುವ ಕೆಲಸ. ಆದರೆ ಮಾಡಲೇ