ವಿಷಯಕ್ಕೆ ಹೋಗು

ಪುಟ:ಬಸವಣ್ಣನವರ ವಚನಸಂಪುಟ - ೧.pdf/೩೦೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೨೫೮ ೯೬೪ ಅಂಗದಲ್ಲಿ ಅರ್ಪಿತವಾದ ಸುಖವು
ಲಿಂಗದಲ್ಲಿ ಲೀಯವಾಯಿತ್ತೆಂದಡೆ
ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
ಕಾರಣವೇಕಯ್ಯಾ ಶರಣಂಗೆ ?
ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ?
ಕೂಡಲಸಂಗಮದೇವಾ,
ನಿಮ್ಮ ಶರಣರು ಕಾಯವಿಡಿದಿರ್ದು ನಿರ್ಮಾಯವಾಗಿರ್ಪುದ
ಹೇಳಯ್ಯಾ ನಿಮ್ಮ ಧರ್ಮ,
೯೬೫
ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ,
ಸಂದು ಭೇದವಳಿವ ಪರಿ ಎಂತು ಹೇಳಾ ?
ಅಂಗದಲ್ಲಿ ಸಂಗವ ಮಾಡಿಹೆನೆಂದಡೆ,
ಮುಂದುಗೆಡಿಸಿ ಕಾಡುವನು ಶಿವನು.
ಕಾಮವೆಂಬ ಬಯಕೆಯಲ್ಲಿ
ಅಳಲಿಸುವ ಬಳಲಿಸುವ ಶಿವನು.
ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ,
ಅಂಗದಿಂದ ಅತ್ತಲೋಸರಿಸಿ ಓಡುವನಯ್ಯಾ ಶಿವನು.
ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು.
ಕೂಡಲಸಂಗಮದೇವರ ಬೆರಸುವಡೆ,
ಭಿನ್ನ ವಿಲ್ಲದೆ ಕಲಿಯಾಗಿರಬೇಕು ಕೇಳಾ ಅಲ್ವಾ
.

ಅಂಗಲಿಂಗಸಂಗಸುಖಸಾರಾಯದನುಭಾವ
ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ.
ಏಕಲಿಂಗಪರಿಗ್ರಾಹಕನಾದ ಬಳಿಕ,
ಆ ಲಿಂಗನಿಷ್ಠೆ ಗಟ್ಟಿಗೊಂಡು,
ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ,
ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ
ತನ್ನ೦ಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷ್ಠೆಯನುಳ್ಳ