ಪುಟ:ಬೆಳಗಿದ ದೀಪಗಳು.pdf/೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪ್ರಕಾಶಕರ ಮಾತು

ನಾನು ಮನೋಹರ ಗ್ರಂಥಮಾಲೆಯ ಸಂಪಾದಕರಾದ ಶ್ರೀ. ಜಿ. ಬಿ. ಜೋಶಿಯವರ ಸಹಾಯದಿಂದ ದಿವಂಗತ ಕೆರೂರ ವಾಸುದೇವಾಚಾರ್ಯರು ಬರೆದ ಸಾಹಿತ್ಯವನ್ನೆಲ್ಲ ಒಂದು ಕ್ರಮಬದ್ಧವಾದ ರೀತಿಯಲ್ಲಿ ಪುಸ್ತಕರೂಪವಾಗಿ ಪ್ರಕಟಿಸಬೇಕೆಂದೆಣಿಸಿ ಈ“ವಾಸುದೇವ ಸಾಹಿತ್ಯರತ್ನಮಾಲೆ"ಯನ್ನು ಪ್ರಾರಂಭ ಸಿದ್ದೇನೆ. ಒಂಬತ್ತು ಚಾರಿತ್ರಿಕ ಕಥೆಗಳ ಸಂಗ್ರಹವಾದ “ ಬೆಳಗಿದ ದೀಪಗಳು " ಆ ಮಾಲೆಯಲ್ಲಿಯ ಆರನೆಯ ರತ್ನ.

ನಂಜನಗೂಡಿನ ಸತಿಹಿತೈಷಿಣೀ ಗ್ರಂಥಮಾಲೆಯ ಸಂಪಾದಿಕೆಯರಾದ ಶ್ರೀಮತಿ ತಿರುಮಲಾಂಬಾ ಅವರು ದಿವಂಗತ ವಾಸುದೇವಾಚಾರ್ಯರ ಮೇಲಿನ ತಮ್ಮ ಗೌರವದಿಂದ, ತಮ್ಮಲ್ಲಿದ್ದ 'ಸಚಿತ್ರ ಭಾರತ'ದ ಮೊದಲ ಸಂಪುಟವನ್ನು ಸಮಯಕ್ಕೆ ಒದಗಿಸಿಕೊಟ್ಟು ಸಹಾಯಮಾಡಿದ್ದಾರೆ ; ಅದಕ್ಕಾಗಿ ನಾನು ಅವರಿಗೆ ಉಪಕೃತನಾಗಿದ್ದೇನೆ. ಅಲ್ಲದೆ ಈ ಮೊದಲೆ ಸಚಿತ್ರ ಭಾರತದ ಮೂರೂ ಸಂಪುಟಗಳನ್ನು ಕೊಟ್ಟು ಗ್ರಂಥಪ್ರಕಟನೆಗೆ ಸಹಾಯ ಮಾಡಿದ ಹುಬ್ಬಳ್ಳಿಯ ಶ್ರೀ ಸರಸ್ವತಿ ವಿದ್ಯಾರಣ್ಯ ವಾಚನಾಲಯದ ಸಂಚಾಲಕರಿಗೂ ಮೂರನೆಯ ಸಂಪುಟವೊಂದನ್ನು ಕೊಟ್ಟ ಶ್ರೀಮಂಗಳವೇಢ ಶ್ರೀನಿವಾಸರಾಯರಿಗೂ ನಾನು ಋಣಿಯಾಗಿದ್ದೇನೆ.

––ಧೀರೇಂದ್ರ ನಾ, ಕರೂರ