ಪುಟ:ಯಶೋಧರ ಚರಿತೆ.pdf/೧೦೦

ವಿಕಿಸೋರ್ಸ್ದಿಂದ
Jump to navigation Jump to search
ಈ ಪುಟವನ್ನು ಪ್ರಕಟಿಸಲಾಗಿದೆ
೮೮
ಯಶೋಧರ ಚರಿತೆ
 


ಅಭಯರುಚಿಕುಮಾರಂ ಮಾರಿದತ್ತಂಗೆ ಹಿಂಸಾ
ರಭಸಮತಿಗೆ ಸಯ್ಪಂ ಪೇಳ್ದು ಧರ್ಮಕ್ಕೆ ತಂದೀ
ಶುಭಕಥನಮನತ್ಯಾನಂದದಿಂ ಕೇಳ್ವ ಭವ್ಯ-
ಪ್ರಭುಸಭೆಗೆಸೆದಿರ್ಕುಂ ಮಂಗಳಂ ಶ್ರೀವಿಲಾಸಂ೭೯೭೯. ಹಿಂಸೆಯಲ್ಲೇ ಮನಸ್ಸು ಮುಂದಾಗುತ್ತಿದ್ದ ಮಾರಿದತ್ತನಿಗೆ ಅಭಯರುಚಿ
ಕುಮಾರನು ಸರಿಯಾದ (ಪುಣ್ಯದ) ವಿಷಯವನ್ನು ಹೇಳಿ ಅವನನ್ನು ಧರ್ಮದ
ದಾರಿಗೆ ತಂದನು. ಇಂತಹ ಈ ಮಂಗಲಕರವಾದ ಕಥೆಯನ್ನು ಅತ್ಯಾನಂದದಿಂದ
ಕೇಳುವ ಭವ್ಯ ಪ್ರಭು ಸಭೆಗೆ ಮಂಗಲ ಸಂಪದ್ವಿಲಾಸವು ಶೋಭಿಸುತ್ತದೆ.