ಪುಟ:ರಂಗಣ್ಣನ ಕನಸಿನ ದಿನಗಳು.pdf/೧೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೯೮

ರಂಗಣ್ಣನ ಕನಸಿನ ದಿನಗಳು

ಮಾತನಾಡುತ್ತ, 'ಸಭೆಯನ್ನೇನೋ ಬೈರಮಂಗಲದಲ್ಲಿ ಸೇರಿಸಬಹುದು, ಆದರೆ ಗ್ರಾಮ ಪಂಚಾಯತಿಯವರು ಸಂಘವನ್ನು ಆಹ್ವಾನಿಸುವ ಬಗ್ಗೆ ನಿರ್ಣಯವನ್ನು ಮಾಡಿ ಕಚೇರಿಗೆ ಕಳಿಸಿ ಕೊಡಬೇಕು ಮತ್ತು ಊಟದ ವ್ಯವಸ್ಥೆಗೆ ಏರ್ಪಾಡು ಏನು ಎಂಬುದನ್ನು ತಿಳಿಸಬೇಕು ” ಎಂದು ಹೇಳಿದನು.

ಶ್ಯಾನುಭೋಗರು, “ ಇವರೆಲ್ಲ ಪಂಚಾಯತಿಯ ಮೆ೦ಬರುಗಳು ಸ್ವಾಮಿ ! ನಾನೇ ಅದರ ಚೇರಮನ್ನು , ನಾಳೆಯೇ ನಿರ್ಣಯ ಮಾಡಿ ಕಳಿಸುತ್ತೇವೆ, ಊಟದ ಏರ್ಪಾಟನ್ನು ತಾವು ಆಲೋಚಿಸಬೇಕಾದ್ದಿಲ್ಲ. ನಾವು ವ್ಯವಸ್ಥೆ ಮಾಡುತ್ತೇವೆ' ಎಂದರು.

ಶ್ಯಾನುಭೋಗರೇ! ನಾನು ಆವಲ ಹಳ್ಳಿಯಲ್ಲಿ ಪಟ್ಟ ಫಜೀತಿ ನಿಮಗೆ ತಿಳಿಯದು. ಎಷ್ಟು ಪಂಗಡಗಳು ! ಎಷ್ಟು ಅ೦ಕಣಗಳು ! ಅದರ ಸಹವಾಸ ಸಾಕಪ್ಪ ಎನ್ನಿಸಿತು. ಆ ಊಟದ ಏರ್ಪಾಟನ್ನು ಬಿಟ್ಟು ಬಿಡುವುದಕ್ಕೆ ಮನಸ್ಸಿಲ್ಲ. ಒಂದು ದಿನವಾದರೂ ಮೇಷ್ಟ್ರುಗಳು ಸಂತೋಷದಿಂದಿರಲಿ ಎಂದು ನನಗೆ ಆಶೆ. ಎರಡನೆಯದಾಗಿ, ಇಂಥಾ ಕೂಟಗಳಲ್ಲಿ ವಿನೋದ ಮತ್ತು ಸಲಿಗೆ ಇರುತ್ತವೆ. ಆಯಾ ಮೇಷ್ಟ್ರುಗಳ ನಿಜ ಸ್ವರೂಪ ಪ್ರಕಾರಕ್ಕೆ ಬರುತ್ತದೆ, ನಾವು ಬರಿಯ ಇನ್ ಸ್ಪೆಕ್ಟರುಮತ್ತು ಉಪಾಧ್ಯಾಯರು ಎಂಬ ನೌಕರಿಯ ಸಂಬಂಧ ತಪ್ಪಿ ನಾವು ಮನುಷ್ಯರು, ಸ್ನೇಹಪರರು ಎಂಬ ಭಾವನೆ ಬೆಳೆಯುತ್ತದೆ. ಪ್ರೇಮ ಗೌರವಗಳು ವೃದ್ಧಿಯಾಗುತ್ತವೆ. ಇವುಗಳ ಪರಿಣಾಮ : ನಮ್ಮಿಂದ ಹೇಳಿಸಿಕೊಳ್ಳದೆಯೇ ಮೇಷ್ಟ್ರುಗಳು ತಂತಮ್ಮ ಕೆಲಸಗಳನ್ನು ಚೆನ್ನಾಗಿ ಮಾಡಿಕೊಂಡು ಹೋಗುತ್ತಾರೆ. ಆದ್ದರಿಂದ ಈ ಏರ್ಪಾಟನ್ನು ಕೈ ಬಿಡಲು ಇಷ್ಟವಿಲ್ಲ.”

ಒಳ್ಳೆಯದು ಸ್ವಾಮಿ: ! ತಮ್ಮಿಷ್ಟದಂತೆಯೇ ನಡೆಸುತ್ತೇವೆ. ತಾವು ಖಂಡಿತವಾಗಿಯೂ ನಮ್ಮಲ್ಲಿ ಸಭೆ ಸೇರಿಸಬೇಕು.”

ಈ ಮಾತುಕತೆಗಳಾಗುತ್ತಿದ್ದಾಗ ಹೋಟಲು ಮಾಣಿ ಐದು ತಟ್ಟೆಗಳಲ್ಲಿ ತಿಂಡಿಯನ್ನೂ ಐದು ಲೋಟಗಳಲ್ಲಿ ಕಾಫಿಯನ್ನೂ ತಂದು ಮೇಜಿನ ಮೇಲಿಟ್ಟನು. ಆಗ ಶ್ಯಾನುಭೋಗರ ಜೊತೆಯಲ್ಲಿ ಬಂದಿದ್ದ