ಪುಟ:ರಂಗಣ್ಣನ ಕನಸಿನ ದಿನಗಳು.pdf/೧೧೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಾಜಕೀಯ ಮುಖಂಡರು

೯೯

ಮೆಂಬರುಗಳು, ಇವೇನು ಸ್ವಾಮಿ ! ನಂಗೆಲ್ಲ ಕಾಫಿ ತಿಂಡಿ ! ಚೆನ್ನಾಯಿತು !' ಎಂದರು. ರಂಗಣ್ಣನು, “ ನಿಮ್ಮ ಹಳ್ಳಿಗೆ ನಾನು ಬಂದರೆ ಬಾಳೆಯಹಣ್ಣು ಎಳನೀರು ಮೊದಲಾದುವುನ್ನು ತಂದುಕೊಡುತೀರಲ್ಲ ! ನಿಮಗೆ ಇಲ್ಲಿ ಕಾಫಿಯನ್ನಾದರೂ ನಾನು ಕೊಡ ಬೇಡವೇ ? ಎಂದು ಹೇಳಿದನು. ಗೌಡರು, ' ಸ್ವಾಮಿ ! ನಾವು ಬೆಳೆಯೋ ಪದಾರ್ಥ ತಮಗೆ ಕೊಡುತ್ತೇವೆ, ತಾವು ಹೊಟೇಲಿನಿಂದ ದುಡ್ಡು ಕೊಟ್ಟು ತರಿಸುತೀರಿ. ಅಷ್ಟೆ ನೋಡಿ ವೆತ್ಯಾಸ ' ಎಂದರು. ಅವರ ಜಾಣತನವನ್ನು ನೋಡಿ ರಂಗಣ್ಣನಿಗೆ ಆಶ್ಚರ್ಯವಾಯಿತು. ಉಪಾಹಾರವಾಯಿತು. ಬೈರಮಂಗಲದಲ್ಲಿ ಮುಂದಿನ ಸಭೆ ಎ೦ದು ತಾತ್ಕಾಲಿಕವಾಗಿ ಗೊತ್ತಾಯಿತು. ಪಂಚಾಯತಿಯ ನಿರ್ಣಯ ಬಂದಮೇಲೆ ತಾರೀಕನ್ನು ಖಚಿತವಾಗಿ ತಿಳಿಸುವುದಾಗಿ ರಂಗಣ್ಣನು ಹೇಳಿ ಅವರನ್ನು ಬೀಳ್ಕೊಟ್ಟನು.

ಅರ್ಧ ಗಂಟೆ ಕಳೆದಮೇಲೆ ಬೇರೆ ಕೇಂದ್ರದ ಉಪಾಧ್ಯಾಯ ಸಂಘದ ಕಾರ್ಯದರ್ಶಿ ಇಬ್ಬರು ಗೌಡರುಗಳನ್ನು ಜೊತೆ ಮಾಡಿಕೊಂಡು ಬಂದು ಇನ್ಸ್ಪೆಕ್ಟರಿಗೆ ನಮಸ್ಕಾರ ಮಾಡಿದನು. ಅವರು ಬಂದ ಉದ್ದೇಶ ಬೈರಮಂಗಲದವರ ಉದ್ದೇಶದಂತೆಯೇ ಇತ್ತು. ಅವರಿಗೂ ಸಮಯೋಚಿತವಾಗಿ ಉತ್ತರ ಹೇಳಿ, “ ಪಂಚಾಯತಿಯಿಂದ ನಿರ್ಣಯ ಮಾಡಿ ಕಳಿಸಿಕೊಡಿ, ಮುಂದೆ ಒಂದು ತಿಂಗಳಲ್ಲಿ ನಿಮ್ಮ ಹಳ್ಳಿಯಲ್ಲಿ ಸಭೆ ಸೇರಿಸುತ್ತೇವೆ' ಎಂದು ತಿಳಿಸಿ ಅವರನ್ನು ಕಳುಹಿಸಿ ಕೊಟ್ಟದ್ದಾಯಿತು. ಆ ವೇಳೆಗೆ ಶಂಕರಪ್ಪ ಬಂದು, ' ಸ್ವಾಮಿಯವರಿಗೆ ನಾಳೆ ಮೀಟಿಂಗಿದೆ. ಬೆಂಗಳೂರಿಗೆ ಹೋಗಬೇಕೆಂದು ಹೇಳಿದ್ದಿರಿ' ಎಂದು ಜ್ಞಾಪಿಸಿದನು.

ರಂಗಣ್ಣನು ಪ್ರಯಾಣದ ವ್ಯವಸ್ಥೆಯನ್ನು ಮಾಡಿಕೊಂಡು ರೈಲು ಹತ್ತಿ ಹೊರಟನು. ಒ೦ದೆರಡು ಸ್ಟೇಷನ್ನುಗಳನ್ನು ರೈಲು ದಾಟಿದಮೇಲೆ ಮುಂದಿನ ಸ್ಟೇಷನ್ನಿನಲ್ಲಿ ಕಲ್ಲೇಗೌಡರು ರೈಲು ಹತ್ತಿದರು. ಅವರು ದೊಡ್ಡ ಜಮೀನ್ದಾರರು, ಒಕ್ಕಲಿಗರ ಮುಖಂಡರಲ್ಲೊಬ್ಬರು ; ಮತ್ತು ನ್ಯಾಯವಿಧಾಯಕ ಸಭೆಯ ಸದಸ್ಯರು. ದಿವಾನರು ಮತ್ತು ಕೌನ್ಸಿಲರು ಗಳ ಹತ್ತಿರ ಅವರ ಓಡಾಟ ಹೆಚ್ಚು. ಸರ್ಕಾರದ ನೌಕರರು - ಭಾರಿ ಸಂಬಳ ತಗೆಯುವ ಅಧಿಕಾರಿಗಳು ಸಹ-ಅವರನ್ನು ಕಂಡರೆ ಹೆದರು