ಪುಟ:ರಂಗಣ್ಣನ ಕನಸಿನ ದಿನಗಳು.pdf/೧೧೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ರಾಜಕೀಯ ಮುಖಂಡರು

೧೦೧

ಸಿದ್ಧವಾಗಿದೆ. ನಮ್ಮ ಸ್ಕೂಲುಗಳು ಬಹಳ ಹೀನಸ್ಥಿತಿಯಲ್ಲಿವೆಯಲ್ಲ. ನಮ್ಮ ಉಪಾಧ್ಯಾಯರಲ್ಲಿ ತಿಳಿವಳಿಕೆ ಮತ್ತು ಶಿಸ್ತು ಇಲ್ಲವಲ್ಲ. ಅವುಗಳನ್ನು ಏರ್ಪಡಿಸಿ ಯತ್ಕಿಂಚಿತ್ ಸೇವೆ ಸಲ್ಲಿಸೋಣವೆಂದು ಇದ್ದೇನೆ. ಈಗ ತಿಪ್ಪೂರು ದೊಡ್ಡ ರಸ್ತೆಯ ಪಕ್ಕದಲ್ಲಿರುವ ವಿಷಯ ನಿಮಗೆ ತಿಳಿದಿದೆ. ಅಲ್ಲಿಯ ಸ್ಕೂಲು ಕಟ್ಟಡ ನಿಮಗೆ ಸೇರಿದ್ದು. ತಿಂಗಳಿಗೆ ಹತ್ತು ರೂಪಾಯಿ ಬಾಡಿಗೆ ಬೇರೆ ತೆಗೆದುಕೊಳ್ಳುತ್ತಾ ಇದ್ದೀರಿ. ಆ ಕಟ್ಟಡಕ್ಕೆ ರಿಪೇರಿ ಆಗಿ ಎಷ್ಟೋ ವರ್ಷಗಳಾಗಿವೆ. ನೆಲ ಕಿತ್ತು ಹೋಗಿದೆ, ಗೋಡೆಗಳು ಬಿರುಕು ಬಿಟ್ಟಿವೆ, ಮೇಲ್ಛಾವಣಿ ಕುಗ್ಗಿ ಹೋಗಿ ಯಾವಾಗಲೋ ಮಕ್ಕಳ ಮೇಲೆ ಬೀಳುತ್ತದೆ. ನಮ್ಮ ಇಲಾಖೆಯ ದೊಡ್ಡ ದೊಡ್ಡ ಅಧಿಕಾರಿಗಳೆಲ್ಲ ಅದನ್ನು ಆಕ್ಷೇಪಿಸಿದ್ದಾರೆ. ತಮಗೂ ಸಮಾಚಾರ ತಿಳಿದಿದೆ. ಆದರೂ ರಿಪೇರಿ ಮಾಡಿ ಕೊಟ್ಟಿಲ್ಲ. ತಮ್ಮಂಥವರು ನಮ್ಮೊಡನೆ ಸಹಕರಿಸದಿದ್ದರೆ ಹೇಗೆ ? :

ಏನಾಗಿದೆ ಆ ಕಟ್ಟಡಕ್ಕೆ ? ದಿವಾನರಿಗೆ ಅಲ್ಲಿ ಅಟ್ ಹೋಮ್ (At-home) ಕೊಟ್ಟರೆ ಕುಣಿಯುತ್ತಾ ಬಂದು ಕೂತು ಕೊತಾರೆ !?

ಆ ಮಾತುಗಳನ್ನು ಕೇಳಿ ರಂಗಣ್ಣನಿಗೆ ಬಹಳ ವ್ಯಸನವಾಯಿತು. ದಿನವೂ ಬೆಳಗಾದರೆ ದಿವಾನರ ಮನೆಯ ಬಾಗಿಲು ಕಾಯುತ್ತಾ ಚಿಲ್ಲರೆ ಪಲ್ಲರೆ ಸಹಾಯಕ್ಕಾಗಿ ಅನುಸರಿಸಿಕೊಂಡು ಹೋಗುವ ಈ ಮುಖಂಡರು ಅವರ ಬೆನ್ನ ಹಿಂದೆ ಎಷ್ಟು ಲಾಘವದಿಂದ ಅವರನ್ನು ಕಾಣುತ್ತಾರೆ ! ಆಡುತ್ತಾರೆ ! ಇಂಥವರೆಲ್ಲ ಮುಖಂಡರೆಂದು ಪ್ರತಿಷ್ಠೆ ಗಳಿಸಿರುವುದರಿಂದ ದೇಶ ಹೀನಸ್ಥಿತಿಗೆ ಬರುತ್ತಿದೆ, ನಿಜವಾದ ಮುಖಂಡರು ತಲೆಯೆತ್ತಿಕೊಂಡಾಗ ಇವರೆಲ್ಲ ಬಾಲ ಮುದುರಿಕೊಂಡು ಕು೦ಗುಟ್ಟುತ್ತ ಓಡುವ ನಾಯಿಗಳಂತೆ ಪಲಾಯನ ಮಾಡುತ್ತಾರೆ. ಎರಡು ದಿನ ಇವರ ಪ್ರಾಬಲ್ಯ; ನಡೆಯಲಿ. ಇದೂ ಒಂದು ನಾಟಕ- ಎಂದು ಮನಸ್ಸಿನಲ್ಲಿ ಹೇಳಿಕೊಳ್ಳುತ್ತಾ ಸುಮ್ಮನಾದನು. ಕಲ್ಲೇಗೌಡರಿಗೆ ಬಹಳ ಸಂತೋಷವಾದಂತೆ ಕಂಡಿತು.

ಇನ್ ಸ್ಪೆಕ್ಟರು ಬೆಂಗಳೂರಿಗೋ ?

ಹೌದು. ಅಲ್ಲಿ ಕೆಲಸವಿದೆ.