ಪುಟ:ರಂಗಣ್ಣನ ಕನಸಿನ ದಿನಗಳು.pdf/೩೪೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪ್ರಕರಣ ೩೦

ತಿಮ್ಮರಾಯಪ್ಪನ ಮೆಚ್ಚಿಕೆ

ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು ; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರಿದನು. ಮಾರನೆಯ ದಿನ ಶಂಕರಪ್ಪನಿಗೆ ಬಹಳವಾಗಿ ಸಮಾಧಾನ ಮಾಡಬೇಕಾಯಿತು. ಅವನು, 'ಸ್ವಾಮಿ ! ನನ್ನ ಜೀವಮಾನದಲ್ಲಿ ಅಂಥ ಸುಖ ಸಂತೋಷದ ದಿನಗಳನ್ನು ಮತ್ತೆ ನಾನು ಕಾಣುವುದಿಲ್ಲ, ನಾನೂ ಹಲವು ಅಪರಾಧಗಳನ್ನು ಮಾಡಿದೆ. ತಾವು ಒಳ್ಳೆಯ ಮಾತಿನಲ್ಲಿಯೇ ಬುದ್ಧಿ ಹೇಳಿ ತಿದ್ದಿ ನಡೆಸಿಕೊಂಡು ಬಂದಿರಿ. ಊಟದ ಹೊತ್ತಿನಲ್ಲಿ ಪಕ್ಕದಲ್ಲಿಯೇ ಮಣೆ ಹಾಕಿಸಿ ಕೂಡಿಸಿಕೊಂಡು ಸ್ನೇಹಿತನಂತೆ ಉಪಚಾರ ಮಾಡುತ್ತ ಆದರಿಸಿದಿರಿ. ನಾನು ಸಲಿಗೆಯಿಂದ ಏನಾದರೂ ಹೆಚ್ಚು ಕಡಮೆ ನಡೆದುಕೊಂಡಿದ್ದರೆ ಮನ್ನಿಸಬೇಕು' ಎಂದು ಹೇಳಿದನು. ರಂಗಣ್ಣ ಯಥೋಚಿತವಾಗಿ ಅವನಿಗೆ ಉತ್ತರ ಹೇಳಿ ಗೋಪಾಲನ ಕೈಗೆ ಐದು ರುಪಾಯಿಗಳನ್ನು ಇನಾಮಾಗಿ ಕೊಟ್ಟನು. ಅವರಿಬ್ಬರ ರೈಲು ಖರ್ಚಿಗೆ ಬೇರೆ ಹಣವನ್ನೂ ಕೊಟ್ಟು ಕಳಿಸಿದನು.

ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ತಿಮ್ಮರಾಯಪ್ಪ ತನ್ನ ಹೆಂಡತಿ ಮತ್ತು ಮಕ್ಕಳೊಡನೆ ರಂಗಣ್ಣನ ಮನೆಗೆ ಬಂದನು. ಆ ದಿನ ಅವರಿಗೆ ಭೋಜನ ರಂಗಣ್ಣನ ಮನೆಯಲ್ಲಿ ಏರ್ಪಾಟಾಗಿತ್ತು. ರಂಗಣ್ಣನು ಬಹಳ ಸಂತೋಷದಿಂದಲೂ ಸಂಭ್ರಮದಿಂದಲೂ ಅವರನ್ನೆಲ್ಲ ಸ್ವಾಗತಿಸಿದನು. ರಂಗಣ್ಣನ ಹೆಂಡತಿ ತಿಮ್ಮರಾಯಪ್ಪನ ಹೆಂಡತಿಯನ್ನು ಕರೆದುಕೊಂಡು ಒಳಕೊಟಡಿಗೆ ಹೋದಳು. ಸ್ವಲ್ಪ ಕಾಫಿ ಸಮಾರಾಧನೆ ಆಗಿ ಆ ಬಳಿಕ ಊಟಗಳಾಗಿ ಹಾಲಿನಲ್ಲಿ ಎರಡು ಸಂಸಾರದವರೂ ಸೇರಿ ತಾಂಬೂಲವನ್ನು ಹಾಕಿಕೊಳ್ಳುತ್ತಾ ಮಾತನಾಡತೊಡಗಿದರು. ಎಲ್ಲವೂ ಜನಾರ್ದನ