ರಕ್ಷಾಶತಕ
ಶ್ರೀಮದ್ ಗಂಗಾತರಂಗಾವೃತ ವಿಮಲಜಟಾಜೂಟ ಸರ್ವೇಶ ಗೌರೀ
ವಾಮಾ೦ಗಾಲಿಂಗನಾಲಿಂಗಿತ ಘನಮಹಿಮೋದಾರಚಾರಿತ್ರ ಚಂಚತ್
ಸೋಮಾರ್ಧೋತ್ತಂಸ ಸಂಸಾರಜಲಧಿವಡಬಾಕಾರ ಸಾಕಾರ ಭಕ್ತಿ
ಪ್ರೇಮಾಂಭೋರಾಶಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧ ‖
ತಿರುಗುತ್ತೆಂಬತ್ತುನಾಲ್ಕುಂ ದಶಶತಶತಜನ್ಮಂಗಳೊಳ್ ಪುಟ್ಟಿ ನಿಮ್ಮೊಂ -
ದಿರವಂತಿಂತುಟೆಂದೇನುಮನಳೆಯದೆ ಮಣ್ಣಾಗಿ ಕಲ್ಲಾಗುತುಂ ದು -
ರ್ಧರಗುಲ್ಮಂ ಭೂರಿಭೂಜಂ ಪುಳು ಖಗ - ಮೃಗವಾಗುತ್ತುಮೆಂತಕ್ಕೆ ಬಂದೆಂ
ನರಜನ್ಮಕ್ಕಯ್ಯ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೨ ‖
ಬಸಿಕೊಳ್ ಮಾಸೊತ್ತಿ ನೆತ್ತರ್ ಪಸರಿಸಿ ಕರುಳಿಂ ಸುತ್ತಿ ಮೂತ್ರಂ ಪುರೀಷಂ
ಮುಸುಕಿಟ್ಟೆಲ್ಲಂಗದೊಳ್ ಕೆತ್ತಿರಲುದರಶಿಖಿಜ್ವಾಲೆಯಿಂದತ್ತಮಿತ್ತಂ
ಕುಸಿಯುತ್ತುಂ ಪಟ್ಟುವೊಂದುಜ್ಜುಗದೊಳೆ ಮರಣಾವಸ್ಥೆಯಂ ತಾಳ್ದಿ ಬಂದಾ-
ಯಸ೧ಮಂ೧ ಚಿತ್ತಯ್ಸಿ೨ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೩ ‖
ಏನೆಂಬೆಂ ಬಾಲ್ಯದೊಳ್ ಮೇಲರಿಯದೆ ಮಲದಿಂ ಮೂತ್ರದಿಂ ಶ್ಲೇಷ್ಮದಿಂ ತೋ
ಯ್ದಾನಾರೆಂದೇನುಮಂ ಭಾವಿಸದೆ ಬಧಿರನಂತಂಧನಂತಿರ್ದು ಮತ್ತಂ
ನಾನಾ ಭೋಜ್ಯಕ್ಕೆ ಪಕ್ಕಾಗುತೆ ಚರಿಸಿದೆನಿನ್ನಾರೆನಿನ್ನಾರೆನಯ್ಯೋ
ಆನಂದಾಂಭೋಧಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪ ‖
ಪಿರಿದೊಂದಜ್ಞಾನದಿಂ ಯೌವನವಿಕಳತೆ ಮೈದೋರೆಕಾಂತಾನಿವಾಸಾಂ -
ತರದೊಳ್ ಶ್ವಾನಂಗೆ ಹೀ ಹಂದಿಗೆ ಕಪಿಗೆಣೆಯಾಗಿರ್ದು ಬೇಳಾಗುತುಂ ತತ್
೧-೧ಕ್ಕಂ(A)೨ ಯ್ಸು(ಆ)