ಕರಣಕ್ಕಾಳಾಗಿ ಹಾಳಾಗುತೆ ಬಲುದೊರೆವೋದೆಂ ಬಳಲ್ದೆಂ ಬಿಗುರ್ತೆಂ
ಮರುಳಾದೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫ ‖
ಸ್ತ್ರೀಮಾತ್ರಂ ನೇತ್ರದತ್ತಲ್ ಸುಳಿದೊಡೆ ಮನವಿರ್ಭಾಗಮಾಗುತ್ತೆ ತಾಪ ೧ -
ಸ್ತೋಮಂ ಕೈಮೀರಿ ಲಜ್ಜಾರಸಮುಡುಗಿ ವಿವೇಕಂ ಕಳಲ್ದೋಡಿ ರಾಗಂ
ಕೈಮಿಕ್ಕಾನಾವನೇನೆಂದರೆಯದ ತೆರನಂ ಮಾಡುತಿರ್ದಪ್ಪುದಿಂತೀ
ಕಾಮಂ ಕಾಮಾರಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದನ್ನಂ ‖ ೬ ‖
ಏಪೊಳ್ತುಂ ಗಾತ್ರಮಂ ಶೋಷಿಸುತೆ ಕರಣಮಂ ಕಂದಿಸುತ್ತುಂ ನಿರರ್ಥ೦
ತಾಪವ್ರಾತಕ್ಕೆ ಪಕ್ಕಾಗಿ ಸುತಮಳಗುಣಸ್ತೋಮಮಂ ಖಂಡಿಸುತ್ತುಂ
ಪಾಪಪ್ರಾರಂಭಕರ್ತೃತ್ವಮನೆನಗೆನಿಸಂ ಮಾಡುತಿರ್ದಪ್ಪುದಿಂತೀ
ಕೋಪಂ ಶಾಂತಾತ್ಮ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭ ‖
ಧನಮಂ ಸ್ತ್ರೀ ಪುತ್ರರಂ ಕೆಮ್ಮನೆ ಕಿಡುವ ಗೃಹ ಕ್ಷೇತ್ರಮಂ ಮಿತ್ರರಂ ವ -
ಸ್ತ್ರನಿಕಾಯಾಕಲ್ಪಮಂ ಮುಂತೆನಗೆನುತೆ ಕರಂ ಕಾಂಕ್ಷೆಯಿಂ ಕೂರ್ಮೆಯಿಂದೆ -
ಳ್ಳನಿತುಂ ಪುಣ್ಯಕ್ಕೆ ಮಾಡಲ್ ಕುಡದೆ ಕಿಡಿಸುವೀ ಲೋಭಮಂ ದಾನಿ ನೀಂ ಛೇ -
ದನೆಯಂ ಮಾಡುತ್ತೇ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೮ ‖
ದೇಹೋಹಂ ಎಂದು ಮಕ್ಕ೨ಳ್ ಮನೆ೨ ಧನವಳಿಯಲ್ ಕಂದಿಸುತ್ತುರ್ಬುವಾಶಾ -
ವ್ಯೂಹಕ್ಕಿಂಬಾಗಿಸುತ್ತುಂ ನೆನೆದು ಮರುಗಿಸುತ್ತುಂ ಮುಸುಂಕಿರ್ದ ಮಿಥ್ಯಾ -
ಸ್ನೇಹಾರಂಭಾನುಕೂಲಂ ನುಡಿಗೆಡೆಗುಡದಿರ್ದಪ್ಪುದೊತ್ತಂಬದಿಂದೀ
ಮೋಹಂ ಮೋಹಾರಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೯ ‖
ಅದನೇನೆಂಬೆಂ ಗುಣವ್ರಾತಮನೆ ಪಡೆಯುತುಂ ವಿದ್ಯೆಯಂ ಖಂಡಿಸುತ್ತುಂ
ಕದಡುತ್ತುಂ ಚಿತ್ತಮಂ ಬುದ್ದಿಯನುಅದಕೀಯಟ್ಟುತ್ತೆ ಕಾಯ್ದಪ್ಪುದೆನ್ನೀ
ಮದಮಾತಂಗಂ ಮಹಾರೋಹಕ ನಿಜಚರಣಸ್ತಂಭದೊಳ್ ಕಟ್ಟಿ ಸೈತಿ -
ಟ್ಟು ದಯಾಂಭೋರಾಶಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೦ ‖
೧ ಪಂ(ಆ), ೨-೨ ಳನ (ಆ)
ಪುಟ:ಶತಕ ಸಂಪುಟ.pdf/೪೨
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೨
ಶತಕ ಸಂಪುಟ