ಪರರೈಶ್ವರ್ಯಕ್ಕಸೂಯಂಗೊಳುತೆ ಪರರ ಬಲ್ಪಿಂಗೆ ಸಂತಾಪಿಸುತ್ತುಂ
ಪರರಿಂದಂ ಮಿಕ್ಕು ಬಾಳಲ್ ಬಯಸಿ ಕುದಿದು ಬೇಳಾಗಿ ಬೆಂಬೀಳುತಿರ್ದುಂ
ಪರಚಿಂತಾಕ್ಷೋಭೆಯಿಂ ಮತ್ಸರದೊಡನೆ ಕರಂ ಗಾಸಿಯಾದಪ್ಪೆನೀ ಮ-
ತ್ಸರಮಂ ತರ್ಗೊತ್ತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೧ ‖
ಮನವೆನ್ನಂ ದುರ್ವಿಕಾರಕ್ಕೆಳೆದಪುದು ಮನಂ ಮಾನಮಂ ನುರ್ಗಿದತ್ತೀ
ಮನವಾಶಾವಹ್ನಿಯೊಳ್ ನೂಂಕಿದಪುದು ಮನವೀ ಮಾಯೆಯಂ ಬಿಟ್ಟು ನಿಮ್ಮಂ
ನೆನೆಯಲ್ ತಾನೀಯದಯ್ಯೋ ಶಿವನೆ ಭವನೆ ಕಾರುಣ್ಯವಾರಾಶಿಯೆನ್ನೀ
ಮನಮಂ ಸಯ್ತಿಟ್ಟು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೨ ‖
ಪ್ರತ್ಯಕ್ಷಂ ಸತ್ತು ಹೋಗುತ್ತಿದೆ ನರನಿಕರಂ ೧ತಾನಿದಂ೧ಕಂಡು ಕಂಡುಂ
ನಿತ್ಯತ್ವಂಬೆತ್ತ ಪಾಂಗಿಂ ಪಳಿವ ಮುಳಿವ ಕಾಮಿಪ್ಪ ಕೋಪಿಪ್ಪ ಲೋಭಿ-
ಪ್ಪತ್ಯಂತಂ ಗರ್ವಿಪೆನ್ನೀ ಮನಕೆ ಪರಮ ವೈರಾಗ್ಯಮಂ ಕೊಟ್ಟು ಸತ್ಯಂ
ಸತ್ಯಂ ಸತ್ಯಾತ್ಮ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೩ ‖
ಇನಿತುಂ ವೈರಾಗ್ಯದತ್ತಲ್ ನೆನೆಯದೆ ಮದದತ್ತಲ್ ಮಹಾಮೋಹದತ್ತಲ್
ಧನದತ್ತಲ್ ಧಾನ್ಯದತ್ತಲ್ ಸತಿಸುತಪಿತರತ್ತಲ್ ಸದಾ ಲೋಭದತ್ತಲ್
ನೆನೆಯುತ್ತಿರ್ದಪ್ಪುದೆನ್ನೀ ಮನವಿದನೆಡೆಗೊಂಡಳ್ಕಲೆಂ ದೇವ ನೀವಿಂ-
ತೆನಿತುಂ ತೀವಿರ್ದು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೪ ‖
ಸುವಿಚಾರಕ್ಕೊರ್ಮೆಯುಂ ೨ಸೇರದು೨ ನಡೆಯಿಪುದತ್ಯಾಗ್ರಹವ್ಯಾಪ್ತಿಯಿಂ ತಾ-
ನವಿಚಾರಕ್ಕೆಂದೊಡೆಂಟಂ ನಿಮಿರ್ವುದು ಬಯಲ೦ ಭಾವಿಸುತ್ತಿರ್ಪದಾತ್ಮೋ-
ದ್ಭವಮೂಲಚ್ಛೇದನೋಪಾಯವನೆಣಿಸದು ಮದ್ಬುದ್ದಿಯೀ ಬುದ್ದಿಯಂ ಶಂ-
ಭುವೆ ಸಂತಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೫ ‖
ಇನಿತುಂ ತಾನಲ್ಲದಾರಂ ಬಗೆಯದು ಮದಮಂ ಗರ್ವಮಂ ಕೂಡಿಕೊಂಡಿ-
ರ್ದೆನಿತುಂ ಮುಂಗಾಣದತ್ಯುದ್ಧತತರಮುಖವಾಗಿರ್ಪುದೋರಂತೆ ವಿದ್ವ-
೧-೧ X(ಆ), ೨-೨ ರದ(ಆ)
ಪುಟ:ಶತಕ ಸಂಪುಟ.pdf/೪೩
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೩