ನಡುಗುತ್ತುಂ ಕೆಮ್ಮಿ ಕೊಮ್ಮುತ್ತೊಡಲನೊಲೆಯುತುಂ ಮುಗ್ಗಿ ಬಳ್ದುಂ ನಿತಾಂತಂ
ಕೆಡೆವಲ್ಲಿಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೩೮ ‖
ತೆರಪಿಲ್ಲಂ ಸಾವು ಭೋಂಕೆಂದಡಸಿದ ಪದದೊಳ್ ಭಕ್ತಿಸಂಧಾನವೆಲ್ಲಿ
ತ್ತಲೆವೆಲ್ಲಿತ್ತರ್ಥವೆಲ್ಲಿತ್ತಮಳಗುಣವದೆಲ್ಲಿತ್ತೋ ಸದ್ಧರ್ಮವೆಲ್ಲಿ
ತೊರಪೆಲ್ಲಿತ್ತೋಜೆಯಲ್ಲಿತ್ತತುಳಬಲಮದೆಲ್ಲಿತ್ತದಕ್ಕಂಜಿ ನಿಮ್ಮಂ
ಮಣೆವೊಕ್ಕೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೩೯ ‖
ಕಿವಿಕಣ್ಗಳ್ ಕೆತ್ತು ಬಾಯೊರ್ಗುಡಿಸಿ ಕರೆಯ ಪೆರ್ಗೂರಿಡುತ್ತೆಯೆ ಬಂದಿ-
ರ್ದವರಂಜಲ್ ಶ್ವಾಸಮೇರುತ್ತಿಳಿಯುತುಮಿರೆಯಂತಲ್ಲಿ ಕೈ ಕಾಲ್ಗಳೊಳ್ ಜೀ-
ವವನಂಟಂಟೆಲ್ಲಿಯುಂ ಕಾಣದೆಯಕಟಕಟಯ್ಯೋ ಗಡಾ ಸತ್ತನೆಂಬೀ
ಪವಣಿಂದಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೦ ‖
ದೇವಾ ನಾನೇವೆನೆಂದೆಂದಬಲೆಯಳುತೆ ತಂ ಪೋಗೆ ಪಿಂದಂ ಜನಂಗಳ್ಸಾ
ವೀತಂಗಾಯ್ತೆನುತುಂ ಮರುಗಿ ಬರೆ ತನುಜಾಳಿಯುಂ ಬಂಧುವರ್ಗ೦
ತಾವೆತ್ತಂ ಮತ್ತೆ ಶೋಕ೦ ಮುಸುಕಿ ನಡೆಯೆ ತತ್‌ಕಷ್ಟದೊಳ್ ಕಾಷ್ಠರೂಪಿ
ಬೇವಲ್ಲಿಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೧ ‖
ಜನನೀಗರ್ಭಾಂಡದಿಂ ಬರ್ಪತಿವಿಷಮತರಕ್ಲೇಶಮಂ ಬಾಲ್ಯದೊಳ್ ಮಾ-
ಳ್ಪ ನಿಷೇಧವ್ರಾತಮಂ ಯೌವನವಿಕಳತೆಯಂ ಮುಪ್ಪಿನಾ ಹೇಯಮಂ ಸಾ-
ವನಿರೋಧಸ್ತೋಮಮಂ ಕಂಡಲಸಿದೆನದಿರ್ದೆಂ ಪೇಸಿದೆಂ ನೊಂದೆನೋರಂ
ತನುಗೆಟ್ಟೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೨ ‖
೧ಆನೆಂತೆಂತಕ್ಕೆ೧ ಬಂದೆಂ ಮನುಜಭವದೊಳೆಂತಕ್ಕನೂನಾಂಗಸಂಗಂ
ತಾನಾಯ್ತೆಂತಕ್ಕೆ ಕೂಡಿತ್ತಘಟಿತಘಟಿತಂ ಸತ್ಕುಲಂ ಮತ್ತಮೆಂತ-
ಕ್ಕಾ ನಿಮ್ಮಂಘ್ರಿದ್ವಯಕ್ಕಾನೆರಗಿದೆನಿನಿತಾಯಾಸದಿಂ ಬಂದೆನಯ್ ಸ-
ತ್ಯಾನಂದಜ್ಯೋತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೩ ‖
ಶರಣಾರ್ ನೀಂ ಕಾವರಾರ್ ನೀಂ ಗತಿ-ಮತಿ-ಪತಿಯಾರ್ ನೀಂ
ಗುರುವಾರ್ ನೀಂ ಗೋತ್ರವಾರ್ ನೀಂ ಜನನಿ-ಜನಕರಾರ್ ನೀಂ