ಪುಟ:ಶತಕ ಸಂಪುಟ.pdf/೪೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ



ಮಹಾಬಂಧುವಾರ್ ನೀಂ
ವರರಾರ್ ನೀಂ ವಂದ್ಯರಾರ್‌ ನೀನೆನಗತಿಹಿತರಾರ್ ನೀಂ ಮಹಾದೇವ ನಿನ್ನಿಂ
ಪೆರರಾರಾರ್ ನೀನೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೪ ‖

ಮರುಳಾರಾಂ ಮತ್ತನಾರಾಂ ಮತಿವಿರಹಿತನಾರಾಂ ಬುಧದ್ವೇಷಿಯಾರಾಂ
ಪರನಾರಾಂ ಕರ್ಮಿಯಾರಾಂ ಖಲಜನಸಖನಾರಾಂ ಸದಾಕ್ರೂರವಾಕ್ಪಾ-
ಮರನಾರಾಂ ನೀಚನಾರಾ೦ ವಿಷಯವಿಕಳನಾರಾ೦ ಮಹಾಕ್ಷುದ್ರರೆನ್ನಿಂ
ಪರರಾರಾರಾನೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೫ ‖

ಗುರು ನೀಂ ತ್ವಚ್ಛಿಷ್ಯನಾಂ ನಿರ್ಮಳಘನನಿಧಿ ನೀಂ ಕ್ಷುದ್ರನಾಂ ದಾನಿ ನೀನಾ
ತುರನಾಂ ನಿಷ್ಕಾಮಿ ನೀಡಿ ಕಾಮದ ನೆಲೆವನೆಯಾಂ ತಂದೆ ನೀಂ ಪುತ್ರನಾಂ
ಶಾಂ-
ತರಸಂ ನೀಂ ಕ್ರೋಧಿಯಾಂ ಪುಣ್ಯದ ಫಲತತಿ ನೀಂ ಪಾಪಿಯಾಂ ಸ್ವಾಮಿ



ನೀಂ ಕಿಂ-
ಕರನಾಂ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೬ ‖

ಖಳನಂ ದುರ್ಬೋಧನಂ ದುರ್ವಿಷಯನಿರತನಂ ದುಷ್ಟನಂ ಧೂರ್ತನಂ ದು-
ರ್ಬಳನಂ ದುರ್ಮೋಹಿಯಂ ದುರ್ಜನಜನಹಿತನಂ ಸಜ್ಜನದ್ವೇಷಿಯಂ ಸಂ-
ಚಳನಂ ದೋಷಾರ್ತಿಯಂ ದುರ್ಧರತರವಿರಸಕ್ರೀಡನಂ ಕೋಪಿಯಂ ವ್ಯಾ-
ಕುಳನಂ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೭ ‖

ಅಳಿಪಂ ಸನ್ಮಾನಹೀನಂ ಸುಜನಜನವಿದೂರಂ ವೃಥೋತ್ಸಾಹಿ ಮೂರ್ಖ೦
ಖಳನತ್ಯಾಸ್ವಾದಿ ವಿದ್ಯಾವಿನಯನಯವಿಹೀನಂ ಕುಜಾತಿಪ್ರಸಂಗಂ
ಗಳಪಂ ಚಾರ್ವಾಕನಜ್ಞಂ ಗುಣರಹಿತನೆನಿಪ್ಪೆನ್ನನೊಲ್ದೀಶಂ ನೀಂ ವ್ಯಾ-