ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 'ವಿಶ್ವ ಕನ್ನಡ ಸಮ್ಮೇಳನ'ದ ಅಂಗವಾಗಿ ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿರುವ ಸಾಹಿತಿಗಳ ಮಹತ್ವದ ಕೃತಿಗಳನ್ನು ಓದುಗರಿಗೆ ಒದಗಿಸಬೇಕೆಂಬ ಸದಾಶಯ ಹೊಂದಿರುತ್ತದೆ. ಈ ಯೋಜನೆಯಡಿ ಸುಮಾರು ೧೦೦ ಕೃತಿಗಳನ್ನು ಪ್ರಕಟಿಸಲು ಉದ್ದೇಶಿಸಿದೆ.
ಈ ಕೃತಿಗಳನ್ನು ಆಯ್ಕೆಮಾಡಲು ಖಾತ ವಿದ್ವಾಂಸರಾದ ಪ್ರೊ. ಎಲ್.ಎಸ್ ಶೇಷಗಿರಿರಾವ್ ರವರ ಅಧ್ಯಕ್ಷತೆಯಲ್ಲಿ ನಾಡಿನ ಹೆಸರಾಂತ ಸಾಹಿತಿ | ವಿದ್ವಾಂಸರುಗಳನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದೆ. ಈ ಆಯ್ಕೆ ಸಮಿತಿಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಗೆ ಕನ್ನಡ ಸಾಹಿತ್ಯದ ವಿವಿಧ ಕಾಲಘಟ್ಟಗಳಲ್ಲಿ ಬಂದ ಪ್ರಾತಿನಿಧಿಕ ಕೃತಿಗಳನ್ನು ಆಯ್ಕೆ ಮಾಡಿರುತ್ತದೆ. ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸರ್ಕಾರದ ಪರವಾಗಿ ವಂದನೆಗಳು ಸಲ್ಲುತ್ತವೆ. ಈ ಪುಸ್ತಕಗಳನ್ನು ಹೊರತರಲು ಅನುಮತಿ ನೀಡಿ ಸಹಕರಿಸಿದ ಎಲ್ಲಾ ಲೇಖಕರು ಹಾಗೂ ಹಕ್ಕುದಾರರುಗಳಿಗೆ ನನ್ನ ಕೃತಜ್ಞತೆಗಳು ಸಲ್ಲುತ್ತವೆ. ಕನ್ನಡದ ಮೇರುಕೃತಿ ಸಾಹಿತ್ಯ ಮಾಲಿಕೆಯನ್ನು ಓದುಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.
/ ದಿನಾಂಕ ೧೭.೦೧.೨೦೧೧ (ರಮೇಶ್ ಬಿ.ಝಳಕಿ) ಸರ್ಕಾರದ ಕಾರ್ಯದರ್ಶಿಗಳು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ