ಕುಳನಂ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೮ ‖
ಸತತಂ ನಿಂದಾಕರಂ ನಿಷ್ಠುರನತಿಕೃಪಣಂ ಸಜ್ಜನದ್ವೇಷಿ ದುಶ್ಚಿಂ-
ತಿತಚಿತ್ತಂ ಜ್ಞಾನದೂರಂ ಪರಹಿತರಹಿತಂ ಭಕ್ತಿವಿಶ್ವಾಸಹೀನಂ
ಸ್ತುತಿಲೋಲಂ ರಾಗಶೀಲಂ ಸುಕೃತವಿಮುಖನಾನಂದಹೀನಂ ವಿಮಾನಂ
ನತಕಲ್ಪೋರ್ವೀಜ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೪೯ ‖
ಅತಿದೀನಂ ಧೂರ್ತಮಾನಂ ಪರಧನವನಿತಾಧೀನನಾನಂದಹೀನಂ
ಮತಿಶೂನ್ಯಂ ಡಂಭಮಾನ್ಯಂ ವಿಷಯವಿಸರದನ್ಯಂ ವಿಮೂಢರ್ಗನನ್ಯಂ
ನುತದೂರಂ ದುಃಖಸಾರಂ ಸುಜನಜನಘನಕ್ರೂರನೀ ಭೂಮಿಭಾರಂ
ಸತತಂ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೦ ‖
ಖರರೂಪಂ ಪಾಪದೀಪಂ ಕುಜನಜನಕಲಾಪಂ ಸದಾರಬ್ಧ ಕೋಪಂ
ಸ್ಥಿರಭಂಗಂ ದುಷ್ಪ್ರಸಂಗಂ ವಿಷಯಕುಸುಮಭೃಂಗಂ ದುರಾಶಾಂತರಂಗಂ
ವರಧೂರ್ತಂ ದಂಭಕಾರ್ತಂ ಖಳಜನಸಲಿಲಾವರ್ತನಜ್ಞಾನಗರ್ತಂ
ಕರುಣೀ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೧ ‖
ಘನವೆನ್ನೊಳ್ ಮಾಣದೀ ಕಾಮದ ವಿಕಳತೆಯೀ ಕ್ರೋಧವೀ ಲೋಭವೀ ದು-
ರ್ಮನವೀ ದುಶ್ಚಿಂತೆಯೀ ದುರ್ಮದದ ಮಮತೆಯೀ ಮೋಹವೀಯಾಸೆಯೀ
ದು-
ರ್ಜನಸಂಗಪ್ರೇಮವೀ ಮತ್ಸರದ ಮಸಕವೀ ದುಃಖಸಂಸ್ತೋಮಮಂ ಛೇ-
ದನೆಯಂ ಮಾಡುತ್ತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೨ ‖
ಸಲೆ ಮಾಯಾಮೋಹವಾಚ್ಛಾದಿಸೆ ನೆರೆ ಧೃತಿಗೆಟ್ಟೆಂ ವೃಥಾ ಧಾತುಗೆಟ್ಟೆಂ
ಪೊಲಗೆಟ್ಟೆಂ ಮುಂದುಗೆಟ್ಟೆಂ ನೆನೆಯದೆ ಮತಿಗೆಟ್ಟೆಂ ಕರಂ ಬುದ್ಧಿಗೆಟ್ಟೆಂ
ನೆಲೆಗೆಟ್ಟೆಂ ನೀತಿಗೆಟ್ಟೆಂ ಮರೆದು ಮಿಗೆ ಮನಂಗೆಟ್ಟೆನಾನುರ್ಬುಗೆಟ್ಟೆಂ
ತಲೆಗೆಟ್ಟೆಂ ತಂದೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೩ ‖
ನೆನೆವೆಂ ಸ್ವಪ್ನೋಪಮಸ್ಮಾರಕುವಿಷಯದ ಸಂಯೋಗಮಂ ಭೋಗಮಂ ಕೆ-
ಪುಟ:ಶತಕ ಸಂಪುಟ.pdf/೫೦
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೧೦
ಶತಕ ಸಂಪುಟ