ಪುಟ:ಶತಕ ಸಂಪುಟ.pdf/೫೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
೧೧


ಮ್ಮನೆ ನಿಮ್ಮೀ ಭಕ್ತಿಯೊಂದಂ ನೆನೆಯನೊಸೆದು ಸತ್ಯತ್ವ-ನಿತ್ಯತ್ವಮಂ ಯಾ-
ತನೆಗೊಂಡರ್ಥಾರ್ಥದಿಂದನ್ಯರನನುದಿನಮೋರಂತೆ ಬೋಧಿಪ್ಪ ದುರ್ಬೋ
ಧನನಯ್ಯೋ ನೋಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೪ ‖
ಏಕೆನ್ನಂ ನೋಡದಯ್ಯೋ ಭವ ಭವ ಭವದೊಳ್ ತಂದೆ ಚಂದ್ರಾವತಂಸಾ
ಏಕೆನ್ನಂ ಮಾಯೆಯಿಂದಂ ಶಿವ ಶಿವ ಶಿವ ಬೆಳ್ಮಾಡುತಿರ್ದಪ್ಪೆ ಈಶಂ
ಏಕೆನ್ನಂ ಕಾಲನಿಂದಂ ಹರ ಹರ ಹರ ನೀಂ ಕಾಡುತಿರ್ದಪ್ಪೆ ದೇವಾ
ಲೋಕೈಕಾರಾಧ್ಯ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೫ ‖

ಭವವೇಕಾನೇಕೆ ಸತ್ತ್ವಾದಿಗುಣದ ಪುದುವಾಳೇಕದಾನೇಕೆ ಕಾಮೋ-
ತ್ಸವವೇಕಾನೇಕೆ ತಾಪತ್ರಿತಯದ ಪೊಡೆಗಿರ್ಚೇಕದಾನೇಕೆ ಕೋಪೋ-
ದ್ಭವವೇಕಾನೇಕೆ ಕರ್ಮದ್ವಯದ ಕಡುದೊಡಂಕೇಕದಾನೇಕೆ ದೇವಾ
ಭವಕರ್ಮಧ್ವಂಸಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೬ ‖

ಅದು ಸಂಸಾರಾಬ್ಧಿಯಂ ದಾಂಟಿಸುವುದದು ದುರಾಚಾರ-ದುರ್ಬುದ್ಧಿಯಂ
ಕೀ-
ಳ್ವುದು ನಿತ್ಯಂ ಶ್ರೀಗುರುಶ್ರೀಪದಸರಸಿಜಮಂ ತೋರ್ಪುದಾಹಾ ಬಳಿಕ್ಕಂ-
ತದು ಲಿಂಗಾರೂಢನಂ ಮಾಡುವುದು ಶರಣಸಾಂಗತ್ಯವಾ ಸಂಗಮಂ ಪಿಂ-
ಗದವೊಲ್ ನೀಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೭


ಹರಭಕ್ತರ್ ಬಂದೊಡುರ್ಬುತ್ತವರ ಚರಣಮಂ ಕಣ್ಗಳೊಳ್ ಕಂಠದೊಳ್ ಪೇ-
ರುರದೊಳ್ ಭಾಳಾಗ್ರದೊಳ್ ದೋರ್ಯುಗದೊಳುಭಯಗಂಡಂಗಳೊಳ್


ತಾಳ್ದುಮೆತ್ತು-
ತ್ತೊರೆಯುತ್ತಪ್ಪುತ್ತೆ ಹಿಗ್ಗುತ್ತತುಳಸುಖದೊಳಾಳುತ್ತುಮೇಳುತ್ತೆ ಬಾಳ್ದಿ-
ರ್ಪಿರವಂ ನೀನಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೮ ‖