ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೫೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೨
ಶತಕ ಸಂಪುಟ


ಮೃಡಭಕ್ತವ್ರಾತವಾನಂದದೊಳಿದಿರ್ವರೆ ಕಂಡಾರ್ತದಿಂ ಸ್ನೇಹದಿಂ ಸೈ-
ಗೆಡೆದೆನ್ನೈಶ್ವರ್ಯವೆನ್ನಾಗಿನ ತವನಿಧಿಯೆನ್ನಾಯುವೆನ್ನೆಲ್ಲಮುಂ ನಿ-
ಮ್ಮಡಿಗಳ್ ಸರ್ವಸ್ವಮುಂ ನಿಮ್ಮಡಿಗಳೊಡವೆ ಆ೦ ಕಾಪಿನಾಳೆಂದು ಚಿತ್ತಂ-
ಗುಡುತಿರ್ಪಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೫೯ ‖

ಮುದದಿಂದಂ ನಿಮ್ಮ ಪೂಜಾರಚನೆಯನೊಲವಿಂ ಕಂಡು ಸರ್ವಜ್ಞನಿಂತೊ-
ಪ್ಪಿದನಾನಂದಾಬ್ಧಿಯಿಂತೊಪ್ಪಿದನಹಿಧರನಿಂತೊಪ್ಪಿದಂ ಶಂಭುವಿಂತೊ-
ಪ್ಪಿದನೆಂದಶ್ರುಪ್ರವಾಹಂ ಪರಿಯಿಡೆ ಪುಳಕಂ ಪೊಣ್ಮೆ ಸಂಸ್ತೋತ್ರಮಂ ಮಾ-
ಳ್ಪುದನೆನ್ನೊಳ್ ಕೂಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೦ ‖

ಅದನಿನ್ನೇನೆಂಬೆನಾಹಾ ಗುರುತರಸುಖಮಂ ತುಂಗಭದ್ರಾನದೀತೀ-
ರದೊಳಿರ್ದುತ್ತುಂಗಹಸ್ತಂ ಮುಕುಲಿತನಯನಂ ಭೂತಿಸರ್ವಾಂಗನಾಗಿ-
ರ್ದು ದಯಾಂಭೋರಾಶಿ ಗಂಗಾಧರ ಪುರಹರ ಸರ್ವೇಶನೆಂದುರ್ಬುವಾ
ಸೌ-
ಖ್ಯದ ಪೆರ್ಚಂ ಕೊಟ್ಟು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೬೧ ‖

ಎನಗಿನ್ನೆಂತೆಂಬ ಚಿಂತಾಪ್ರತತಿ ಹರೆದು ಹಾಕಿತ್ತು ಕಾಮಕ್ಕೆ ಮೋಹ-
ಕ್ಕನುಗೆಯ್ವೊಂದಾಗ್ರಹಂ ಕಟ್ಟನೆ ಕರಗಿತ್ತು ಮಾತ್ಸರ್ಯದೊಂದುಜ್ಜುಗಂ ಕ-
ರ್ರನೆ ಕಂದಿತ್ತತ್ತಮಿತ್ತಂ ಮಿಗೆ ಮಸಗುವ ಕೋಪಂ ಕರಂ ತರ್ಗಿ ಕುರ್ಗಿ-
ತ್ತೆನಿಪಂದಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೨ ‖

ತಳಿರಿಂ ಪೂವಿಂ ಫಲವ್ರಾತದಿನೊರಗುವ ಚೂತವ್ರಜಚ್ಛಾಯೆಯೊಳ್ ಕೋ-
ಮಳಹಂಸಸ್ತೋಮವಾಮಭ್ರಮರಕುಳವಿಕಾಸಾಬ್ಜಕಾಸಾರದೊಳ್ ನಿ-
ರ್ಮಳನಿಷ್ಪಂದಪ್ರಕಾಶಸ್ಥಳದೊಳಮಳಲಿಂಗಾರ್ಚನಾಸಕ್ತ ಚಿತ್ತೋ-
ಜ್ಜ್ವಳನಾಗಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೩ ‖

ಅತುಳಸ್ವಚ್ಛಾಂಬುವಿಂ ಮಜ್ಜನಕೆರೆದು ನವೀನಪ್ರಸೂನಪ್ರತಾನ-
ದ್ಯುತಿ ಸುತ್ತಲ್ ಸುತ್ತಿ ನಿಮ್ಮಂ ಸವಿನುಡಿ ಕವಿಯಲ್ ಬಣ್ಣಿಸುತ್ತಶ್ರು ಮೀಸಲ್