ಪುಟ:ಶತಕ ಸಂಪುಟ.pdf/೫೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೩


ನುತರೋಮಾಂಚಂಗಳೇಳಲ್ ಬೆಮರ್ವನಿ ನೆಗೆಯಲ್ ಗದ್ಗದಂ ಪೊಣ್ಮೆ ಪೂಜಾ-
ತತಿಯಂ ಮಾಳ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೪ ‖

ನೆನೆಯುತ್ತುಂ ಪೂಜಿಸುತ್ತಂ ಚರಣದೊಳಲರುತ್ತುಂ ಮರಲ್ದೀಕ್ಷಿಸುತ್ತುಂ
ಮುನಿಯುತ್ತುಂ ಮುದ್ದಿಸುತ್ತುಂ ತೊನೆದು ತವಕಿಸುತ್ತುರ್ವುತುಂ ಗರ್ವಿಸುತ್ತುಂ
ಜಿನುಗುತ್ತುಂ ಜೀವಿಸುತ್ತುಂ ಧಿಣಿಧಿಣಿರವದಿಂದಾಡುತುಂ ಪಾಡುತಿರ್ಪೊಂ-
ದನುರಾಗಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೫ ‖

ಎನಿಸುಂ ಮತ್ತನ್ಯದೈವಕ್ಕೆರಗದ ಸಿರಮುಂ ನೇತ್ರಮುಂ ಶ್ರೋತ್ರಮುಂ ಮ-
ನ್ಮನಮುಂ ಮದ್ಬುದ್ದಿಯುಂ ಮತ್ಕರತಳಯುಗಮುಂ ಜಿಹ್ವೆಯುಂ


ಘ್ರಾಣಮುಂ ಮಿ-
ಕ್ಕಿನ ಸರ್ವಾಂಗಂಗಳುಂ ನಿಮ್ಮಯೆ ದೆಸೆಗೆ ಕರಂ ಚೇಷ್ಟಿಸುತ್ತೊರ್ಮೆಯುಂ ನಿ-
ಲ್ವಿನಮೆನ್ನೊಳ್ ಕೂಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೬ ‖

ಮುದದಿಂ ತ್ವತ್‌ಕೀರ್ತಿಯಂ ಕೇಳ್ವೆಡೆಯೊಳತುಳರೋಮಾಂಚದಿಂ ಸ್ಪಂದದಿಂ
ಗ-
ದ್ಗದದಿಂ ಸ್ವೇದಂಗಳಿಂ ಕಂಪನದಿನೊಲವಿನಿಂ ಲೀಲೆಯಿಂ ಲೋಭದಿಂ ಸ-
ನ್ಮುದದಿಂ ಸಂತೋಷದಿಂ ಶಾಶ್ವತ ಸುಖಮುಖದಿಂ ಶೈವಸಾಮ್ರಾಜ್ಯ ಸಮ್ಯಕ್-
ಪದವಾಂತಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೭ ‖

ಹರನಾಮಂ ಕರ್ಣಮಂ ತಾಗಿದ ಸಮಯದೊಳಾನಂದದಿಂದುರ್ಕಿ ರೋಮಾಂ-
ಕುರವೆಳ್ದಶ್ರುಪ್ರವಾಹಂ ಗಳಗಳನಿಳಿತಂದಂಗವಲ್ಲಾಡಿ ಭಿನ್ನ-
ಸ್ವರದಿಂದಂ ಗದ್ಗದಂ ಪುಟ್ಟುತೆ ಬೆಮರ್ವನಿಗಳ್ ಪೊಣ್ಮೆ ಸಲ್ಲೀಲೆಯಿಂದಿ-
ರ್ಪಿರವಂ ನೀನಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೮ ‖

ಮನದೊಳ್ ವಾಕ್ಯಂಗಳೊಳ್ ನೋಳ್ಪೆಡೆಗಳೊಳೊಲವಿಂ ಮಾಳ್ಪ ಕಜ್ಜಂಗಳೊಳ್