ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೫೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೪
ಶತಕ ಸಂಪುಟ


ಕಾ-
ನನದೊಳ್ ಕಾಮಂಗಳೊಳ್ ತಣ್ಣೆಳಲೊಳೆ ಬಿಸಿಲೊಳ್ ಜಾಗ್ರದೊಳ್


ಸ್ವಪ್ನದೊಳ್ ಮೂ-
ರ್ಚ್ಛನೆಯೊಳ್ ದಾರಿದ್ರ್ಯದೊಳ್ ಸಂಪದದೊಳೆ ಸುಖದೊಳ್ ದುಃಖದೊಳ್


ದೇವ ನಿಮ್ಮಂ
ನೆನೆಯುತ್ತಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೬೯ ‖

ಭರದಿಂದಂ ಭೀತಿಯಿಂದಂ ಶರಣವಚನದಿಂದಾಸೆಯಿಂ ಭಾಷೆಯಿಂದ-
ಚ್ಚರಿಯಿಂ ಡಂಭಿಂ ವೃಥಾಳಾಪದಿನಸವಸದಿಂ ಕಾಮದಿಂ ಕೋಪದಿಂ ಕೂ-
ರ್ಪರ ದಾಕ್ಷಿಣ್ಯಂಗಳಿಂ ಖ್ಯಾತಿಯಿನನುದಿನವೆಲ್ಲಂದದಿಂ ದೇವ ನಿಮ್ಮಂ
ಸ್ಮರಿಯಿಪ್ಪಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೦ ‖

ಚದುರಿಂದಂ ವೇಷಮಂ ತೋರದೆ ನಿಜಗುಣಮಂ ಬೀರದತ್ಯುಷ್ಣಮಂ ಹೇ-
ಅದೆ ಡಂಭಿಂ ಸಾರದೆಂತುಂ ಶರಣವಚನಮಂ ಮೀರದತ್ತಿತ್ತಲುಂ ಜಾ-
ಅದೆ ಬೇರೊಂದಿಚ್ಛೆಯಿಂ ಕೀಚಿದೆ ಪರವಶದಿಂ ತಾರದೀ ಭಕ್ತಿಯಂ ಮಾ-
ಅದೆ ಬಾಳ್ವಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೧ ‖

ಇದನೊಲ್ವೆಂ ದೈನ್ಯಮಂ ಸೂಡದೆ ಪರವಧುವಂ ನೋಡದೇನೊಂದುಮಂ
ಬೇ-
ಡದೆಯಾರಂ ಮಿಥ್ಯೆಯಿಂ ಕಾಡದೆ ಪರಸುಖದೊಳ್ ಬಾಡದುದ್ರೇಕದೊಳ್ ಕೋ-
ಡದೆ ಪಾಪಾಂಭೋಧಿಯೊಳ್ ಕೂಡದೆ ಚಪಳತೆಯಂ ನೀಡದತ್ಯಾಶೆಯಂ ಮಾ-
ಡದೆ ಬಾಳ್ವಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೨ ‖
ಸತಿ ಕಾರುಣ್ಯಂ ಕುಮಾರಂ ಮತಿ ಸಖನುರು ಸತ್ಯಂ ಪ್ರಧಾನಂ ವಿವೇಕಂ
ಸ್ತುತಿ ಭಂಡಾರಂ ಸುಧರ್ಮ೦ ಕರಿತುರಗರಥಾಖ್ಯಂ ನಿರಾಶಾ-ಸ್ವದೇಶಂ